ಪೊಲೀಸರ ನೋಟಿಸ್‌ಗೆ ಹೈ ತಡೆಯಾಜ್ಞೆ 


Team Udayavani, Jun 1, 2017, 12:16 PM IST

high-court.jpg

ಬೆಂಗಳೂರು: ಮಹಿಳೆಯೊಬ್ಬರ ದೂರಿನ ಆಧಾರದಲ್ಲಿ “ಆದಿತ್ಯ ಬಿರ್ಲಾ ಫ್ಯಾಶನ್‌ ಅಂಡ್‌ ರೀಟೈಲ್‌ ಲಿಮಿಟೆಡ್‌’ನ ಮೂವರು ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ರಾಮಮೂರ್ತಿ ನಗರ ಪೊಲೀಸ್‌ ಠಾಣೆ ನೀಡಿದ್ದ ನೋಟೀಸ್‌ಗೆ ಹೈಕೋರ್ಟ್‌ ಬುಧವಾರ ತಡೆಯಾಜ್ಞೆ ನೀಡಿದೆ.

ಪೊಲೀಸ್‌ ಇನ್ಸಪೆಕ್ಟರ್‌ ನೀಡಿರುವ ನೋಟೀಸ್‌ ರದ್ದುಗೊಳಿಸುವಂತೆ  ಕಂಪೆನಿಯ ಸಿಇಒ ಆಶೀಶ್‌ ದೀಕ್ಷಿತ್‌ ಹಾಗೂ ಮತ್ತಿಬ್ಬರು ಅಧಿಕಾರಿಗಳು ಹೈಕೋರ್ಟ್‌ಗೆ  ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ  ಕೆ.ಎನ್‌ ಫ‌ಣೀಂದ್ರ ಅವರಿದ್ದ ಏಕಸದಸ್ಯ ಪೀಠ, ಅರ್ಜಿದಾರರ ವಿರುದ್ಧದ ಪೊಲೀಸ್‌ ನೋಟೀಸ್‌ಗೆ ಮುಂದಿನ ವಿಚಾರಣೆಯವರೆಗೆ  ತಡೆಯಾಜ್ಞೆ ನೀಡಿ ಜೂನ್‌ 5ಕ್ಕೆ  ಮುಂದೂಡಿತು.

ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ರಾಮಮೂರ್ತಿನಗರ ಠಾಣೆ ಇನ್ಸಪೆಕ್ಟರ್‌ ಚಂದ್ರಾಧರ್‌ಗೆ ತಾಕೀತು ಮಾಡಿತು. 
ಇಂದಿರಾನಗರದ ನಿವಾಸಿ  ಶೀತಲ್‌. ಆರ್‌ ಎಂಬವವರು ನೀಡಿದ ದೂರಿನ ಅನ್ವಯ  ರಾಮಮೂರ್ತಿ ನಗರ ಠಾಣೆ ಇನ್ಸಪೆಕ್ಟರ್‌, ಮೇ 24ರಂದು ಕಂಪೆನಿಯ  ಸಿಇಒ, ಆಶೀಶ್‌ ದೀಕ್ಷಿತ್‌, ಸಿಎಫ್ಒ ವಿನಯ್‌ ಬೋಪತ್ಕರ್‌ ಹಾಗೂ ಹಣಕಾಸು ಅಧಿಕಾರಿ ವಿಕಾಸ್‌ ಅಗರ್‌ವಾಲ್‌ಗೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್‌ ನೀಡಿದ್ದರು. 

ದೂರು ನೀಡಿರುವ ಶೀತಲ್‌ ಅವರ ಪತಿ ಅರುಣ್‌ ರಾಮಮೂರ್ತಿ ನಮ್ಮ ಸಂಸ್ಥೆಯ ಮಾಜಿ ಉದ್ಯೋಗಿ. ಅಧಿಕಾರ ದುರ್ಬಳಕೆ ಹಿನ್ನೆಲೆಯಲ್ಲಿ 2014ರಲ್ಲಿ ಮಹದೇವಪುರ ಠಾಣೆಯಲ್ಲಿ ಅವರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಹೀಗಿದ್ದರೂ ಶೀತಲ್‌  ಸಲ್ಲಿಸಿರುವ ದೂರಿನ ಅನ್ವಯ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್‌ ಅಧಿಕಾರಿ ನೋಟೀಸ್‌  ಕಳುಹಿಸಿರುವುದು  ಕಾನೂನು ಬಾಹಿರ ಎಂದು ಕಂಪನಿ ಪರ ವಕೀಲರು ವಾದ ಮಂಡಿಸಿದ್ದರು. 

ಟಾಪ್ ನ್ಯೂಸ್

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ಖುಷಿ ಕೊಡಬಲ್ಲ ಕೆಲವು ವಿಧಾನ ತಿಳಿಸಿ…ಏನೂ ಇಲ್ಲದೆಯೂ ಸಂತೋಷವಾಗಿರಿ!  

ಖುಷಿ ಕೊಡಬಲ್ಲ ಕೆಲವು ವಿಧಾನ ತಿಳಿಸಿ…ಏನೂ ಇಲ್ಲದೆಯೂ ಸಂತೋಷವಾಗಿರಿ!  

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.