ಓಲಾ-ಉಬೇರ್ ಮಾದರಿ ಆಂಬ್ಯುಲನ್ಸ್ ಸಂಪರ್ಕ ಆ್ಯಪ್
Team Udayavani, May 31, 2017, 3:16 PM IST
ಹುಬ್ಬಳ್ಳಿ: ಗ್ರಾಮೀಣ ಭಾಗದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ನೂತನ ಆ್ಯಪ್ ಅಭಿವೃದ್ಧಿ ಪಡಿಸುವ ಮೂಲಕ ತುರ್ತು ವೈದ್ಯಕೀಯ ಸೇವೆಗೆ ಅನುಕೂಲ ಕಲ್ಪಿಸಲು ಮುಂದಾಗಿದ್ದಾರೆ. ವರೂರಿನ ನವಗೃಹ ಕ್ಷೇತ್ರದ ಆಚಾರ್ಯ ಗುಣಧರನಂದಿ ಮಹಾರಾಜ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಮೈಸೂರಿನ ವಿ.ಎಸ್.ಟೆಕ್ನಾಲಜೀಸ್ ಸಹಯೋಗದಲ್ಲಿ ಆಂಬ್ಯುಲನ್ಸ್‌ಗಳನ್ನು ಸಂಪರ್ಕಿಸುವ ಆ್ಯಪ್ ಅಭಿವೃದ್ಧಿ ಪಡಿಸಲು ಸಜ್ಜಾಗಿದ್ದಾರೆ.
ಕಾಲೇಜಿನ ಆವರಣದಲ್ಲಿ ಆರಂಭಗೊಳ್ಳುವ ಇನ್‌ಕ್ಯುಬೇಶನ್ ಸೆಂಟರ್‌ನಲ್ಲಿ ಇದು ಮೊದಲ ಪ್ರಾಜೆಕ್ಟ್ ಆಗಲಿದೆ. ಓಲಾ, ಉಬೇರ್ ಸೇವೆಯನ್ನು ವಾಣಿಜ್ಯಕ್ಕಾಗಿ ಬಳಸಿಕೊಳ್ಳಲಾಗುತ್ತದೆ. ಕಾರು ಸೇವೆ ಬೇಕಾದರೆ ಸಮೀಪದ ಕಾರು ಬಾಡಿಗೆ ಪಡೆಯಲು ಸ್ಮಾರ್ಟ್‌ಫೋನ್ ತಂತ್ರಜ್ಞಾನ ಬಳಸಿಕೊಳ್ಳಲಾಗುತ್ತದೆ. ತ್ವರಿತ ಹಾಗೂ ಸುರಕ್ಷಿತ ಸೇವೆಗಾಗಿ ಇದನ್ನು ಅವಲಂಬಿಸುವವರ ಸಂಖ್ಯೆ ಹೆಚ್ಚಾಗಿದೆ.
ಭಾರತದಂಥ ದೇಶದಲ್ಲಿ ಸಮರ್ಪಕ ವೈದ್ಯಕೀಯ ಸೇವೆ ಸಿಗದೇ ಪ್ರತಿದಿನ ಸಹಸ್ರಾರು ಜನರು ಸಾಯುತ್ತಾರೆ. ಆಸ್ಪತ್ರೆಗಳಿದ್ದರೂ ಸಹ ಸಮಯಕ್ಕೆ ಸರಿಯಾಗಿ ಆಂಬ್ಯುಲನ್ಸ್‌ಗಳು ಸಿಗದಿದ್ದರಿಂದ ಅನೇಕರು ಜೀವ ಕಳೆದುಕೊಳ್ಳುತ್ತಿದ್ದಾರೆ. ಇದನ್ನು ಮನಗಂಡ ವಿದ್ಯಾರ್ಥಿಗಳು ಪೂರಕ ಆ್ಯಪ್ ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ.
ರಾಜ್ಯ ಸರ್ಕಾರ 108 ಆಂಬ್ಯುಲನ್ಸ್ ಸೇವೆ ಒದಗಿಸುತ್ತಿದ್ದರೂ ಸಹ ಹಲವು ಬಾರಿ ಸಮಯಕ್ಕೆ ಸರಿಯಾಗಿ ಅವುಗಳ ಸೇವೆ ಲಭ್ಯವಾಗುವುದಿಲ್ಲ. ಸಂಚಾರ ದಟ್ಟಣೆ ಸೇರಿದಂತೆ ಹಲವು ಕಾರಣಗಳಿಗಾಗಿ ದುರ್ಘಟನೆ ನಡೆದ ಸ್ಥಳ ತಲುಪುವುದು ವಿಳಂಬವಾಗುತ್ತದೆ. ಇದನ್ನು ಪರಿಗಣಿಸಿ ನೂತನ ಆ್ಯಪ್ ಸಿದ್ಧಪಡಿಸಲಾಗುತ್ತಿದೆ.
ಇದರಿಂದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಆಂಬ್ಯುಲನ್ಸ್‌ಗಳನ್ನು ಸಂಪರ್ಕ ಜಾಲಕ್ಕೆ ಸೇರಿಸಲಾಗುತ್ತದೆ. ಇದರಿಂದ ಆಂಬ್ಯುಲನ್ಸ್ ಚಾಲಕನಿಗೆ ಸಂದೇಶ ರವಾನೆಯಾಗುತ್ತದೆ. ಅಲ್ಲದೇ ನಮ್ಮ ಮೊಬೈಲ್‌ಗೆ ಎಷ್ಟು ನಿಮಿಷಗಳಲ್ಲಿ ಎಂಬುಲೆನ್ಸ್ ಆಗಮಿಸಲಿದೆ ಎಂಬ ಮಾಹಿತಿ ಕೂಡ ಬರುತ್ತದೆ.
ಅಲ್ಲದೇ ಯಾವ ಸಮಸ್ಯೆಯಾಗಿದೆ ಎಂಬುದನ್ನು ಆಂಬ್ಯುಲನ್ಸ್ ಚಾಲಕನಿಗೆ ತಿಳಿಸಿದರೆ ಆಸ್ಪತ್ರೆಯಲ್ಲಿ ಅದಕ್ಕೆ ಪೂರಕ ಸಿದ್ಧತೆ ಮಾಡಿಕೊಳ್ಳಬಹುದು. ಆಸ್ಪತ್ರೆಯಲ್ಲದೇ ಪೊಲೀಸ್, ಅಗ್ನಿಶಾಮಕದಳಕ್ಕೂ ಮಾಹಿತಿ ರವಾನೆಯಾಗುತ್ತದೆ. ಕರೆ ಮಾಡಿದ ಸ್ಥಳದ ಸಮೀಪದಲ್ಲಿರುವ ಆಂಬ್ಯುಲನ್ಸ್ ಸ್ಥಳಕ್ಕೆ ಆಗಮಿಸಿ ಅನಾರೋಗ್ಯಕ್ಕೀಡಾದವರನ್ನು ಆಸ್ಪತ್ರೆಗೆ ತಲುಪಿಸುವ ಕೆಲಸ ಮಾಡುತ್ತದೆ.
ಇದರಿಂದ 108 ಆಂಬ್ಯುಲನ್ಸ್ ಬರುವವರೆಗೂ ಕಾಯುವುದು ತಪ್ಪುತ್ತದೆ. ಹೃದಯಾಘಾತ ಅಥವಾ ಅಪಘಾತ ಸಂದರ್ಭಗಳಲ್ಲಿ ಇಂಥ ಸೇವೆ ಹೆಚ್ಚು ಉಪಯುಕ್ತವೆನಿಸುವುದು. ಗ್ರಾಮೀಣ ಭಾಗದ ಎಜಿಎಂಆರ್ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಆ್ಯಪ್ ಅಭಿವೃದ್ಧಿ ಪಡಿಸಲಾಗುತ್ತದೆ.
ಇನ್‌ಕ್ಯುಬೇಶನ್ ಸೆಂಟರ್‌ನಲ್ಲಿ ವಿದ್ಯಾರ್ಥಿಗಳು ಇಂಟರ್ನ್ಶಿಪ್ ಮಾಡಬಹುದಲ್ಲದೇ, ಉದ್ಯೋಗ ವಕಾಶವನ್ನೂ ಪಡೆಯಬಹುದಾಗಿದೆ. ಇದೇ ಮಾದರಿಯಲ್ಲಿ ವಿದ್ಯಾರ್ಥಿಗಳಿಗೆ ಉದ್ಯಮಶೀಲತೆ ಬೆಳೆಸುವುದರೊಂದಿಗೆ ನವೋದ್ಯಮ ಆರಂಭಿಸಲು ಉತ್ತೇಜನ ನೀಡುವ ಉದ್ದೇಶವನ್ನು ಕಾಲೇಜಿನ ಆಡಳಿತ ಮಂಡಳಿ ಹೊಂದಿದೆ.
ಕೆಎಲ್‌ಇ ತಂತ್ರಜ್ಞಾನ ವಿಶ್ವವಿದ್ಯಾಲಯದ ಮಾದರಿಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಹಲವಾರು ಉದ್ಯಮ ಘಟಕಗಳನ್ನು ಒಂದೇ ಕ್ಯಾಂಪಸ್‌ನಲ್ಲಿ ಆರಂಭಿಸುವ ಇರಾದೆಯೂ ಇದೆ. ಗ್ರಾಮೀಣ ಮಟ್ಟದ ಎಂಜಿನಿಯರಿಂಗ್ ಕಾಲೇಜು ವಿನೂತನ ಪ್ರಾಜೆಕ್ಟ್ನೊಂದಿಗೆ ಇನ್‌ಕ್ಯುಬೇಶನ್ ಸೆಂಟರ್ ಆರಂಭಿಸಲು ಮುಂದಾಗಿದ್ದು, ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡರೆ ಪದವೀಧರರಷ್ಟೇ ಅಲ್ಲ, ಉದ್ಯಮಿಗಳೂ ಹೊರಹೊಮ್ಮಬಹುದಾಗಿದೆ.
* ವಿಶ್ವನಾಥ ಕೋಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.