ಔಷಧ ವ್ಯಾಪಾರಿಗಳ ಪ್ರತಿಭಟನೆಗೆ ಉತ್ತಮ ಪ್ರತಿಕ್ರಿಯೆ


Team Udayavani, May 31, 2017, 12:56 PM IST

medicals-bandh.jpg

ಬೆಂಗಳೂರು: ಆನ್‌ಲೈನ್‌ನಲ್ಲಿ ಔಷಧ ವ್ಯಾಪಾರ ಮಾಡುವುದನ್ನು ಖಂಡಿಸಿ ಮಂಗಳವಾರ ಔಷಧ ವ್ಯಾಪಾರಿಗಳು ನಡೆಸಿದ ಪ್ರತಿಭಟನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆನ್‌ಲೈನ್‌ ಮೂಲಕ ಔಷಧ ಮಾರಾಟಕ್ಕೆ ನೀಡಿರುವ ಅವಕಾಶ ರದ್ದುಪಡಿಸಬೇಕು.

ವೈದ್ಯರು ನೀಡುವ ಔಷಧ ಚೀಟಿಯನ್ನು ಔಷಧ ಮಳಿಗೆಯ ಸಿಬ್ಬಂದಿ ಸ್ಕ್ಯಾನ್‌ ಮಾಡಿ ಸೆಂಟ್ರಲ್‌ ಇ-ಪೋರ್ಟಲ್‌ಗೆ ಅಪ್‌ಲೋಡ್‌ ಮಾಡಬೇಕೆಂಬ ನಿರ್ಧಾರದಿಂದ ಔಷಧ ಮಳಿಗೆ ಸಿಬ್ಬಂದಿಗೆ ಹೊರೆಯಾಗಲಿದೆ. ಹೀಗಾಗಿ ಕೇಂದ್ರ ಸರ್ಕಾರ ಈ ಕ್ರಮದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿ ಅಖೀಲ ಭಾರತ ಔಷಧ ವ್ಯಾಪರಿಗಳ ಸಂಘನೆಗಳು ದೇಶಾದ್ಯಂತ ಬಂದ್‌ಗೆ ಕರೆ ನೀಡಿದ್ದವು. ಇದಕ್ಕೆ ರಾಜ್ಯದ ಔಷಧ ವ್ಯಾಪಾರಿಗಳ ಸಂಘ ಸೇರಿದಂತೆ ಬೆಂಗಳೂರು ನಗರದ ಔಷಧ ವ್ಯಾಪಾರಿಗಳು ಬೆಂಬಲ ವ್ಯಕ್ತಪಡಿಸಿದ್ದರು.

ಬೆಂಗಳೂರಿನ 8500 ಖಾಸಗಿ ಔಷಧಾಲಯ ಸೇರಿದಂತೆ ರಾಜ್ಯದ 28 ಸಾವಿರಕ್ಕೂ ಅಧಿಕ ಔಷಧಾಲಯ ಸಂಪೂರ್ಣ ಮುಚ್ಚಿದ್ದರಿಂದ ತುರ್ತು ಔಷಧಕ್ಕಾಗಿ ಕೆಲವೆಡೆ ಸಾರ್ವಜನಿಕರು ಪರದಾಡಿದರು. ಸರ್ಕಾರಿ ಆಸ್ಪತ್ರೆಯೊಂದಿಗೆ ಸೇರಿಕೊಂಡಿರುವ  ಔಷಧಾಲಯಗಳು, ಖಾಸಗಿ ಆಸ್ಪತ್ರೆಯ ಔಷಧಾಲಯಗಳು ಎಂದಿನಂತೆ ತೆರೆದಿದ್ದವು. ಆಸ್ಪತ್ರೆಯಿಂದ ಪ್ರತ್ಯೇಕ ಇರುವ ಖಾಸಗಿ ಔಷಧಾಲಯಗಳು ಮಾತ್ರ ಮುಚ್ಚಿದ್ದವು.

ಔಷಧ ವ್ಯಾಪಾರಿಗಳ ಪ್ರತಿಭಟನೆಯಿಂದ ಜನ ಸಾಮಾನ್ಯರಿಗೆ ಯಾವುದೇ ಸಮಸ್ಯೆಯಾಗಬಾರದು ಎಂಬ ಉದ್ದೇಶದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರವೇ ಕೆಲವು ಪರ್ಯಾಯ ವ್ಯವಸ್ಥೆ ಮಾಡಿತ್ತು. ಬೆಂಗಳೂರಿನ 6 ವಿಭಾಗಗಳಲ್ಲಿ ನೋಡಲ… ಅಧಿಕಾರಿಗಳ ನೇಮಕ ಮಾಡಿದ್ದು, ತುರ್ತು ಸಹಾಯ ವಾಣಿ ನೆರವು ಕಲ್ಪಿಸಿತ್ತು. ಹಾಗೇ ಸರ್ಕಾರಿ ಆಸ್ಪತ್ರೆಯ ಹೊರ ಭಾಗದಲ್ಲಿ ಔಷಧ ಮಾರಾಟಕ್ಕೆ ಬೇಕಾದ ವ್ಯವಸ್ಥೆ ಮಾಡಿದ್ದರು. ಬುಧವಾರದಿಂದ ಎಂದಿನಂತೆ ಔಷಧ ಅಂಗಡಿಗಳು ತೆರೆದಿರುತ್ತವೆ.

ಟಾಪ್ ನ್ಯೂಸ್

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

udupi

udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.