ಗರ್ಭಗುಡಿ ಬಿಡ್ಜ್ ಕಂ ಬ್ಯಾರೇಜ್‌ಗೆ ಮರುಜೀವ


Team Udayavani, Jun 2, 2017, 1:29 PM IST

dvg4.jpg

ಹರಪನಹಳ್ಳಿ: ಕಳೆದ ಎರಡು ದಶಕಗಳಿಂದ ನನೆಗುದಿಗೆ ಬಿದಿದ್ದ ತಾಲೂಕಿನ ಗರ್ಭಗುಡಿ ಗ್ರಾಮದ ಬಳಿ ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿದ್ದ “ಗರ್ಭಗುಡಿ ಬಿಡ್ಜ್ ಕಂ ಬ್ಯಾರೇಜ್‌’ ಯೋಜನೆಗೆ ಕಳೆದ ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿರುವುದರಿಂದ ಇದೀಗ ಎರಡು ದಶಕದ ಕನಸು ನನಸಾಗುವ ಕಾಲ ಸಮೀಪಿಸಿದೆ. 

ರಾಷ್ಟ್ರ ನಾಯಕ, ಮಾಜಿ ಮುಖ್ಯಮಂತ್ರಿ ದಿ| ಎಸ್‌ .ನಿಜಲಿಂಗಪ್ಪನವರ ಕನಸಿನ ಕೂಸಾದ ಗರ್ಭಗುಡಿ ಏತ ನೀರಾವರಿ ಯೋಜನೆಗೆ ತಾಂತ್ರಿಕ ತೊಂದರೆ ಹಾಗೂ ಪದೇ ಪದೇ ಕ್ರಿಯೆಯೋಜನೆ ಬದಲಾವಣೆಗೊಳ್ಳುತ್ತಾ ಸಾಗಿತ್ತು. ಆದರೆ ಇದೀಗ ಪರಿಷ್ಕೃತ ದರದೊಂದಿಗೆ ತೆಲಂಗಾಣದಲ್ಲಿ ಅಳವಡಿಸಿರುವ ಪೈಪ್‌ಲೈನ್‌ ಮಾದರಿಯ ಕಾಮಗಾರಿ ನಡೆಸಲು ಸಿದ್ಧತೆ ಕೈಗೊಂಡಿದ್ದು, ಯೋಜನೆ ಟೆಂಡರ್‌ ಹಂತಕ್ಕೆ ಬಂದಿದೆ. 

ಜೆ.ಎಚ್‌. ಪಟೇಲ್‌ ನೇತೃತ್ವದ ಸರ್ಕಾರ ಈ ಯೋಜನೆಗಾಗಿ 1998ರಲ್ಲಿ 9.30 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. 1999ರಲ್ಲಿ ತಾಂತ್ರಿಕ ಅನುಮೋದನೆ ದೊರೆತ ನಂತರ ಅಂದಿನ ಮುಖ್ಯಮಂತ್ರಿ ಜೆ.ಎಚ್‌ .ಪಟೇಲ್‌ ಅವರು ಯೋಜನೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ್ದರು.

ಅಂದಿನಿಂದ ಇಂದಿನವರೆಗೆ ಈ ಯೋಜನೆಯನ್ನು ಜನ ಪ್ರತಿನಿ ಧಿಗಳು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲಾಗುತ್ತಿದೆಯೇ ವಿನಃ ಯಾರು ಪೂರ್ಣಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಇಂದಿನ ಶಾಸಕ ಎಂ.ಪಿ.ರವೀಂದ್ರ ಅವರು ಜನರ ಆಶಯದಂತೆ ಯೋಜನೆ ಅನುಷ್ಠಾನಗೊಳಿಸಲು ಕ್ಯಾಬಿನೆಟ್‌ ಅನುಮತಿ ಪಡೆದುಕೊಂಡಿದ್ದಾರೆ.

ಯೋಜನೆಯ ಉದ್ದೇಶವೇನು?: ಕುಡಿಯುವ ನೀರು, ನೀರಾವರಿ, ಸಂಪರ್ಕ ಸೇತುವೆ, ಮೀನುಗಾರಿಕೆ ಅಭಿವೃದ್ಧಿ ಸೇರಿದಂತೆ ವಿವಿಧೋದ್ದೇಶಗಳನ್ನು ಯೋಜನೆ ಒಳಗೊಂಡಿದ್ದು, ಕಿರು ಜಲಾಶಯ ನಿರ್ಮಾಣದಿಂದ ನದಿಪಾತ್ರದಲ್ಲಿ 19 ಕಿ.ಮೀ ಉದ್ದಕ್ಕೂ 50 ದಶಲಕ್ಷ ಘನ ಅಡಿಯಷ್ಟು ನೀರು ಸಂಗ್ರಹಗೊಳ್ಳಲಿದೆ.

ಇದರಿಂದ ತಾಲೂಕಿನ ಹಲವಾಗಲು, ಕಡತಿ, ನಂದ್ಯಾಲ, ನಿಟ್ಟೂರು, ತಾವರಗೊಂದಿ ಹಾಗೂ ರಾಣಿಬೆನ್ನೂರು ತಾಲೂಕಿನ ಕೆಲವು ಗ್ರಾಮಗಳು ಸೇರಿ ಒಟ್ಟು 3,400 ಎಕರೆ ರೈತರ ಭೂಮಿಗೆ ನೀರುಣಿಸುವುದು ಯೋಜನೆ ಮುಖ್ಯ ಉದ್ದೇಶವಾಗಿದೆ. ಅಲ್ಲದೇ ಹರಪನಹಳ್ಳಿ-ರಾಣಿಬೆನ್ನೂರು ತಾಲೂಕುಗಳ ನಡುವೆ ಪ್ರಯಾಣಿಸಲು 25 ಕಿ.ಮೀ ಅಂತರ ಕಡಿಮೆಯಾಗಲಿದೆ. ಹರಪನಹಳ್ಳಿ-ಕೊಟ್ಟೂರು-ರಾಣಿಬೆನ್ನೂರು ನಡುವಿನ ವ್ಯಾಪಾರ ವಹಿವಾಟಿಗೆ ಅನುಕೂಲವಾಗಲಿದೆ. 

* ಎಸ್‌.ಎನ್‌.ಕುಮಾರ್‌ ಪುಣಬಗಟ್ಟಿ

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.