ಸರ್ಕಾರವೇ ಭರಿಸಲಿದೆ ಸಂತ್ರಸ್ತ ಬಾಲಕಿ ವೈದ್ಯಕೀಯ ಚಿಕಿತ್ಸಾ ವೆಚ್ಚ


Team Udayavani, Jun 5, 2017, 12:22 PM IST

vs-ugrappa.jpg

ಬೆಂಗಳೂರು: ಕಾಡುಗೊಂಡನಹಳ್ಳಿಯ ವಯ್ನಾಲಿಕಾವಲ್‌ ಸೊಸೈಟಿ ಬಳಿ ಅತ್ಯಾಚಾರ ಮತ್ತು ಹಲ್ಲೆಗೆ ಒಳಗಾದ ಐದು ವರ್ಷದ ಬಾಲಕಿ ಚಿಕಿತ್ಸೆ ಪಡೆಯುತ್ತಿರುವ ಬೌರಿಂಗ್‌ ಆಸ್ಪತ್ರೆಗೆ ಮಹಿಳಾ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ ವಿ.ಎಸ್‌.ಉಗ್ರಪ್ಪ ನೇತೃತ್ವದ ತಂಡ ಭಾನುವಾರ ಭೇಟಿ ಮಾಹಿತಿ ಸಂಗ್ರಹಿಸಿತು.

ಇದೇ ವೇಳೆ ಸಂತ್ರಸ್ತೆಯ ಪೋಷಕರಿಗೆ ಸಾಂತ್ವನ ಹೇಳಿದ ವಿ.ಎಸ್‌.ಉಗ್ರಪ್ಪ, ಸರ್ಕಾರದಿಂದ ಸಾಧ್ಯವಾದ ಎಲ್ಲಾ ನೆರವನ್ನು ಒದಗಿಸಿಕೊಡುವುದಾಗಿ ಭರವಸೆ ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಉಗ್ರಪ್ಪ, “ದೌರ್ಜನ್ಯಕ್ಕೊಳಗಾದ ಬಾಲಕಿಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಬಾಲಕಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾಳೆ. ಮಗುವಿನ ಒಂದು ಬೆರಳು ತುಂಡಾಗಿದ್ದು, ಇನ್ನೊಂದು ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ಭರವಸೆ ನೀಡಿದ್ದಾರೆ,’ ಎಂದು ತಿಳಿಸಿದರು. 

ಸರ್ಕಾರದಿಂದಲೇ ವೈದ್ಯಕೀಯ ವೆಚ್ಚ: ಬಾಲಕಿಯ ಚಿಕಿತ್ಸೆಗೆ ತಗಲುವ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಬಾಲಕಿ ಪೋಷಕರು ಆರ್ಥಿಕವಾಗಿ ಹಿಂದುಳಿದಿರುವುದರಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಬರುವ ಪ್ರಾಯೋಜಕತ್ವ ಯೋಜನೆಯಡಿ ಪ್ರತಿ ತಿಂಗಳು ಒಂದು ಸಾವಿರ ರೂ. ಭತ್ಯೆ ಹಾಗೂ 25 ಸಾವಿರ ರೂ. ಚಿಕಿತ್ಸಾ ವೆಚ್ಚ ನೀಡುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ವಿವರಿಸಿದರು. ಈ ವೇಳೆ ವಿಧಾನ ಪರಿಷತ್‌ ಸದಸ್ಯೆ ಮೊಟಮ್ಮ, ಜನವಾದಿ ಮಹಿಳಾ ಸಂಘಟನೆಯ ಉಪಾಧ್ಯಕ್ಷೆ ವಿಮಲಾ ಇತರರು ಇದ್ದರು.

ಆರೋಪಿಗೆ ನ್ಯಾಯಾಂಗ ಬಂಧನ: ಅತ್ಯಾಚಾರ ಆರೋಪಿ ಚಿತ್ರದುರ್ಗದ ಕೊಂಡ್ಲಹಳ್ಳಿ ಮೂಲದ ವೀರೇಶ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಶನಿವಾರ ಆರೋಪಿಯನ್ನು ಬಂಧಿಸಿದ್ದ ಕೆ.ಜಿ.ಹಳ್ಳಿ ಪೊಲೀಸರು ಭಾನುವಾರ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.

ಬಾಲಕಿ ಮೇಲೆ ನಡೆದ ಆತ್ಯಾಚಾರ ಕೃತ್ಯ ಅಮಾನವೀಯ. ನಾಗರಿಕ ಸಮಾಜದಲ್ಲಿ ಇಂತಹ ಘಟನೆ ಮರುಕಳಿಸಬಾರದು. ಬಂಧನದಲ್ಲಿರುವ ಆರೋಪಿಯ ವಿರುದ್ಧ ಶೀಘ್ರವೇ ಆರೋಪಪಟ್ಟಿ ಸಲ್ಲಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ 
– ವಿ.ಎಸ್‌ ಉಗ್ರಪ್ಪ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ 

ಟಾಪ್ ನ್ಯೂಸ್

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

We are investigating Rahul’s British citizenship: Government to High Court!

ರಾಹುಲ್‌ ಬ್ರಿಟನ್‌ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!

ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Hard Disk: ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Gambir-family

Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್‌ ಗಂಭೀರ್‌ ಭಾರತಕ್ಕೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

We are investigating Rahul’s British citizenship: Government to High Court!

ರಾಹುಲ್‌ ಬ್ರಿಟನ್‌ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!

ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Hard Disk: ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.