ಬಿಸಿಸಿಐ ಸಮಿತಿಗೆ ಖ್ಯಾತ ಇತಿಹಾಸ ತಜ್ಞ ರಾಮಚಂದ್ರ ಗುಹಾ ಗುಡ್ ಬೈ
Team Udayavani, Jun 1, 2017, 3:01 PM IST
ನವದೆಹಲಿ: ಅಚ್ಚರಿಯ ಬೆಳವಣಿಗೆ ಎಂಬಂತೆ ಖ್ಯಾತ ಇತಿಹಾಸ ತಜ್ಞ ರಾಮಚಂದ್ರ ಗುಹಾ ಅವರು ಗುರುವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ(ಬಿಸಿಸಿಐ) ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ಸಲ್ಲಿಸಿದ್ದಾರೆ.
ತಾನು ರಾಜೀನಾಮೆ ನೀಡುವ ನಿರ್ಧಾರದ ಬಗ್ಗೆ ಗುಹಾ ಅವರು ಸುಪ್ರೀಂಕೋರ್ಟ್ ಗೆ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ಅಲ್ಲದೇ ರಾಜೀನಾಮೆ ನೀಡುತ್ತಿರುವ ಕುರಿತು ಅರ್ಜಿಯೊಂದನ್ನು ಸಲ್ಲಿಸುವಂತೆಯೂ ಸುಪ್ರೀಂಕೋರ್ಟ್ ಗುಹಾ ಅವರಿಗೆ ಸೂಚಿಸಿದೆ.
2017ರ ಜನವರಿ 30ರಂದು ವಿನೋದ್ ರಾಯ್ ಅವರ ಅಧ್ಯಕ್ಷತೆಯಲ್ಲಿ ನಾಲ್ಕು ಜನರ ಸಮಿತಿಯೊಂದನ್ನು ಸುಪ್ರೀಂಕೋರ್ಟ್ ನೇಮಕ ಮಾಡಿತ್ತು. ಅದರಲ್ಲಿ ಗುಹಾ ಕೂಡಾ ಒಬ್ಬ ಸದಸ್ಯರಾಗಿದ್ದರು.
ಲೋಧಾ ಸಮಿತಿಯ ಶಿಫಾರಸ್ಸು ಜಾರಿಗೊಳಿಸುವಲ್ಲಿ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಅವರು ವಿಫಲರಾದ ಹಿನ್ನಲೆಯಲ್ಲಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿತ್ತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.