ವಿಧಾನಸಭೆ ಚುನಾವಣೆ: ಸಿದ್ದರಾಮಯ್ಯ ಸಾರಥ್ಯ
Team Udayavani, Jun 1, 2017, 3:25 AM IST
ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿಯೇ ಎದುರಿಸಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ. ಮುಂದಿನ ಚುನಾ ವಣೆಗೆ ನಾಯಕತ್ವ ಯಾರದ್ದು ಎಂಬ ಪ್ರಶ್ನೆಯೇ ಬಹುಚರ್ಚಿತ ವಿಷಯವಾಗಿತ್ತು. ಇದಕ್ಕೆ ಕಾಂಗ್ರೆಸ್ ಹೈಕಮಾಂಡ್ ತೆರೆ ಎಳೆದಿದ್ದು, ಇದೇ ಮೊದಲ ಬಾರಿಗೆ ಲಿಖೀತ ರೂಪದಲ್ಲಿ ಅಧಿಕೃತ ಆದೇಶ ಹೊರಡಿಸಿದೆ.
ಈ ಮೂಲಕ ರಾಜ್ಯ ಕಾಂಗ್ರೆಸ್‌ಗೆ ಸಿದ್ದರಾಮಯ್ಯ ಅವರೇ ನಾಯಕ ಎಂಬ ಸಂದೇಶ ರವಾನೆ ಮಾಡಿದೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೂಚನೆ ಮೇರೆಗೆ 2018ರ ಕರ್ನಾಟಕ ವಿಧಾನಸಭಾ ಚುನಾವಣೆಯ ನೇತೃತ್ವವನ್ನು ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಅದಲ್ಲದೆ, ಕೆಪಿಸಿಸಿ ಹಾಲಿ ಅಧ್ಯಕ್ಷ ಡಾ| ಜಿ. ಪರಮೇಶ್ವರ್ ಅವರು ಅಧ್ಯಕ್ಷರಾಗಿ ಮುಂದುವರಿಯಲಿದ್ದು, ಅವರು ತತ್‌ಕ್ಷಣದಿಂದ ಗೃಹ ಸಚಿವ ಹುದ್ದೆಗೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ. ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಎಸ್.ಆರ್. ಪಾಟೀಲ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಅವರಿಗೆ ಉತ್ತರ ಕರ್ನಾಟಕದ ಜವಾಬ್ದಾರಿ ನೀಡಲಾಗಿದೆ. ಇನ್ನೊಬ್ಬ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್‌ಗೆ ದಕ್ಷಿಣ ಕರ್ನಾಟಕದ ಉಸ್ತುವಾರಿ ನೀಡಲಾಗಿದೆ.
ರಾಜ್ಯಾಧ್ಯಕ್ಷ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದ ಇಂಧನ ಸಚಿವ ಡಿ. ಕೆ. ಶಿವಕುಮಾರ್ ಅವರನ್ನು 2018ರ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರ ನ್ನಾಗಿ ನೇಮಕ ಮಾಡಲಾಗಿದೆ. ಇನ್ನೋರ್ವ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಕೆ.ಎಚ್. ಮುನಿಯಪ್ಪ ಅವರನ್ನು ಸಿಡಬ್ಲ್ಯುಸಿಗೆ ವಿಶೇಷ ಆಹ್ವಾನಿತರನ್ನಾಗಿ ನೇಮಕ ಮಾಡಲಾಗಿದೆ. ಅಲ್ಲದೆ, ಮುಖ್ಯಮಂತ್ರಿ ವಿರುದ್ಧ ಮುನಿಸಿಕೊಂಡಿದ್ದ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಎಐಸಿಸಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಕಾಂಗ್ರೆಸ್ ಹೈಕಮಾಂಡ್ ಎಲ್ಲ ಸಮುದಾಯಗಳ ನಾಯಕರನ್ನು ಸಮಾಧಾನಪಡಿಸುವ ಪ್ರಯತ್ನಕ್ಕೆ ಮುಂದಾಗಿದ್ದು, ಎಲ್ಲರಿಗೂ ಜವಾಬ್ದಾರಿಗಳನ್ನು ನೀಡಿ, ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎಂದು ಚುನಾವಣಾ ರಣತಂತ್ರ ಹೆಣೆದಿದ್ದು, ಈಗಿನಿಂದಿಲೇ ಕಾರ್ಯತಂತ್ರ ರೂಪಿಸುವಂತೆ ರಾಜ್ಯ ನಾಯಕರಿಗೆ ಸೂಚನೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.