ಪಾಲಿಕೆಯ ನೆರವಿಗೆ ಅಗ್ನಿಶಾಮಕ ದಳ
Team Udayavani, Jun 3, 2017, 12:48 PM IST
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆಯಿಂದ ಉಂಟಾಗುವ ಅನಾಹುತ ತಡೆಯಲು ಅಗ್ನಿಶಾಮಕ ದಳದ ನೆರವು ಪಡೆಯಲು ಬಿಬಿಎಂಪಿ ತೀರ್ಮಾನಿಸಿದೆ. ನಗರದಲ್ಲಿ ಮಳೆಗಾಲದಲ್ಲಿ ಪ್ರತಿವರ್ಷ ಸಾರ್ವಜನಿಕರು ತೊಂದರೆಪಡುವಂತಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಬಿಬಿಎಂಪಿ ಮುಂದಾಗಿದ್ದು, ಅಗ್ನಿಶಾಮಕ ದಳದ ಸುಸಜ್ಜಿತ 24 ತಂಡಗಳ ಎರವಲು ಸೇವೆ ಪಡೆಯಲು ನಿರ್ಧರಿಸಲಾಗಿದೆ.
ಮಳೆ ಬಂದಾಗ ಸಮಸ್ಯೆ ಎದುರಾದ ಸ್ಥಳಕ್ಕೆ ಅಗ್ನಿಶಾಮಕ ದಳ ತತಕ್ಷಣ ಧಾವಿಸಿ ಪರಿಹಾರ ಕಾರ್ಯ ಕೈಗೊಳ್ಳುವುದರ ಜತೆಗೆ ಸಂಕಷ್ಟಕ್ಕೆ ಸಿಲುಕಿರುವ ಸಾರ್ವಜನಿಕರ ರಕ್ಷಣೆ ಹಾಗೂ ಸ್ಥಳಾಂತರಕ್ಕೆ ಒತ್ತು ನೀಡಲಾಗುತ್ತದೆ. ಈಗಾಗಲೇ ಮಳೆಗಾಲ ಸಂದರ್ಭದಲ್ಲಿ ಪರಿಸ್ಥಿತಿ ನಿಭಾಯಿಸಲು ಬಿಬಿಎಂಪಿಯಲ್ಲಿರು ಇರುವ ಅರಣ್ಯ ವಿಭಾಗದ 21 ಹಾಗೂ ಉಪ ವಲಯಗಳ 72 ತಂಡಗಳ ಜತೆಗೂಡಿ ಅಗ್ನಿಶಾಮಕ ದಳ ಕಾರ್ಯನಿರ್ವಹಿಸಲಿದೆ.
ಮುಂಗಾರು ಪೂರ್ವ ಮಳೆಯಿಂದ ನಗರದಲ್ಲಿ ಉಂಟಾಗಿರುವ ಅನಾಹುತಗಳನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಮುನ್ನಚ್ಚರಿಕೆ ಕೈಗೊಳ್ಳುವ ನಿಟ್ಟಿನಲ್ಲಿ ಪಾಲಿಕೆ ಆಯುಕ್ತ ಮಂಜುನಾಥ್ ಪ್ರಸಾದ್ ಎಲ್ಲ ವಲಯಗಳ ಜಂಟಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. “ಜಲಮಂಡಳಿ, ಬಿಡಿಎ, ಬೆಸ್ಕಾಂ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಎಲ್ಲೂ ಯಾವುದೇ ರೀತಿಯ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. ಈಗಿಂದಲೇ ಆ ನಿಟ್ಟಿನಲ್ಲಿ ಕ್ರಿಯಾ ಯೋಜನೆ ರೂಪಿಸಬೇಕು,’ ಎಂದು ಅವರು ಈಗಾಗಲೇ ಸೂಚಿಸಿದ್ದಾರೆ.
ಪಾಲಿಕೆಯ ಉಪ ವಲಯಗಳಲ್ಲಿರುವ ಎಲ್ಲ ತುರ್ತು ನಿರ್ವಹಣಾ ಕೇಂದ್ರಗಳು ದಿನ 24 ಗಂಟೆಗಳು ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಂದ ಬರುವಂತಹ ದೂರುಗಳನ್ನು ಶೀಘ್ರ ಬಗೆಹರಿಸಲು ಮುಂದಾಗಬೇಕು ಎಂದು ಆದೇಶ ನೀಡಿರುವ ಆಯುಕ್ತರು, ಧರೆಗುರುಳುವ ಮರಗಳನ್ನು ಶೀಘ್ರ ತೆರವುಗೊಳಿಸಬೇಕು ಎಂದು ಸೂಚಿಸಿದ್ದಾರೆ. ಪಾಲಿಕೆಯಲ್ಲಿ ಹಾಲಿ ಇರುವ ನಿರ್ವಹಣಾ ತಂಡಗಳ ಜತೆಗೆ ಅಗ್ನಿಶಾಮಕ ದಳದ ತಂಡದ ನೆರವು ಪಡೆಯಲಾಗುವುದು. ತೀರಾ ತುರ್ತು ಪರಿಸ್ಥಿತಿ ಹಾಗೂ ಅಗತ್ಯತೆ ಇರುವ ಕಡೆ ಅಗ್ನಿಶಾಮಕ ದಳದ ನೆರವು ಪಡೆದುಕೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಸದ್ಯ ಅಗ್ನಿಶಾಮಕ ದಳದಲ್ಲಿ 24 ಸುಸಜ್ಜಿತ ತಂಡಗಳಿದ್ದು, ಅಗತ್ಯ ಸಿಬ್ಬಂದಿ ಹಾಗೂ ಕಾರ್ಯಾಚರಣೆಗೆ ಅವಶ್ಯಕವಾದ ವಾಹನಗಳೂ ಇವೆ. ಆದರೆ, ಮಳೆಗಾಲದ ಕಾರ್ಯಾಚರಣೆಗೆ ಅಗತ್ಯವಾದ ಮರಕಡಿಯುವ ಯಂತ್ರ ಮತ್ತಿತರರೇ ಸಲಕರಣೆಗಳ ಕೊರತೆಯಿದೆ. ಅವುಗಳನ್ನು ಒದಗಿಸಿದರೆ ಪಾಲಿಕೆಯೊಂದಿಗೆ ಸೇವೆಗೆ ಸಿದ್ದ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ. ಆ ಹಿನ್ನೆಲೆಯಲ್ಲಿ ಆಯುಕ್ತರು ಪಾಲಿಕೆಯಿಂದ ಅಗತ್ಯ ಸಲಕರಣೆಗಳನ್ನು ಪೂರೈಸುವ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಳೆ ಬೀಳುವ ಪ್ರದೇಶಗಳನ್ನು ಅರಿತು ಕಾರ್ಯಾಚರಣೆ: ಮಳೆ ಬಿದ್ದ ನಂತರ ಪರಿಹಾರ ಕಾರ್ಯ ಕೈಗೊಳ್ಳುವುದಕ್ಕಿಂತ ಮಳೆ ಬೀಳುವ ಮುನ್ನವೇ ಯಾವ ಪ್ರದೇಶದಲ್ಲಿ ಮಳೆಯಾಗಬಹುದು ಎಂಬ ಮಾಹಿತಿ ಪಡೆದು ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲು ಬಿಬಿಎಂಪಿ ಈ ಬಾರಿ ಸಿದ್ಧತೆ ನಡೆಸಿದೆ. ಇದಕ್ಕಾಗಿ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ನಗರದ ಯಾವ ಭಾಗದಲ್ಲಿ ಮಳೆಯಾಗಲಿದೆ ಎಂಬ ಮಾಹಿತಿ ಪಡೆದು ಅದಕ್ಕೆ ಅನುಗುಣವಾಗಿ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ.
ಪಾಲಿಕೆಯು ಮಳೆ ಕುರಿತಂತೆ ನಮ್ಮ ಕೇಂದ್ರದಿಂದ ಮಾಹಿತಿ ನೀಡುವಂತೆ ಕೋರಿದ್ದು, ನಾವು ಆ ಬಗ್ಗೆ ನಮ್ಮಲ್ಲಿ ಸಂಗ್ರಹವಾಗುವ ಎಲ್ಲ ಮಾಹಿತಿ ನೀಡಲಿದ್ದೇವೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಶ್ರೀನಿವಾಸ ರೆಡ್ಡಿ ಮಾಹಿತಿ ನೀಡಿದ್ದಾರೆ.
* ವಿಶೇಷ ವರದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.