ಕೆಪಿಸಿಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರಮುಂದುವರಿಕೆ ಸ್ವಾಗತಾರ್ಹ


Team Udayavani, Jun 2, 2017, 3:22 PM IST

hub2.jpg

ಧಾರವಾಡ: ಕೆಪಿಸಿಸಿ ಅಧ್ಯಕ್ಷ ಸ್ಥಾನ ಉತ್ತರ ಕರ್ನಾಟಕಕ್ಕೆ ನೀಡಬೇಕೆಂಬ ಆಗ್ರಹ ನಮ್ಮದಾಗಿತ್ತು. ಆದರೆ ಮುಂದಿನ ಚುನಾವಣೆ ಪರಿಗಣಿಸಿ ಕೆಪಿಸಿಸಿ ಅಧ್ಯಕ್ಷರನ್ನಾಗಿ ಜಿ.ಪರಮೇಶ್ವರ ಅವರನ್ನೇ ಮುಂದುವರಿಸಿದ್ದನ್ನು ಸ್ವಾಗತಿಸುತ್ತೇನೆ ಎಂದು ವಿಧಾನ ಪರಿಷತ್‌ನ ಮಾಜಿ ಅಧ್ಯಕ್ಷ ವೀರಣ್ಣ ಮತ್ತಿಕಟ್ಟಿ ಹೇಳಿದರು. 

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೂಮ್ಮೆ ಕಾಂಗ್ರೆಸ್‌ ಪಕ್ಷ ಚುಕ್ಕಾಣಿ ಹಿಡಿಯಲು ಪಕ್ಷದ ಅಧ್ಯಕ್ಷರಾಗಿ ಜಿ. ಪರಮೇಶ್ವರ ಮತ್ತೂಮ್ಮೆ ಅಧ್ಯಕ್ಷರಾಗಿದ್ದಾರೆ. ಅವರು ಸರ್ವೋತ್ತಮ ನಾಯಕರೂ ಹೌದು.

ಕೆಪಿಸಿಸಿ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರು ಪರಮೇಶ್ವರ ಅವರ ಪಕ್ಷ ಸಂಘಟನೆ ಪರಿಗಣಿಸಿ ಆಯ್ಕೆ ಮಾಡಿದ್ದು ಸಂತೋಷ ತಂದಿದೆ ಎಂದರು. ಉ.ಕ ಭಾಗದ ಎಸ್‌.ಆರ್‌. ಪಾಟೀಲ ಅವರಿಗೆ ಕಾರ್ಯಾಧ್ಯಕ್ಷ ಹಾಗೂ ಸತೀಶ ಜಾರಕಿಹೊಳಿ ಅವರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಾಡಿದ್ದು ಸಮಾಧಾನ ತಂದಿದೆ.

ಪಕ್ಷದಲ್ಲಿ ಹೊಂದಾಣಿಕೆ ಮಾಡಿಕೊಂಡು ಹೋಗುವುದು ಅನಿವಾರ್ಯ. ಮುಂದೆ ಕೆಪಿಸಿಸಿ ಪದಾಧಿಕಾರಿಗಳ ನೇಮಕದಲ್ಲೂ ಈಗ ಅನುಸರಿಸಿದಂತೆಯೇ ಹಿರಿಯರನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿದರು. ರಾಜ್ಯಾದ್ಯಂತ ಪ್ರವಾಸ ಮಾಡುವ ಮೂಲಕ ದಲಿತರ ಮನೆಗೆ ಭೇಟಿ ನೀಡುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಬಿಜೆಪಿ ಮುಖಂಡರು ದಲಿತರ ಒಗ್ಗಟ್ಟು ಒಡೆಯುವ ಕುತಂತ್ರ ನಡೆಸಿದ್ದಾರೆ. 

ದೇಶವನ್ನು ಒಡೆದು ಆಳುವ ರಾಜಕೀಯ ನಡೆಸಿ ಇದೀಗ ರಾಜ್ಯದ ದಲಿತರ ಮನೆಗಳಿಗೆ ಭೇಟಿ ನೀಡುವ ಮೂಲಕ ಅವರಲ್ಲಿ ಬಿರುಕು ತಂದಿಡುವ ಕೆಲಸ ಮಾಡುತ್ತಿದ್ದಾರೆ. ಇದೊಂದು ನಾಟಕೀಯ ತಂತ್ರ. ಆದರೆ, ದಲಿತರ ಸಮುದಾಯದಲ್ಲಿ ಪ್ರಜ್ಞಾವಂತ ಜನರಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ದಲಿತರ ಮತಗಳನ್ನು ಪಡೆಯುವ ಹುನ್ನಾರ ನಡೆಸಿದ ಬಿಜೆಪಿ ಮುಖಂಡರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.  

ದಲಿತ ವಿರೋಧಿ ಬಿಜೆಪಿ: ಚುನಾವಣೆ ಸಂದರ್ಭದಲ್ಲಿ ಮಾತ್ರ ದಲಿತರನ್ನು ನೆನೆಯುವ ಬಿಜೆಪಿ ನಾಯಕರು ದಲಿತರ ಮನೆಯಲ್ಲಿ ಊಟ-ಉಪಾಹಾರ ಮಾಡುವ ಮೂಲಕ ಗಿಮಿಕ್‌ ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಿಜೆಪಿ ನಾಯಕರು ಎಷ್ಟೆ ಗಿಮಿಕ್‌ ಮಾಡಿದರೂ 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವೇ ಅಧಿಕಾರಕ್ಕೆ ಬರುತ್ತದೆ ಎಂದು ತಿಳಿಸಿದರು. 

ದೇಶದಲ್ಲಿ ಜನರು ಒಂದಾಗಿ ಬದುಕಲು ಬಿಜೆಪಿ ಯಾವತ್ತೂ ಬಿಟ್ಟಿಲ್ಲ. ಮೊದಲಿನಿಂದಲೂ ಎಲ್ಲ ಮೀಸಲಾತಿಗಳನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಎಂದಿಗೂ  ಬಿಜೆಪಿಗೆ ಸಾಮಾಜಿಕ ಬದ್ಧತೆಯಿಲ್ಲ. ಆದರೆ ಕಾಂಗ್ರೆಸ್‌ ಪಕ್ಷ ಎಲ್ಲ ಸಮಾಜದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ದೇಶವನ್ನು ಅಭಿವೃದ್ಧಿಯತ್ತ ತಂದಿದೆ ಎಂದರು.   

ಟಾಪ್ ನ್ಯೂಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.