ಜಾತಿ ರಾಜಕಾರಣ ತೊಲಗಲಿ
Team Udayavani, Jun 5, 2017, 4:31 PM IST
ವಾಡಿ: ಜಾತಿ ನಾಶವಾಗಲಿ ಎಂದು ಶರಣು ಹೋರಾಡಿದರೆ, ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ರಾಜಕಾರಣ ಜಾತಿ ಬಲದ ಮೇಲೆಯೇ ನಿಂತಿದೆ. ಇದು ಆದಷ್ಟು ಬೇಗ ತೊಲಗಬೇಕು ಎಂದು ಚಿತ್ರದುರ್ಗ ಆದಿಜಾಂಬವ ಪೀಠದ ಪೂಜ್ಯ ಶ್ರೀ ಷಡಕ್ಷರಿಮುನಿ ದೇಶಿಕೇಂದ್ರ ಸ್ವಾಮೀಜಿ ನುಡಿದರು.
ಮಾಜಿ ಉಪಪ್ರಧಾನಿ ಡಾ| ಬಾಬು ಜಗಜೀವನರಾಂ ಅವರ 110ನೇ ಜಯಂತಿ ನಿಮಿತ್ತ ಮಾದಿಗ ಸಮಾಜದ ವತಿಯಿಂದ ಪಟ್ಟಣದ ಮಹಾತ್ಮಾಗಾಂ ಧಿ ವೃತ್ತದಲ್ಲಿ ಏರ್ಪಡಿಸಲಾಗಿದ್ದ ಮಾದಿಗರ ಮಹಾ ಸಮಾವೇಶದ ಸಾನ್ನಿಧ್ಯ ವಹಿಸಿ ಶ್ರೀಗಳು ಅಶೀರ್ವಚನ ನೀಡಿದರು.
ತುಳಿತಕ್ಕೊಳಗಾದ ಜಾತಿಯ ಜನಾಂಗವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಮೇಲೆತ್ತಬೇಕಾದ ಇಂದಿನ ರಾಜಕಾರಣಿಗಳು, ಜಾತ್ಯತೀತತೆ ಹೆಸರಿನಲ್ಲಿ ಜಾತಿ ರಾಜಕಾರಣವನ್ನೇ ಮಾಡಿಕೊಂಡು ಬರುತ್ತಿವೆ. ಇದು ಸಮಾಜದ ಪ್ರಗತಿಗೆ ಅಡ್ಡಿಯಾಗುತ್ತಿದೆ ಎಂದು ಹೇಳಿದರು.
ಮಾಜಿ ಶಾಸಕ ವಾಲ್ಮೀಕಿ ನಾಯಕ ಮಾತನಾಡಿ, ದಲಿತರು ಶಿಕ್ಷಣ ಸೌಲಭ್ಯದ ಲಾಭ ಪಡೆದು ಅಧಿ ಕಾರದ ಚುಕ್ಕಾಣಿ ಹಿಡಿಯಬೇಕು. ಅನ್ಯಾಯದ ವಿರುದ್ಧ ಪ್ರತಿಭಟಿಸಿ ಸಾಮಾಜಿಕವಾಗಿ ಜಾಗೃತರಾಗಬೇಕು ಎಂದು ಹೇಳಿದರು. ಬೌದ್ಧ ಸಮಾಜದ ಅಧ್ಯಕ್ಷ ಟೋಪಣ್ಣ ಕೋಮಟೆ, ಮಾದಿಗ ಸಮಾಜದ ಹಿರಿಯ ಮುಖಂಡ ರಾಜು ಮುಕ್ಕಣ್ಣ ಮಾತನಾಡಿದರು.
ಎಸಿಸಿ ಕಾರ್ಖಾನೆಯ ಸೌತ್ ಕ್ಲಸ್ಟರ್ ಹೆಡ್ ಡಾ| ಎಸ್.ಬಿ.ಸಿಂಗ್, ಉದಯಕುಮಾರ ಪವಾರ, ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ರಿಚ್ಚರ್ಡ್ ಮರೆಡ್ಡಿ, ಗೌರವಾಧ್ಯಕ್ಷ ಚಂದಪ್ಪ ಕಟ್ಟಿಮನಿ, ಮುಖಂಡರಾದ ಪರಶುರಾಮ ಕಟ್ಟಿಮನಿ, ಶರನಪ್ಪ ಪಗಲಾಪುರ, ರವಿ ಹೊಸಮನಿ, ದಶರಥ ಕಲಗುರ್ತಿ, ಶಿವಲಿಂಗಪ್ಪ ಪುಟಗಿ, ಖಂಡೆಪ್ಪ ದಾಸನ, ಜಯಪ್ರಕಾಶ ಪವಾರ ಮತ್ತಿತರರು ಪಾಲ್ಗೊಂಡಿದ್ದರು.
ಪುರಸಭೆ ಸದಸ್ಯ ದೇವಿಂದ್ರ ಕರದಳ್ಳಿ ಸ್ವಾಗತಿಸಿದರು. ಗುರುನಾಥ ಮಣಿಗಿರಿ ನಿರೂಪಿಸಿ, ವಂದಿಸಿದರು. ಸಂಜೆ ಡಾ| ಬಾಬು ಜಗಜೀವನರಾಂ ಅವರ ಭಾವಚಿತ್ರ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ನಡೆಯಿತು. ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಮಾದಿಗ ಸಮಾಜದ ಸಾವಿರಾರು ಜನರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.