ವಾಸ್ತವದ ಹಾದಿ ಅನುಸರಿಸಿ ಜೀವಂತಿಕೆ ಸಾಧಿಸಿದ ಜನಪದ 


Team Udayavani, Jun 5, 2017, 12:22 PM IST

go-ru-channabassappa.jpg

ಬೆಂಗಳೂರು: “ಜನಪದ ಸಾಹಿತ್ಯ ಆಡಂಬರವಿಲ್ಲದೆ ವಾಸ್ತವದ ನೆಲೆಗಟ್ಟಿನಲ್ಲಿ ರಚಿತಗೊಂಡಿರುವುದರಿಂದಲೇ ಇಂದಿಗೂ ಜೀವಂತಿಕೆ ಉಳಿಸಿಕೊಂಡಿದೆ,’ ಎಂದು ಜಾನಪದ ವಿದ್ವಾಂಸ ಡಾ. ಗೊ.ರು. ಚನ್ನಬಸಪ್ಪ ಅಭಿಪ್ರಾಯಪಟ್ಟರು.

ಭಾನುವಾರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ವಚನ ಜ್ಯೋತಿ ಬಳಗ ಹಾಗೂ ಗೀರ್ವಾಣಿ ಅಕಾಡೆಮಿ ಆಯೋಜಿಸಿದ್ದ ಜಾನಪದ ಕವಯತ್ರಿ ಚಂದ್ರಕಲಾ ಸಂಗಪ್ಪ ಹಾರಕುಡೆ ರಚಿಸಿರುವ “ಚಂದ್ರಸಂಗ ಸಿರಿ’  ಕೃತಿ ಹಾಗೂ” ಚಂದ್ರಸಂಗ ಸಿರಿಗಾನ’ ಧ್ವನಿಸಾಂದ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, “ಪಂಡಿತ ಪಾಮರರು ರಚಿಸಿರುವ ಸಾಹಿತ್ಯ ವರ್ಣನೆಗಳಿಂದ ಕೂಡಿದ್ದು, ವಾಸ್ತವತೆ ಕಡಿಮೆ. ಹೀಗಾಗಿ ಅವರ ಸಾಹಿತ್ಯದಲ್ಲಿರುವ ಬಣ್ಣಗಳ ಲೇಪನ ಕಾಲ ಸರಿದಂತೆ ಮಸುಕಾಗಲಿದೆ. ಆದರೆ ಜನಪದರು ಸ್ವಂತ ಅನುಭವದಿಂದ ರಚಿಸಿರುವ ಸತ್ವಯುತ ಜನಪದ ಸಾಹಿತ್ಯ ಸದಾ ಜೀವಂತಿಕೆ ಕಾಪಾಡಿಕೊಂಡಿದೆ,’ ಎಂದರು.

“ಜನಪದ ಸಾಹಿತ್ಯ  ಹೃದಯದಿಂದ ಮೂಡಿದ ಭಾವನೆಗಳಿಂದ ರಚಿತಗೊಂಡಿದೆ. ಶಾಲೆಯ ಮುಖವನ್ನೇ ಕಾಣದವರು ಸ್ವಂತ ಅನುಭವದಿಂದ ಸರಳವಾಗಿ ಅದ್ಬುತ ಸಾಹಿತ್ಯ ರಚಿಸಿದ್ದಾರೆ. ಅದೇ ರೀತಿ  ವಾಸ್ತವದ ನೆಲೆಗಟ್ಟಿನಲ್ಲಿ ಸಾಹಿತ್ಯ ರಚಿಸಿದ ತತ್ವಪದಕಾರರು ಶ್ರೇಷ್ಠ ಆಧ್ಯಾತ್ಮಕ ಚಿಂತಕರಾಗಿದ್ದರು. ಜೊತೆಗೆ ಲೋಕದ ತಪ್ಪುಗಳನ್ನು ತಮ್ಮ ಮೇಲೆಯೇ ಆರೋಪಿಸಿಕೊಂಡು ವಿಡಂಬನಾತ್ಮಕ ಶೈಲಿಯಲ್ಲಿ ಶರಣರು ರಚಿಸಿದ ವಚನ ಸಾಹಿತ್ಯ ನಿಜವಾದ ಸಾಹಿತ್ಯವಾಗಿದೆ,’ ಎಂದು ಹೇಳಿದರು.

ವಚನ ಜ್ಯೋತಿ ಬಳಗದ ಅಧ್ಯಕ್ಷ  ಎಸ್‌.ಪಿನಾಕಪಾಣಿ ಮಾತನಾಡಿ, “ಕೇವಲ ಐದಾರು ಜನಪದ ಗೀತೆಗಳನ್ನು ಕಲಿತು ಅಂತಾರಾಷ್ಟ್ರೀಯ ಗಾಯಕರು ಎಂದು ತೋರ್ಪಡಿಸಿಕೊಳ್ಳುವವರು ರಾಜಧಾನಿಯಲ್ಲಿದ್ದಾರೆ. ಹೆಣ್ಣುಮಕ್ಕಳಿಗೆ ವೇಷ ಭೂಷಣ ತೊಡಿಸಿ ಜಾನಪದ ಜಾತ್ರೆಯಲ್ಲಿ ಕುಣಿಸುವವರ ಮಧ್ಯೆ, ತಮ್ಮ ನೆನಪಿನ ಶಕ್ತಿಯಿಂದ ಜೀವನಕ್ಕೆ ಹತ್ತಿರವಾಗಿರುವ ಜನಪದ ಹಾಡುಗಳನ್ನು ಹಾಡುತ್ತ  ಅನುಪಮ ಸೇವೆ ಸಲ್ಲಿಸುತ್ತಿರುವ ಚಂದ್ರಕಲಾ ಸಂಗಪ್ಪ ಹಾರಕುಡೆಯವರ ಸಾಧನೆ ಮೆಚ್ಚುವಂತಹದ್ದು,’ ಎಂದರು.

ಹಿರಿಯ ಸಾಹಿತಿ ಡಾ. ಶಿವಾನಂದ ಕುಬಸದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಬಲವಂತರಾವ್‌ ಪಾಟೀಲ್‌, ಬಸವ ಸಮಿತಿ ಹಿರಿಯ ಉಪಾಧ್ಯಕ್ಷ ಪ್ರಭುದೇವ ಚಿಗಟೇರಿ ಮತ್ತಿತರರು ಇದ್ದರು. 

ಟಾಪ್ ನ್ಯೂಸ್

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.