ಹಾವುಗಳಿಗೇಕೆ ಎರಡು ನಾಲಗೆ?
Team Udayavani, Jun 1, 2017, 10:06 AM IST
ಬಹಳ ಹಿಂದೆ ಕಶ್ಯಪ ಮುನಿಗಳಿಗೆ ಇಬ್ಬರು ಹೆಂಡತಿಯರಿದ್ದರು. ಅವರೇ ಕದ್ರು ಮತ್ತು ವಿನುತ. ಕದ್ರುಗೆ ಸರ್ಪಗಳು ಮಕ್ಕಳು. ವಿನುತಗೆ ಅರುಣ ಮತ್ತು ಗರುಡ ಎಂಬ ಇಬ್ಬರು ಮಕ್ಕಳು. ಹೀಗಿರಲು ಒಂದು ದಿನ ಅವರಿಬ್ಬರೂ ಸಮುದ್ರಮಂಥನದಲ್ಲಿ ಬಿಳಿಗುದುರೆ ಹುಟ್ಟುವುದನ್ನು ಕಾಣುತ್ತಾರೆ.
ಆಗ ಅವರಿಬ್ಬರಲ್ಲೂ ಒಂದು ಪಂಥ ಏರ್ಪಡುತ್ತದೆ. ಅದೇನೆಂದರೆ ವಿನುತ ಆ ಕುದುರೆ ಪೂರ್ತಿ ಬಿಳಿಯಾಗಿದೆ ಎನ್ನುತ್ತಾಳೆ. ಆದರೆ ಕದ್ರು ಅದರ ಬಾಲ ಮಾತ್ರ ಕಪ್ಪಗಾಗಿದೆ ಎನ್ನುತ್ತಾಳೆ. ಪಂಥದಲ್ಲಿ ಸೋತವರು, ಗೆದ್ದವರ ದಾಸಿಯಾಗಬೇಕು ಎಂದು ನಿರ್ಣಯವಾಗುತ್ತದೆ.
ಕದ್ರು ಪಂಥದಲ್ಲಿ ತಾನೇ ಗೆಲ್ಲಬೇಕು ಎಂದು ತನ್ನ ಮಕ್ಕಳಾದ ಹಾವುಗಳನ್ನು ಕರೆದು ಕುದುರೆಯ ಬಾಲದಲ್ಲಿ ಸೇರಿಕೊಳ್ಳುವಂತೆ ಸೂಚಿಸುತ್ತಾಳೆ.
ಆಗ ಕುದುರೆಯ ಬಾಲ ಕಪ್ಪಗೆ ಕಾಣುತ್ತದೆ. ಪಂಥದಲ್ಲಿ ಸೋತ ವಿನುತ ಕದ್ರುವಿನ ದಾಸಿಯಾಗುತ್ತಾಳೆ.ಕದ್ರು, ವಿನುತಳನ್ನು ಅತ್ಯಂತ ಹೀನಾಯವಾಗಿ ನಡೆಸಿಕೊಳ್ಳುತ್ತಾಳೆ. ಇದರಿಂದ ಅವಳ ಮಗನಾದ ಗರುಡನಿಗೆ ಬೇಸರವಾಗುತ್ತದೆ. ಆತ ಸರ್ಪಗಳ ಬಳಿ ಬಂದು ತನ್ನ ತಾಯಿಯ ಬಂಧ ಮುಕ್ತಿಯ ಬಗ್ಗೆ ಮಾತಾಡುತ್ತಾನೆ. ಆಗ ಸರ್ಪಗಳು ತಮಗೆ ಸ್ವರ್ಗದಿಂದ ಅಮೃತ ತಂದು ಕೊಟ್ಟರೆ ಬಂಧ ಮುಕ್ತಿ ನೀಡುವುದಾಗಿ ತಿಳಿಸುತ್ತವೆ.
ಅದರಂತೆಯೇ ಗರುಡ ಸ್ವರ್ಗಕ್ಕೆ ಹೋಗಿ ಇಂದ್ರನನ್ನು ಭೇಟಿ ಮಾಡುತ್ತಾನೆ. ಇಂದ್ರ ಅಮೃತ ನೀಡಲು ಹಿಂಜರಿಯುತ್ತಾನೆ. ಆಗ ಗರುಡ ತನ್ನ ತಾಯಿಯ ಬಂಧಮುಕ್ತಿಯಾದ ಕೂಡಲೇ ಅಮೃತವನ್ನು ವಾಪಸ್ ತರುವುದಾಗಿ ತಿಳಿಸಿದ್ದರಿಂದ ಇಂದ್ರ ಒಪ್ಪಿ ಅಮೃತ ನೀಡುತ್ತಾನೆ.
ಅಮೃತವನ್ನು ಕಂಡ ಸರ್ಪಗಳು ಸಂತೋಷಗೊಂಡು ವಿನುತಾಳನ್ನು ಬಂಧನದಿಂದ ಮುಕ್ತಗೊಳಿಸುತ್ತವೆ. ತಕ್ಷಣ ಗರುಡ, ಅಮೃತವನ್ನು ಅಲ್ಲಿಂದ ಕೊಂಡೊಯುತ್ತಾನೆ. ಸರ್ಪಗಳು ನಿರಾಸೆಯಿಂದ ಆ ಅಮೃತವನ್ನಿಟ್ಟಿದ್ದ ಧರ್ಬೆಯನ್ನೇ ನೆಕ್ಕುತ್ತವೆ. ನೆಕ್ಕಿ- ನೆಕ್ಕಿ ಅವುಗಳ ನಾಲಗೆ ಎರಡಾಗಿ ಸೀಳಿ ಹೋಗುತ್ತದೆ. ಅದಕ್ಕೇ ಹಾವಿನ ನಾಲಗೆ ಸೀಳಿರುವುದು. ಆಮೇಲಿಂದ ಗರುಡನಿಗೂ- ಸರ್ಪಗಳಿಗೂ ವೈರತ್ವ ಉಂಟಾಗುತ್ತದೆ.
-ಹನುಮಂತ ಮ.ದೇಶಕುಲಕರ್ಣಿ, ಧಾರವಾಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.