ಮೋದಿ ಸಾಧನೆ ಶೂನ್ಯ: ಮತ್ತಿಕಟ್ಟಿ ಆರೋಪ


Team Udayavani, May 30, 2017, 1:20 PM IST

hub3.jpg

ಧಾರವಾಡ: ಈ ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳ ಪೈಕಿ ಶೇ.90ರಷ್ಟನ್ನು ರಾಜ್ಯ ಸರ್ಕಾರ ಈಡೇರಿಸಿದೆ. ಆದರೆ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಒಂದೇ ಒಂದೂ ಭರವಸೆ ಈಡೇರಿಸಿಲ್ಲ ಎಂದು ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ ಆಪಾದಿಸಿದರು. 

ಸೋಮವಾರ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಪೂರ್ವದಲ್ಲಿ ಜನತೆಗೆ ನೀಡಿದ ಭರವಸೆಗಳನ್ನು ರಾಜ್ಯ ಸರ್ಕಾರ ಈಡೇರಿಸಿದೆ. ಅದೇ ರೀತಿ ಕೇಂದ್ರದಲ್ಲಿ 2014ರಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ತನ್ನ ಚುನಾವಣೆ ಪ್ರಣಾಳಿಕೆಯಲ್ಲಿ ಹೇಳಿದ ಯಾವುದೇ ಒಂದು ಯೋಜನೆ ಜಾರಿಗೆ ತಂದಿಲ್ಲ.

ಪ್ರತಿ ರಾಜ್ಯದ ಚುನಾವಣೆ ಎದುರಾದಾಗ ಹೊಸದೊಂದು ಯೋಜನೆ ಜಾರಿ ತರುವುದಾಗಿ ಹೇಳಿ ಘೋಷಣೆ ಮಾಡುವ ಚಾಳಿ ಮುಂದುವರಿಸಿಕೊಂಡು ಹೋಗುತ್ತಿದೆ. ಜಾತಿ ಹಾಗೂ ಧರ್ಮದ ಹೆಸರಿನಲ್ಲಿ ಮತ ಪಡೆಯುವ ತಂತ್ರವನ್ನು ಅಮಿತ್‌ ಷಾ ಹಾಗೂ ಪ್ರಧಾನಿ ಮೋದಿ ಮಾಡುತ್ತಿದ್ದಾರೆ ಎಂದು ಅಪಾದಿಸಿದರು. 

ಕಪ್ಪು ಹಣವನ್ನು ತಂದು ಪ್ರತಿಯೊಬ್ಬನ ಖಾತೆಗೆ 15 ಲಕ್ಷ ರೂ. ಹಾಕುತ್ತೇನೆ ಎಂಬ ಭರವಸೆ ಈದುವರೆಗೂ ಈಡೇರಿಲ್ಲ. ಈ ಕುರಿತು ಸ್ವಿಸ್‌ ಬ್ಯಾಂಕ್‌ನಲ್ಲಿ ಹಣವಿಟ್ಟಿರುವವರ ಪಟ್ಟಿ ತರಿಸಿದ್ದರೂ ಅದರಲ್ಲಿ ಬಿಜೆಪಿ ಬೆಂಬಲಿತರ ಹೆಸರುಗಳೆ ಇದ್ದುದ್ದರಿಂದ ಅದನ್ನು ಬಿಟ್ಟಿದ್ದಾರೆ. 

ತಮಿಳನಾಡು ಮುಖ್ಯಮಂತ್ರಿ ಜಯಲಲಿತಾ ಮರಣ ಹೊಂದಿದ ಸಂದರ್ಭದಲ್ಲಿ ಅಣ್ಣಾ ಡಿಎಂಕೆ ಪಕ್ಷದಲ್ಲಿ  ಒಡಕು ಮೂಡಿಸಿ ಅಲ್ಲಿ ರಾಷ್ಟ್ರಪತಿ ಆಳ್ವಿಕೆ ತರಲು ಮುಂದಾಗಿದ್ದು ದೊಡ್ಡ ಸಾಧನೆಯಾಗಿದೆ ಎಂದು ವ್ಯಂಗ್ಯವಾಡಿದರು. ರಾಜ್ಯದಲ್ಲಿನ ಬಿಜೆಪಿ ಮುಖಂಡರಿಗೆ ರಾಜ್ಯ ಸರ್ಕಾರ  ಮಾಡಿದ ಸಾಧನೆ ಕಾಣುತ್ತಲೇ ಇಲ್ಲ. ಬದಲಿಗೆ ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಕೇಂದ್ರ ಸರ್ಕಾರವೇ ಮಾಡಿದೆ ಎಂದು ಹೇಳಿಕೊಂಡು ತಿರುತ್ತಿದ್ದಾರೆ.

ಯಡಿಯೂರಪ್ಪನವರು  ಬಿಜೆಪಿಯ ಒಬ್ಬ ಹಿರಿಯ ನಾಯಕರಾಗಿ ಬೇರೆ ಪಕ್ಷದ ಮುಖಂಡರ ಬಗ್ಗೆ ಲಘುವಾಗಿ ಮಾತನಾಡುವುದು ಅವರಿಗೆ ಶೋಭೆ ತಂದು ಕೊಡುವುದಿಲ್ಲ. ನಿಜವಾಗಿ ಕಾಂಗ್ರೆಸ್‌ನ  ಪ್ರಯತ್ನದಿಂದ ಇಂದು ಐಐಟಿ ಧಾರವಾಡಕ್ಕೆ ಬಂದಿದೆ. ಮುಂದಿನ ಚುನಾವಣೆಯಲ್ಲಿ 150 ಸೀಟುಗಳನ್ನು ಗೆಲ್ಲುತ್ತೇವೆಂದು ಭ್ರಮ ನಿರಸದಲ್ಲಿದ್ದಾರೆ ಎಂದು ಆಪಾದಿಸಿದರು. 

ಟಾಪ್ ನ್ಯೂಸ್

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.