ರೈತರ ಮಕ್ಕಳಿಗೆ ಖಾಸಗಿ ಕಾಲೇಜಲ್ಲೂ ಉಚಿತ ಶಿಕ್ಷಣ
Team Udayavani, Jun 4, 2017, 3:45 AM IST
ಬಾಗಲಕೋಟೆ: ಸಾಲಬಾಧೆ ಅಥವಾ ಬೆಳೆ ಹಾನಿಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ಸದ್ಯ ಸರ್ಕಾರ ಉಚಿತ ಶಿಕ್ಷಣ ಕೊಡಿಸುತ್ತಿದೆ. ಇದು ಸರ್ಕಾರಿ ಶಾಲಾ-ಕಾಲೇಜುಗಳಿಗೆ ಮಾತ್ರ ಸಿಮೀತವಾಗಿತ್ತು. ಅದನ್ನು ಖಾಸಗಿ ಶಾಲೆ-ಕಾಲೇಜಿಗೂ ವಿಸ್ತರಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ.
ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ವೃತ್ತಿ ಶಿಕ್ಷಣ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆಗಳು ಜಂಟಿಯಾಗಿ ಹೊಸ ಮಾರ್ಗಸೂಚಿ ತಯಾರಿಸಲು ಮುಂದಾಗಿವೆ ಎಂದು ಉನ್ನತ ಮೂಲಗಳು ಖಚಿತಪಡಿಸಿವೆ.
ಉನ್ನತ ಶಿಕ್ಷಣವರೆಗೂ ಉಚಿತ ಶಿಕ್ಷಣ: ಆತ್ಮಹತ್ಯೆ ಮಾಡಿಕೊಂಡ ರೈತರ ಅರ್ಹ ಪ್ರಕರಣಗಳಲ್ಲಿ ಅವರ ಮಕ್ಕಳಿಗೆ ಉನ್ನತ ಶಿಕ್ಷಣವರೆಗೆ ಉಚಿತ ಶಿಕ್ಷಣ ಕೊಡಲು ಸರ್ಕಾರದ ಶಿಕ್ಷಣ ಇಲಾಖೆ (ಆದೇಶ ಸಂಖ್ಯೆ-ಇಡಿ/31/ವಿವಿಧ-2015) 2015 ನ.13ರಂದು ಆದೇಶ ಹೊರಡಿಸಿದೆ. ಈ ಆದೇಶದ ಪ್ರಕಾರ, ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳು, ಪ್ರಾಥಮಿಕ, ಪ್ರೌಢ, ಪಪೂ, ಪದವಿ ಅಥವಾ ವೃತ್ತಿ ಶಿಕ್ಷಣವನ್ನು ಸರ್ಕಾರಿ ಕಾಲೇಜುಗಳಲ್ಲಿ ಪೂರೈಸಿದರೆ ಅದರ ಶುಲ್ಕ, ವಸತಿ ಸೌಲಭ್ಯ ಒದಗಿಸಲು ಅವಕಾಶವಿದೆ. ಅದೇ ಖಾಸಗಿ ಕಾಲೇಜುಗಳಲ್ಲಿ ಕಲಿತರೆ ಅದರ ಶುಲ್ಕ ಪಾವತಿಸಲು ಅವಕಾಶವಿಲ್ಲ.
ಹೀಗಾಗಿ ಖಾಸಗಿ ಶಾಲೆ-ಕಾಲೇಜುಗಳಲ್ಲಿ ಶಿಕ್ಷಣ ಪಡೆಯುವ ನೊಂದ ಕುಟುಂಬದ ಮಕ್ಕಳಿಗೆ ಅವಕಾಶ ಕಲ್ಪಿಸಬೇಕೆಂಬ ಬೇಡಿಕೆ ಸರ್ಕಾರದ ಮುಂದಿದೆ. ಆದ್ದರಿಂದ ಈಗಿರುವ ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ಉಚಿತ ಶಿಕ್ಷಣ ಕೊಡುವ ಮಾರ್ಗಸೂಚಿಗಳಲ್ಲಿ ಬದಲಾವಣೆ ತರುವ ಅಗತ್ಯವಿದ್ದು, ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ, ಉನ್ನತ ಶಿಕ್ಷಣ ಇಲಾಖೆ ಸಚಿವರೊಂದಿಗೆ ಚರ್ಚೆ ಮಾಡಿದ್ದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ “ಉದಯವಾಣಿ’ಗೆ ತಿಳಿಸಿದ್ದಾರೆ.
ಜಿಲ್ಲೆಯ ಪ್ರಕರಣ ಕಾರಣ: ಜಿಲ್ಲೆಯ ಆತ್ಮಹತ್ಯೆ ಮಾಡಿಕೊಂಡ ರೈತನ ಪ್ರಕರಣವೊಂದು ಇಂಥವೊಂದು ಹೊಸ ಚಿಂತನೆಗೆ ಕಾರಣವಾಗಿದೆ. ಮುಧೋಳ ತಾಲೂಕು ಲಕ್ಷಾನಟ್ಟಿಯ ಲೋಕಣ್ಣ ಕನಕಪ್ಪನವರ ಎಂಬ ರೈತ, 2015ರ ಆ.13ರಂದು ಆತ್ಮಹತ್ಯೆ ಮಾಡಿಕೊಂಡಿದ್ದ. ಅವರ ಇಬ್ಬರು ಮಕ್ಕಳಲ್ಲಿ ಓರ್ವ ವಿಜಯಪುರದ ಬಿಎಲ್‌ಡಿಇ ಸಂಸ್ಥೆಯ ಫಾರ್ಮಸಿ ಕಾಲೇಜಿನಲ್ಲಿ ಹಾಗೂ ಇನ್ನೊಬ್ಬ ಮಗ ಮಂಗಳೂರಿನ ಶ್ರೀನಿವಾಸ ತಾಂತ್ರಿಕ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ. ರೈತ ಲೋಕಣ್ಣ ಅವರ ಪತ್ನಿ ಅನಸೂಯಾ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ, ಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ನೀಡುವ ಉಚಿತ ಶಿಕ್ಷಣ ಸೌಲಭ್ಯವನ್ನು ತಮ್ಮ ಇಬ್ಬರೂ ಮಕ್ಕಳಿಗೆ ನೀಡುವಂತೆ ಕೋರಿದ್ದರು.
ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ಉಚಿತ ಶಿಕ್ಷಣ ಕೊಡಲಾಗುತ್ತಿದೆ. ಆದರೆ, ಖಾಸಗಿ ಶಾಲೆ- ಕಾಲೇಜುಗಳಲ್ಲಿ ಕಲಿತರೆ ಅವರಿಗೆ ಶುಲ್ಕ ಮರುಪಾವತಿ ಹೇಗೆ ಮಾಡಬೇಕು ಎಂಬುದರ ಕುರಿತು ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸಿದ್ದು, ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.
-ಉಮಾಶ್ರೀ, ಜಿಲ್ಲಾ ಉಸ್ತುವಾರಿ ಸಚಿವೆ
ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳು ಖಾಸಗಿ ಕಾಲೇಜಿನಲ್ಲಿ ಕಲಿತರೆ ಅವರಿಗೆ ಶುಲ್ಕ ಪಾವತಿಸಲು ಹೊಸ ನಿಯಮದ ಆದೇಶ ಮಾಡಬೇಕು. ಈ ಕುರಿತು ಬಾಗಲಕೋಟೆಯ ಪ್ರಕರಣ ನನ್ನ ಗಮನಕ್ಕೂ ಬಂದಿದ್ದು, ಈ ಕುರಿತು ಸಂಬಂಧಿಸಿದವರೊಂದಿಗೆ ಚರ್ಚಿಸುವೆ.
-ಕಾಗೋಡು ತಿಮ್ಮಪ್ಪ, ಕಂದಾಯ ಸಚಿವ
– ಶ್ರೀಶೈಲ ಕೆ.ಬಿರಾದಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.