ಆನೇಕಲ್‌ನಲ್ಲಿ ಮತ್ತೂಬ್ಬ ಬಿಜೆಪಿ ಮುಖಂಡನ ಹತ್ಯೆ 


Team Udayavani, Jun 2, 2017, 12:27 PM IST

Anekal-.jpg

ಆನೇಕಲ್‌: ಕೆಲವು ತಿಂಗಳ ಹಿಂದೆಯಷ್ಟೆ ನಡೆದಿದ್ದ ಬಿಜೆಪಿ ಮುಖಂಡ ಹಾಗೂ ಬೊಮ್ಮಸಂದ್ರ ಪುರಸಭೆ ಸದಸ್ಯ ವಾಸು ಕೊಲೆ ಆನೇಕಲ್‌ ಜನರ ಮನಸ್ಸಿಂದ ಮಾಸುವ ಮೊದಲೇ ಬುಧವಾರ ರಾತ್ರಿ ಮೊತ್ತೂಬ್ಬ ಬಿಜೆಪಿ ಮುಖಂಡನ ಬರ್ಬರ ಕೊಲೆ ಸಂಭವಿಸಿದೆ. 

ಚಂದಾಪುರ ಪುರಸಭೆಯ ಹೀಲಲಿಗೆ ಗ್ರಾಮದ ನಿವಾಸಿ ಬಿಜೆಪಿ ಎಸ್‌.ಸಿ ಮೋರ್ಚಾ ಉಪಾಧ್ಯಕ್ಷ ಹರೀಶ್‌ ಕೊಲೆಯಾದವ. ಬುಧವಾರ ರಾತ್ರಿ 11.30 ಗಂಟೆಯಲ್ಲಿ ಹರೀಶ್‌ ತನ್ನ ಬೈಕ್‌ನಲ್ಲಿ ಚಂದಾಪುರ ಕಡೆಯಿಂದ ಹೀಲಲಿಗೆ ಗ್ರಾಮದತ್ತ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕೃತ್ಯ ನಡೆದಿದೆ.

ಹರೀಶ್‌ನನ್ನು ಅಡ್ಡಗಟ್ಟಿರುವ ನಾಲ್ಕೈದು ಮಂದಿ, ಕಣ್ಣಿಗೆ ಕಾರದ ಪುಡಿ ಎರಚಿ ನಂತರ ಮಾರಕಾಸ್ತ್ರಗಳಿಂದ ಭೀಕರವಾಗಿ ದಾಳಿ ನಡೆಸಿದ್ದಾರೆ. ಕೊನೆಗೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದಿದ್ದಾರೆ. ಹರೀಶ್‌ನ ದೇಹದ ಸುಮಾರು 40 ಕಡೆಗಳಲ್ಲಿ ಚಾಕುವಿನಿಂದ ಇರಿಯಲಾಗಿದೆ. ಆತನ ಒಂದು ಕೈಯನ್ನು ಹಾಗೂ ಬೆರಳನ್ನು  ಕತ್ತರಿಸಿ ಬರ್ಬರವಾಗಿ ಕೊಲ್ಲಲಾಗಿದೆ. 

ಸುಮಾರು 40 ವರ್ಷ ವಯಸ್ಸಿನ ಹರೀಶ್‌ ಚಂದಾಪುರ ಪುರಸಭೆಯ ಅಧ್ಯಕ್ಷ ವೇಣುಗೋಪಾಲ್‌ ಅವರ ಭಾವ ಮೈದುನ ಎನ್ನಲಾಗಿದೆ. ಮೃತ ಹರೀಶ್‌ಗೆ ಪತ್ನಿ ಶೋಭ, 9 ವರ್ಷದ ನಿರಂಜನ  ಮತ್ತು 5 ವರ್ಷದ ನಿಖೀತ ಎಂಬ ಹೆಣ್ಣು ಮಗುವಿದೆ. ಆರೋಪಿಗಳು ಯಾರು ಎಂಬುದು ನಿಖರವಾಗಿಲ್ಲ. ಸಂದೀಪ್‌, ರಾಜೇಶ್‌, ಕಿಶೋರ್‌ ಮತ್ತು ಸಂತೋಷ್‌ ಎಂಬುವರ ಮೇಲೆ ಅನುಮಾನ ವ್ಯಕ್ತವಾಗಿದ್ದು, ಇವರ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ. ಸೂರ್ಯಸಿಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಬಿಜೆಪಿ ಸಮಾವೇಶ ಮಾಡಿದ್ದೇ ತಪ್ಪಾಯ್ತ?: ಹರೀಶ್‌ ಕಳೆದ ತಿಂಗಳು ಹೀಲಲಿಗೆ ಗ್ರಾನದಲ್ಲಿ ಬಿಜೆಪಿ ಸಮಾವೇಶ ಮಾಡಿ ಕಾಂಗ್ರೆಸ್‌ನ 150-200 ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದ. ಇದು ಸ್ಥಳೀಯ ಕಾಂಗ್ರೆಸ್‌ ಮುಖಂಡರ ಕೆಂಗಣ್ಣಿಗೆ ಗುರಿಯಾಗಿತ್ತು. ಇದೇ ಕಾರಣಕ್ಕೇ ಕೊಲೆ ನಡೆದಿರಬಹುದು ಎಂಬ ಶಂಕೆಯನ್ನು ಸ್ಥಳೀಯ ಬಿಜೆಪಿ ಮುಖಂಡರು ವ್ಯಕ್ತಪಡಿಸಿದ್ದಾರೆ. 

ಜಗಳವೂ ಕಾರಣವಿರಬಹುದು: ಈ ನಡುವೆ ಕೆರೆಯಲ್ಲಿ ಮೀನು ಹಿಡಿಯುವ ಬಗ್ಗೆ ಆತನ ಜೊತೆಯಲ್ಲಿದ್ದ ಹುಡುಗರೊಂದಿಗೆ 3 ದಿನಗಳಹಿಂದೆ ಜಗಳವಾಗಿತ್ತು. ಈ ಹಿನ್ನಲೆಯಲ್ಲಿ ಘಟನೆ ಸಂಭವಿಸಿರಬಹುದು ಎಂಬ ಅನುಮಾನವೂ ವ್ಯಕ್ತವಾಗಿದೆ. 

ಸರ್ಕಾರ ವಿಫ‌ಲವಾಗಿದೆ ಎಂದ ನಾರಾಯಣಸ್ವಾಮಿ: ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರಿಗೆ ರಕ್ಷಣೆ ನೀಡುವಲ್ಲಿ ಕಾಂಗ್ರೆಸ್‌ ಸರ್ಕಾರ ವಿಫ‌ಲವಾಗಿದೆ. ತಾಲೂಕು ಪೋಲೀಸರದ್ದೂ ವೈಫ‌ಲ್ಯವಿದೆ ಎಂದು ಮಾಜಿ ಸಚಿವ ನಾರಾಯಣ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ರಸ್ತೆ ತಡೆ ಪ್ರತಿಭಟನೆ: ಹರೀಶ್‌ ಕೊಲೆ ಖಂಡಿಸಿ ಚಂದಾಪುರ ವೃತ್ತದ ಬಳಿ ಸ್ಥಳೀಯ ನಾಗರಿಕರು ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ದುಷ್ಕರ್ಮಿಗಳನ್ನು ಶೀಘ್ರ ಬಂಧಿಸಿ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು. 

ರಾಜ್ಯ ಜಂಗಲ್‌ರಾಜ್‌ ಎಂದ ಬಿಎಸ್‌ವೈ 
ಬೆಂಗಳೂರು:
ಹರೀಶ್‌ ಕೊಲೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಖಂಡಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್‌ ಸರ್ಕಾರ ಕೇರಳದ ಜಂಗಲ್‌ರಾಜ್‌ ಮಾದರಿಯನ್ನು ರಾಜ್ಯದಲ್ಲೂ ಜಾರಿಗೆ ತರಲು ಹೊರಟಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರ ಸರಣಿ ಕೊಲೆಗಳಾಗುತ್ತಿವೆ.

ಇದು ಒಂದು ನಾಗರಿಕ ಸರ್ಕಾರ ವರ್ತಿಸುವ ರೀತಿಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ. ರಾಜಕೀಯ ವೈಷಮ್ಯದ ಕೊಲೆಯಲ್ಲಿ ಸಿದ್ದರಾಮಯ್ಯ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರೊಂದಿಗೆ ಸ್ಪರ್ಧೆಗಿಳಿದಿದ್ದಾರೆ. ಕರ್ನಾಟಕವನ್ನೂ ಕೇರಳದಂತೆ ಜಂಗಲ್‌ ರಾಜ್‌ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಕಾರ್ಯಕರ್ತರರನ್ನು ರಾಜಕೀಯ ದ್ವೇಷದಿಂದ ಕೊಲೆ ಮಾಡಲಾಗುತ್ತಿದೆ. ಇದಕ್ಕೆಲ್ಲಾ ಯಾರು ಹೊಣೆ ಎಂಬುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಬೇಕು. ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂಬುದಕ್ಕೆ ಇವೆಲ್ಲವೂ ಸಾಕ್ಷಿ ಎಂದು ಹೇಳಿದ್ದಾರೆ. ಹರೀಶ್‌ ಕೊಲೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರ ಕೊಲೆ ಕುರಿತು ಎನ್‌ಐಎ ತನಿಖೆಗೆ ಆಗ್ರಹ
ಬೆಂಗಳೂರು:
ಬಿಜೆಪಿಯ ಆನೇಕಲ್‌ ತಾಲೂಕು ಎಸ್‌ಸಿ, ಎಸ್‌ಟಿ ಘಟಕದ ಉಪಾಧ್ಯಕ್ಷ ಹೀಲಲಿಗೆ ಹರೀಶ್‌ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದೆ. ಅಲ್ಲದೆ, ಕಳೆದ ನಾಲ್ಕು ವರ್ಷಗಳಲ್ಲಿ ಆನೇಕಲ್‌ ತಾಲೂಕಿನಲ್ಲಿ ನಾಲ್ವರು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಕಾರ್ಯಕರ್ತರ ಹತ್ಯೆಯಾಗಿದ್ದು, ಈ ಎಲ್ಲಾ ಪ್ರಕರಣಗಳ ಕುರಿತು ರಾಷ್ಟ್ರೀಯ ತನಿಖಾ ದಳದಿಂದ (ಎನ್‌ಐಎ) ತನಿಖೆ ನಡೆಸಬೇಕು ಎಂದು ಆಗ್ರಹಿಸಿದೆ.

ವಿಧಾನಸೌಧದ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ವಕ್ತಾರರಾದ ಡಾ.ವಾಮನಾಚಾರ್ಯ, ಅಶ್ವತ್ಥನಾರಾಯಣ ಮತ್ತು ಮುಖಂಡ ಚಿ.ನಾ.ರಾಮು, ಕಳೆದ ಮಾ. 13ರಂದು ಆನೇಕಲ್‌ ಪುರಸಭೆ ಸದಸ್ಯ ಶ್ರೀನಿವಾಸ್‌ ಅಲಿಯಾಸ್‌ ವಾಸು ಎಂಬುವರನ್ನು ಕೊಲೆ ಮಾಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಪುರಸಭೆ ಸದಸ್ಯೆ ಮತ್ತು ಆಕೆಯ ಪುತ್ರ ಇನ್ನೂ ಜೈಲಿನಲ್ಲಿದ್ದಾರೆ. ಇದೇ ರೀತಿ ಹಿಂದೆಯೂ ಎರಡು ಕೊಲೆಗಳು ನಡೆದಿದ್ದು, ಈಗ ಹರೀಶ್‌ ಎಂಬುವರನ್ನು ಕೊಲೆ ಮಾಡಲಾಗಿದೆ. ಆದ್ದರಿಂದ ಈ ಎಲ್ಲಾ ಪ್ರಕರಣಗಳ ಕುರಿತು ಎನ್‌ಐಎ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

5-bng

Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ

4-bng

Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.