ಸಿದ್ದರಾಮಯ್ಯ ವಿಶ್ವಾಸದ್ರೋಹಿ: ಬಿಎಸ್‌ವೈ
Team Udayavani, Jun 3, 2017, 12:06 PM IST
ಬೀದರ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಸರ್ಕಾರವಲ್ಲ. ರಾಜ್ಯದ ಜನರ ವಿಶ್ವಾಸಕ್ಕೆ ದ್ರೋಹ ಬಗೆದ, ತಲೆ ತಿರುಕ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಹುಮನಾಬಾದ ತಾಲೂಕಿನ ಹುಡಗಿ ಗ್ರಾಮದಲ್ಲಿ ಬಿಜೆಪಿ ಜನಸಂಪರ್ಕ ಅಭಿಯಾನ ನಿಮಿತ್ತ ನಡೆದ “ಬಿಜೆಪಿ ನಡಿಗೆ ಶೋಷಿತರ ಕಡೆಗೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನರ ಏಳ್ಗೆಗಾಗಿ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳನ್ನು ಕೈ ಬಿಟ್ಟು ಚೆಲ್ಲಾಟ ಆಡುತ್ತಿದೆ. ಈ ಸರ್ಕಾರದ ಕಣ್ಣು ತೆರೆಸುವ ಉದ್ದೇಶದಿಂದಲೇ ರಾಜ್ಯದೆಲ್ಲೆಡೆ ಅಭಿಯಾನ ನಡೆಸಲಾಗುತ್ತಿದೆ ಎಂದರು.
ದಲಿತರ ಓಣಿಗಳಲ್ಲಿ ಸಮಸ್ಯೆಗಳು ತಾಂಡವವಾಡುತ್ತಿದ್ದು, ಚರಂಡಿಗಳು ಹೊಲಸಿನಿಂದ ತುಂಬಿ ಹರಿಯುತ್ತಿವೆ. ಇಲ್ಲಿ ಜನ ಮೂಗು ಮುಚ್ಚಿಕೊಂಡು ಓಡಾಡಬೇಕಾದ ಸ್ಥಿತಿ ಇದೆ. ಸದೃಢ ಆರೋಗ್ಯಕ್ಕೆ ಸ್ವತ್ಛತೆಯ ಕಡೆ ಗಮನ ಹರಿಸಬೇಕೆಂಬ ಪ್ರಧಾನ ಮಂತ್ರಿಗಳ ಮನವಿಗೆ ಅಧಿ ಕಾರಿಗಳು ಸ್ಪಂದಿಸುತ್ತಿಲ್ಲ. ದಲಿತರ ಸಮಸ್ಯೆಗೆ ಸ್ಪಂದಿಸದಿದ್ದರೆ ಗತಿ ಏನು ಎಂದು ಪ್ರಶ್ನಿಸಿದರು.
ಮಾಜಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, ದೇಶಕ್ಕೆ ಸ್ವಾತಂತ್ರÂ ಸಿಕ್ಕು 70 ವರ್ಷಗಳು ಕಳೆದಿದ್ದು, ಅದರಲ್ಲಿ 57 ವರ್ಷ ಕಾಂಗ್ರೆಸ್ ಆಡಳಿತ ನಡೆಸಿದೆ. ದೇಶ ಆಳಲು ಕಾಂಗ್ರೆಸ್‌ಗೆ ಬೆನ್ನೆಲುಬಾಗಿ ನಿಂತದ್ದು ದಲಿತರು. ಆದರೆ, ದೀನ-ದಲಿತರ ಅಭಿವೃದ್ಧಿ ಆಗಲಿಲ್ಲ. ಅವರು ಉದ್ಯೋಗಸ್ಥರೂ ಆಗಲಿಲ್ಲ. ದೇಶದಲ್ಲಿ ಅಂದು ವಾಜಪೇಯಿ ಮತ್ತು ಇಂದಿನ ಮೋದಿ ಸರ್ಕಾರ ದೀನ ದಲಿತರ ಶ್ರೇಯೋಭಿವದ್ಧಿಗಾಗಿ ಹಲವು ಯೋಜನೆಗಳನ್ನು ರೂಪಿಸಿ ಸಾಮಾಜಿಕ ನ್ಯಾಯಕ್ಕಾಗಿ ದುಡಿದಿದ್ದಾರೆ ಎಂದು ಹೇಳಿದರು.
ನನ್ನ ಬಗ್ಗೆಸಿನಿಮಾ ಮಾಡುವ ಅವಶ್ಯಕತೆ ಇಲ್ಲ
ಕಲಬುರಗಿ: ನನ್ನ ಬಗ್ಗೆ ಸಿನಿಮಾ ಮಾಡುವ ಅವಶ್ಯಕತೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ನನ್ನ ಬಗ್ಗೆ ಸಿನಿಮಾ ಮಾಡುವ ಬಗ್ಗೆ ಅನೇಕರು ಒತ್ತಾಯಿಸಿದ್ದಾರೆ. ಅವರಿಗೆಲ್ಲ ನಾನು ಒಪ್ಪಿಗೆ ನೀಡಿಲ್ಲ. ತಮ್ಮ ಬಗ್ಗೆ ಸಿನಿಮಾ ಮಾಡುವ ಅವಶ್ಯಕತೆ ಇಲ್ಲ. ಈಗೇನಿದ್ದರೂ ಚುನಾವಣೆ ಮಾತ್ರ ತಮ್ಮೆದುರಿಗಿದ್ದು ಅದರತ್ತ ಗಮನ ಹರಿಸೋಣ
ಎಂದು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.
ಹೋರಾಟ ಹತ್ತಿಕ್ಕುವ ಸರ್ಕಾರ: ರಾಜ್ಯ ಸರ್ಕಾರ ಜನಪರ ಹೋರಾಟಗಳನ್ನು ಹತ್ತಿಕ್ಕುತ್ತಿದೆ. ಗುರುವಾರ ಕೋಲಾರ ಜಿಲ್ಲೆ ಜನರು ಕುಡಿವ ನೀರಿನ ಹಕ್ಕಿಗಾಗಿ ಹೋರಾಡಲು ಬೆಂಗಳೂರಿಗೆ ಹೊರಟಿದ್ದರು. ಅಲ್ಲಿಗೆ ಬಾರದಂತೆ ತಡೆದಿರುವುದೇ ಇದಕ್ಕೆ ನಿದರ್ಶನ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್.ಕೆ. ಪಾಟೀಲ್
Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.