ಪಾಕ್‌ ನಂಟು ಪ್ರಕರಣದಲ್ಲಿ ಕಾರಿನದ್ದೇ ಗೋಜಲು 


Team Udayavani, Jun 2, 2017, 12:27 PM IST

police-investigation.jpg

ಬೆಂಗಳೂರು: ಅಕ್ರಮವಾಗಿ ನೆಲೆಸಿದ್ದ ಆರೋಪದ ಅಡಿಯಲ್ಲಿ ಬಂಧಿತರಾಗಿರುವ ಮೂವರು ಪಾಕ್‌ ಪ್ರಜೆಗಳ ವಿಚಾರಣೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗಳು ಮುಂದುವರಿಸಿವೆ. ಈ ನಡುವೆ ಪಾಕ್‌ ಪ್ರಜೆಗಳ ಬಂಧನಕ್ಕೆ ನೆರವಾದ ಕಾರು ಕದ್ದ ಮಾಲಾಗಿದ್ದು, ಕಾರಿನ ನಿಜವಾದ ಮಾಲೀಕನ್ಯಾರು ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.

ಆರೋಪಿ ಶಿಹಾಬ್‌ಗ ಟಿ.ಎ 67-ಎವೈ, 1569 ನಂಬರ್‌ನ ಸ್ವಿಪ್ಟ್  ಕಾರು ನೀಡಿದ್ದ ಸಂಬಂಧ ಕುಮಾರಸ್ವಾಮಿ ಪೊಲೀಸ್‌ ಠಾಣೆಯ ಪೇದೆ ಇರ್ಫಾನ್‌ನನ್ನು ಬಂಧಿಸಲಾಗಿದೆ. ಆದರೆ ಕಾರಿನ ಮಾಲೀಕತ್ವದ ಬಗ್ಗೆ ಶಿಹಾಬ್‌ ಮತ್ತು ಇರ್ಫಾನ್‌ ಇಬ್ಬರೂ ನೀಡುತ್ತಿರುವ ಹೇಳಿಕೆಗಳು ತದ್ವಿರುದ್ಧವಾಗಿವೆ.

ಆರೋಪಿಗಳು ಹೇಳುವಂತೆ ಹರಿಪ್ರಸಾದ್‌ ಎಂಬಾತ ಕಾರು ಪಡೆದುಕೊಂಡಿರುವುದಾಗಿ ಹೇಳುತ್ತಾರೆ. ಅದರಂತೆ ಕಾರಿನ ನಿಜವಾದ ಮಾಲೀಕತ್ವ ಪರಿಶೀಲಿಸಲು ತೆರಳಿದ್ದ ತನಿಖಾಧಿಕಾರಿಗಳಿಗೆ ತಮಿಳುನಾಡಿನ ಆರ್‌ಟಿಒ ಅಧಿಕಾರಿ ಬೇರೆಯದ್ದೇ ಮಾಹಿತಿ ನೀಡಿದ್ದಾರೆ. ಈ ನಂಬರ್‌ನ ಕಾರು ಹರಿಪ್ರಸಾದ್‌ ಹೆಸರಿನಲ್ಲಿರಲಿಲ್ಲ. ಬದಲಿಗೆ ಪ್ರಸನ್ನ ಎಂಬುವವರ ಹೆಸರಲ್ಲಿದೆ ಎಂದು ಹೇಳಿದ್ದಾರೆ. 

ಆದರೆ ಇದೇ ನಂಬರ್‌ನ ಕಾರಿನ ಬಗ್ಗೆ ಕೇರಳ ಸಾರಿಗೆ ಇಲಾಖೆಗೆ ನೀಡಿ ಮಾಹಿತಿ ಕೇಳಿದಾಗ, ಕಾರು ಕಾರುವನೂರ್‌ ಜಿಲ್ಲೆಯ ಅಬ್ದುಲ್ಲಾ ಎಂ.ಪಿ ಹೆಸರಿನಲ್ಲಿ ನೋಂದಣಿಯಾಗಿರುವುದು, ಮತ್ತು ಈ ಕಾರು ಹಾಗೂ ಆರೋಪಿಗಳ ಬಳಿಯಿರುವ ಕಾರು ಒಂದೇ ಆಗಿರುವುದು ಪತ್ತೆಯಾಗಿದೆ.

ಕಳವುವಾಗಿದ್ದ ಈ ಕಾರಿಗೆ  ತಮಿಳುನಾಡಿನ ನೋಂದಣಿ ಸಂಖ್ಯೆ ಅಂಟಿಸಲಾಗಿದೆ. ಆ ಕಾರನ್ನು ಪಡೆದುಕೊಂಡಿರುವ  ಪೇದೆ ಇರ್ಫಾನ್‌, ಆರೋಪಿ  ಶಿಹಾಬ್‌ಗ ಕೊಟ್ಟಿದ್ದಾನೆ . ಆದರೆ ಇರ್ಫಾನ್‌ ಬಳಿಗೆ ಕಾರು ಹೇಗೆ ಬಂತು ಎಂಬುದನ್ನು ಪತ್ತೆಹಚ್ಚಬೇಕಿದೆ ಎಂದು ಮೂಲಗಳು ತಿಳಿಸಿವೆ. 

ಇಡೀ ಪ್ರಕರಣದಲ್ಲಿ ಶಿಹಾಬ್‌ ಬಳಿಯಿದ್ದ ಕಾರು ಹರಿಪ್ರಸಾದ್‌ ಎಂಬಾತನದ್ದು ಎಂದು ಹೇಳಲಾಗಿತ್ತು. ಆದರೆ ಹರಿಪ್ರಸಾದ್‌ ಎಂಬಾತನ ಹೆಸರನ್ನು ತಮಿಳುನಾಡು ಹಾಗೂ ಕೇರಳ ಆರ್‌ಟಿಓ ಅಧಿಕಾರಿಗಳು ಉಲ್ಲೇಖೀಸಿಲ್ಲ. ಹೀಗಿದ್ದರೂ ಹರಿಪ್ರಸಾದ್‌ ಎಂಬಾತನ ಹೆಸರು ಕಲ್ಪಿಸಿ ಕಥೆ  ಹೆಣೆದಿದ್ದು ಏಕೆ ಎಂಬುದು ನಿಗೂಢವಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

Vijayapura: ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

9–karnataka-50

Kannada Sambrama: ಸುವರ್ಣ ಮಹೋತ್ಸವ ವಿಶೇಷ; 50 ವರ್ಷದ ಹರ್ಷಕ್ಕೆ 50 ಕಾರಣ

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?

Jammu: Union Minister Jitendra Singh’s brother, BJP MLA Devendra Singh Rana passed away

Jammu: ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸೋದರ, ಬಿಜೆಪಿ ಶಾಸಕ ದೇವೇಂದ್ರ ಸಿಂಗ್‌ ರಾಣಾ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-bng

Deepawali: ರಾಜಧಾನಿಯಲ್ಲಿ ದೀಪಾವಳಿ ಬೆಳಕಿನ ಚಿತ್ತಾರ

6-shivaraja

Special Interview: ಪ್ರತ್ಯೇಕ ನಾಡಧ್ವಜಕ್ಕಾಗಿ ಕೇಂದ್ರಕ್ಕೆ ಮತ್ತೂಮ್ಮೆ ಪತ್ರ: ತಂಗಡಗಿ

Bengaluru: ಆಶಾ ಸಾಫ್ಟ್ ನಲ್ಲಿ ತಾಂತ್ರಿಕ ಸಮಸ್ಯೆ: ಕಾರ್ಯಕರ್ತೆಯರ ಕೈಸೇರದ ಪ್ರೋತ್ಸಾಹಧನ

Bengaluru: ಆಶಾ ಸಾಫ್ಟ್ ನಲ್ಲಿ ತಾಂತ್ರಿಕ ಸಮಸ್ಯೆ: ಕಾರ್ಯಕರ್ತೆಯರ ಕೈಸೇರದ ಪ್ರೋತ್ಸಾಹಧನ

Bengaluru: ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಐ ಗಂಗಾಧರ್

Bengaluru: ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಐ ಗಂಗಾಧರ್

Bengaluru: ರೈಲಲ್ಲಿ ಬಿಟ್ಟು ಹೋಗಿದ್ದ 5 ಲಕ್ಷ ಚಿನ್ನ ಪ್ರಯಾಣಿಕನಿಗೆ ಹಸ್ತಾಂತರ

Bengaluru: ರೈಲಲ್ಲಿ ಬಿಟ್ಟು ಹೋಗಿದ್ದ 5 ಲಕ್ಷ ಚಿನ್ನ ಪ್ರಯಾಣಿಕನಿಗೆ ಹಸ್ತಾಂತರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

11-bng

Deepawali: ರಾಜಧಾನಿಯಲ್ಲಿ ದೀಪಾವಳಿ ಬೆಳಕಿನ ಚಿತ್ತಾರ

ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

Vijayapura: ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

20

Deepavali: ಮೊದಲ ಬಾರಿ ಚಿನ್ನ ಮೀರಿಸಿದ ಬೆಳ್ಳಿ ಖರೀದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.