ಐವರು ಮನೆ ಕಳ್ಳರು, ದರೋಡೆಕೋರರ ಬಂಧನ


Team Udayavani, Jun 7, 2017, 1:31 PM IST

arrest.jpg

ಬೆಂಗಳೂರು: ಮನೆ ಕಳವು, ದರೋಡೆ ಮತ್ತು ಸರಗಳವು ಮಾಡುತ್ತಿದ್ದ 9 ಆರೋಪಿಗಳನ್ನು ಬಂಧಿಸಿರುವ ದಕ್ಷಿಣ ವಿಭಾಗದ ಪೊಲೀಸರು 34 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಮನೆ ಕಳವು ಮಾಡುತ್ತಿದ್ದ ಭಾರತಿ ನಗರದ ನಯಾಜ್‌ ಖಾನ್‌ (33), ದೇವರಜೀವನಹಳ್ಳಿಯ ಅಪ್ಸರ್‌ (31)ಎಂಬುವವರನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇವರಿಂದ 17 ಲಕ್ಷ ಮೌಲ್ಯದ 550 ಗ್ರಾಂ ಚಿನ್ನಾಭರಣ, ಬೆಳ್ಳಿ ವಸ್ತುಗಳು ಸೇರಿದಂತೆ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಹಗಲು ಮತ್ತು ರಾತ್ರಿ ವೇಳೆ ಬೀಗ ಹಾಕಿರುವ ಮನೆಗಳು, ಬಾಗಿಲು ತೆರೆದಿರುವ ಮನೆಗಳನ್ನು ಗುರುತಿಸಿಕೊಳ್ಳುತ್ತಿದ್ದರು. ಬಳಿಕ ಬೀಗ ಮುರಿದು ಕಳ್ಳತನ ಮಾಡುತ್ತಿದ್ದರು. ಸುಬ್ರಹ್ಮಣ್ಯಪುರದಲ್ಲಿ ನಡೆದ ಕಳವು ಪ್ರಕರಣವೊಂದರಲ್ಲಿ ಸಂಗ್ರಹಿಸಿದ ಬೆರಳಚ್ಚು ಮಾದರಿಯನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಡಾ ಶರಣಪ್ಪ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮನೆಗಳ್ಳತನ ಮಾಡುತ್ತಿದ್ದ ಜಯನಗರದ ನಿವಾಸಿ ಮುನಿರಾಜು (28)ನನ್ನು  ಕೋಣನಕುಂಟೆ ಪೊಲೀಸರು ಬಂಧಿಸಿದ್ದು, 70ಗ್ರಾಂ ತೂಕದ 3 ಚಿನ್ನದ ಸರಗಳು, 1 ಉಂಗುರ, 1 ಕೆ.ಜಿ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯು ಅನ್ನಪೂರ್ಣೇಶ್ವರಿ ಲೇಔಟ್‌ನ ಡಾ. ನಕುಲ… ಎಂಬುವರ ಮನೆಯ ಕಿಟಕಿ ಗ್ರಿಲ… ಮುರಿದು ಕಳ್ಳತನ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೂಂದು ಪ್ರಕರಣದಲ್ಲಿ ಕೆಐಇಟಿ ಪಾಲಿಟೆಕ್ನಿಕ್‌ನ ಉಪನ್ಯಾಸಕರಾದ ಲೋಕೇಶ್‌ ಎಂಬುವರ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದ ಸರಬಂಟೆ ಪಾಳ್ಯದ ಶಿವಾನಂದ  (35) ಎಂಬಾತನನ್ನು ಕುಮಾರಸ್ವಾಮಿ ಲೇಔಟ್‌ ಪೊಲೀಸರು ಬಂಧಿಸಿದ್ದಾರೆ. ಈತನಿಂದ 7.5 ಲಕ್ಷ ಮೌಲ್ಯದ 450 ಗ್ರಾಂ ಚಿನ್ನಾಭರಣ, ಎಲ್‌ಸಿಡಿ ಟಿವಿಯನ್ನು ವಶಪಡಿಸಿಕೊಂಡಿದ್ದಾರೆ. ಮೇ 12 ರಂದು ಲೋಕೇಶ್‌ ಎಂಬುವರು ಕುಟುಂಬ ಸಮೇತ ಕುಕ್ಕೆಸುಬ್ರಹ್ಮಣ್ಯಕ್ಕೆ ಹೋಗಿದ್ದರು. ಈ ವೇಳೆ ಅವರ ಮನೆಯ ಹಿಂಭಾಗದ ಗ್ರಿಲ್‌ ಮುರಿದು ಒಳ ನುಗ್ಗಿದ ಆರೋಪಿ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸರಗಳ್ಳನ ಬಂಧನ: ಕಳವು ಮಾಡಿದ ಬೈಕ್‌ನಲ್ಲಿ ಸುತ್ತಾಡುತ್ತ ಒಂಟಿಯಾಗಿ ಓಡಾಡುವ ಮಹಿಳೆಯರಿಗೆ ಚಾಕು ತೋರಿಸಿ ಬೆದರಿಸಿ ಚಿನ್ನದ ಸರಗಳನ್ನು ಕಳವು ಮಾಡುತ್ತಿದ್ದ ಶ್ಯಾಮಣ್ಣ ಗಾರ್ಡನ್‌ನ ಅಬ್ರಾರ್‌ ಪಾಷಾ (28)ಎಂಬಾತನನ್ನು ಕೆಂಪೇಗೌಡ ನಗರ ಪೊಲೀಸರು ಬಂಧಿಸಿದ್ದಾರೆ.

ಈತನಿಂದ 7.20 ಲಕ್ಷ ಮೌಲ್ಯದ 277 ಗ್ರಾಂ ತೂಕದ ಚಿನ್ನದ ಸರಗಳು, ಒಂದು ಬೈಕ್‌ನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ಕೆಂಪೇಗೌಡ ನಗರ, ಶಂಕರಪುರ, ಹನುಮಂತನಗರ, ಗಿರಿನಗರ, ಸಿ.ಕೆ.ಅಚ್ಚುಕಟ್ಟು ಪ್ರದೇಶದ ನಿರ್ಜನ ಪ್ರದೇಶಗಳಲ್ಲಿ ಸುತ್ತಾಡುತ್ತ ಒಂಟಿ ಮಹಿಳೆಯರನ್ನು ಬೆದರಿಸಿ ಚಿನ್ನದ ಸರಗಳನ್ನು ದೋಚಿ ಪರಾರಿಯಾಗುತ್ತಿದ್ದ. ಆರೋಪಿಯ ಬಂಧನದಿಂದ ಇತರೆ 5 ಪ್ರಕರಣಗಳು ಬೆಳಕಿಗೆ ಬಂದಿವೆ.

ದರೋಡೆಕೋರರ ಬಂಧನ: ರಾತ್ರಿವೇಳೆ ಒಂಟಿಯಾಗಿ ಓಡಾಡುವವರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ ಸುಲಿಗೆ ಮಾಡುತ್ತಿದ್ದ ನಾಲ್ವರು ದರೋಡೆಕೋರರನ್ನು ಹನುಮಂತನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಹಳ್ಳಿಯ ಮೂಕಾಂಬಿಕಾ ನಗರದ ಪ್ರವೀಣ್‌ ಕುಮಾರ್‌ (19), ಕರಿಯಾ (20), ಹರೀಶ್‌(24), ಮಂಜುನಾಥ (19) ಬಂಧಿತರು.

ಆರೋಪಿಗಳು ಶ್ರೀನಗರದ ಸಪ್ತಗಿರಿ ಶಾಲೆಯ ಬಳಿ ಒಂಟಿಯಾಗಿ ಓಡಾಡುವವರನ್ನು ಟಾರ್ಗೆಟ್‌ ಮಾಡಿಕೊಂಡು ಹಣ ಮತ್ತು ಚಿನ್ನಾಭರಣಗಳನ್ನು ಸುಲಿಗೆ ಮಾಡುತ್ತಿದ್ದರು. ಸೋಮವಾರ ರಾತ್ರಿ ಡಕಾಯಿತಿಗೆ ಹೊಂಚು ಹಾಕುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಡಾ ಶರಣಪ್ಪ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.