ಹಿರಿಯ ಇಲಾಖಾಧಿಕಾರಿಗಳು ಗೈರು: ತಾ.ಪಂ. ಇಒ ಗರಂ 


Team Udayavani, Jun 7, 2017, 3:14 PM IST

0606bteph7.jpg

ಬಂಟ್ವಾಳ : ತಾಲೂಕು ಮಟ್ಟದ ಪ್ರಮುಖ ಸಭೆಗಳಿಗೆ ಹಿರಿಯ ಅಧಿಕಾರಿಗಳು ಗೈರಾಗಿ ತಮ್ಮ ಪ್ರತಿನಿಧಿಗಳನ್ನಾಗಿ ಕಿರಿಯ ಅಧಿಕಾರಿಗಳನ್ನು ಅಥವಾ ಸಿಬಂದಿಯನ್ನು ಕಳುಹಿಸುತ್ತಾರೆ. ಇದರಿಂದಾಗಿ ಸಭೆಗಳಲ್ಲಿ ಸರಿಯಾದ ಮಾಹಿತಿ ದೊರೆಯುತ್ತಿಲ್ಲ. ಹಿರಿಯ ಅಧಿಕಾರಿಗಳು ಇದೇ ರೀತಿ ಮಾಡಿದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬಂಟ್ವಾಳ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯಾನ್‌ ಮಿರಾಂದ ಹೇಳಿದ್ದಾರೆ.

ಬಿ.ಸಿ. ರೋಡ್‌ ಎಸ್‌ಜಿಎಸ್‌ವೈ ಸಭಾಂಗಣದಲ್ಲಿ  ಜೂ.6ರಂದು  ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಬಹುತೇಕ ಇಲಾಖೆಗಳ ಹಿರಿಯ ಅಧಿಕಾರಿಗಳು ಗೈರಾಗಿ ಕಿರಿಯ ಅಧಿಕಾರಿಗಳು ಪ್ರತಿನಿಧಿಸಿದ ಸಂದರ್ಭದಲ್ಲಿ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಸಭೆ ಕಾಟಾಚಾರಕ್ಕೆ ಅಲ್ಲ 
“ನಾವಿಲ್ಲಿ ಸಭೆ ನಡೆಸುವುದು ಕಾಟಾಚಾರಕ್ಕೆ ಅಲ್ಲ’ ಎಂದ  ಇಒ ಅವರು, ಪ್ರಗತಿ ಪರಿಶೀಲನೆಯ ಸಂದರ್ಭ ಕೆಳ ಮಟ್ಟದ ಅಧಿಕಾರಿಗಳಿಂದ ಸೂಕ್ತ ಮತ್ತು ಸ್ಪಷ್ಟ ಉತ್ತರ ಸಿಗದಿರುವುದರಿಂದ ಅಸಮಾಧಾನಗೊಂಡರು. ನಿಖರ ಮಾಹಿತಿ, ಲಿಖೀತ ದಾಖಲೆ, ವಿಚಾರದ ಬಗ್ಗೆ ಸಂಪೂರ್ಣ ಅರಿವು ಇಲ್ಲದವರು ಸಭೆಗೆ ಬಂದರೆ ಹಾಜರಿ ಹಾಕಿದಂತೆ ಆಗುತ್ತದೆ ಹೊರತು ಪ್ರಯೋಜನ ಆಗುವುದಿಲ್ಲ ಎಂದರು.ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಎಸ್ಸಿ-ಎಸ್ಟಿ ಸಭೆಗೂ ಹೆಚ್ಚಿನ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಾಗದೆ, ಕೆಳ ಹಂತದ ಅಧಿಕಾರಿಗಳನ್ನು ಕಳುಹಿಸಿದ್ದಾರೆ. ಈ ಸಭೆಯಲ್ಲೂ ಅದೇ ಪುನರಾವರ್ತನೆಗೊಂಡಿದೆ ಎಂದು  ಇಒ ಹೇಳಿದರು.

“ಇಲ್ಲಸಲ್ಲದ ಸಬೂಬು ಹೇಳಿ ತಾಲೂಕು ಮಟ್ಟದ ಅಧಿಕಾರಿಗಳು ಸಭೆಗಳಿಗೆ ತಪ್ಪಿಸುತ್ತಿರುವುದು ಹವ್ಯಾಸವಾಗಿಬಿಟ್ಟಿದೆ. ನೇರವಾಗಿ ಸಭೆಗೆ ಬರುವ ನಿಮ್ಮಲ್ಲಿ ಇಲಾಖೆಗಳ ಪ್ರಗತಿಯ ಯಾವುದೇ ಮಾಹಿತಿ ಇರುವುದಿಲ್ಲ. ಸಭೆಯಲ್ಲಿ  ವ್ಯಕ್ತವಾದ ಪ್ರಶ್ನೆಗಳಿಗೆ  ನಿಮ್ಮಿಂದ ಏನು ಉತ್ತರ ದೊರೆಯುತ್ತದೆ’ ಎಂದು ಪ್ರಶ್ನಿಸಿದರು.

ಪ್ರಮುಖ ಸಭೆಗಳಿಗೆ ಬೇಕಾದ ಅಧಿಕಾರಿಗಳು ಗೆ„ರು ಆಗುವುದರಿಂದ ಸಮಸ್ಯೆಯಾಗುತ್ತಿದೆ. ನಮ್ಮ ಮಾತಿಗೆ ಬೆಲೆ ನೀಡಿ. ಮುಂದಿನ ಸಭೆಗೆ ಇದೇ ರೀತಿ ಪುನರಾವರ್ತನೆಯಾದರೆ ಅಂತವರ ಮೇಲೆ ಸೂಕ್ತ ಕ್ರಮ ಜರಗಿಸಲು ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು, ಈ ವಿಷಯವನ್ನು ನಿಮ್ಮ ಮೇಲಧಿಕಾರಿಗಳಿಗೆ ತಲುಪಿಸಿ ಎಂದರು.

ಸಭೆಯಲ್ಲಿ  ಕೆಳ ಮಟ್ಟದ ಅಧಿಕಾರಿಯೊಬ್ಬರು ತಮ್ಮ ಇಲಾಖೆಯಲ್ಲಿ ನಡೆಸಿದ ಕಾರ್ಯಕ್ರಮವೊಂದನ್ನು ವಿವರಿಸುತ್ತಿದ್ದಂತೆ ಮಧ್ಯೆ ಪ್ರವೇಶಿಸಿದ ಇಒ ಕಾರ್ಯಕ್ರಮದ ಮಾಹಿತಿ ಇಲ್ಲಿ ಆವಶ್ಯಕತೆ ಇಲ್ಲ. ಇಲಾಖೆಯಲ್ಲಿ ಆದ ಪ್ರಗತಿಯ ಬಗ್ಗೆ ಸಭೆಗೆ ಮಾಹಿತಿ ಕೊಡಿ ಎಂದಾಗ ಪ್ರಗತಿಯ ಬಗ್ಗೆ ಅಧಿಕಾರಿಯಲ್ಲಿ ಯಾವುದೇ ಮಾಹಿತಿ ಇರಲಿಲ್ಲ. ಇದಕ್ಕೆ ಪ್ರತಿಕ್ರಿಯಿಸಿದ ಇಒ ಇದೇ ಕಾರಣಕ್ಕೆ ಸಭೆಗೆ ನೀವು ಬರಬೇಡಿ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳೇ ಬರಬೇಕು ಎಂದು ಸ್ಪಷ್ಟನೆ ನೀಡಿದರು.

ಸೌಲಭ್ಯ ದೊರೆಯುವಂತೆ ಮಾಡಿ 
ಅರಣ್ಯ ಇಲಾಖೆಯ ಪ್ರಗತಿ ಪರಿಶೀಲನೆ  ವೇಳೆ ಪ್ರತಿಕ್ರಿಯಿಸಿದ ಇಒ  ಅವರು, ಅರಣ್ಯ ಇಲಾಖೆಯಿಂದ ಲಭ್ಯವಾಗುವ 
ಸೌಲಭ್ಯಗಳನ್ನು ಎಲ್ಲ ವರ್ಗಗಳ‌ ಜನರಿಗೂ ತಲುಪುವಂತೆ ಮಾಡಿ. ವಲಯ ಅರಣ್ಯ ಇಲಾಖೆಯಲ್ಲಿ ಸಾರ್ವಜನಿಕರಿಗಾಗಿ ನೆಡುವುದಕ್ಕೆ ನೀಡಲು ಗಿಡ ಎಷ್ಟಿದೆ,  ಅದರ ದಾಖಲೆಗಳೇನು, ಯಾವ ಗಿಡ ಎಷ್ಟು ಲಭ್ಯತೆಯಲ್ಲಿ ದೊರೆಯುತ್ತದೆ. ಎಲ್ಲೆಲ್ಲಿ ಗಿಡ ನೆಡುವುದಕ್ಕೆ ಗುರುತು ಮಾಡಿಕೊಳ್ಳಲಾಗಿದೆ ಎಂದು ಪ್ರಶ್ನಿಸಿದರು.

ಅರಣ್ಯ ಇಲಾಖೆಯನ್ನು ಪ್ರತಿನಿಧಿಸಿದ ಅಧಿಕಾರಿ ಉತ್ತರಿಸಲು ತಡವರಿಸಿದರು. ಇದರಿಂದ ಅಸಮಾಧಾನಗೊಂಡ ಇಒ “ಅಂಕಿ ಅಂಶ ವಿವರಗಳಿಲ್ಲ, ಕೇಳಿದ ಪ್ರಶ್ನೆಗೆ ಅರ್ಹ ಉತ್ತರಗಳಿಲ್ಲ, ಒಟ್ಟಾರೆ ಸಭೆಗೆ ಬರುವುದು. ಸಭೆ ಮುಗಿದ ಅನಂತರ ಇನ್ನೊಂದು ಸಭೆಗೆ ಬರುವಾಗ ನೋಡಿಕೊಂಡರಾಯಿತು ಎಂಬ ಧೋರಣೆಯು ಸರಿಯಾದ ಕ್ರಮವಲ್ಲ ‘ ಎಂದು ಹೇಳಿದರು.

ಬಂಟ್ವಾಳ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಅಬ್ಟಾಸ್‌ ಅಲಿ, ಸ್ಥಾಯೀ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ ಉಪಸ್ಥಿತರಿದ್ದರು.

34 ಶಂಕಿತ ಡೆಂಗ್ಯೂ ಪ್ರಕರಣ
ಕೇಪು ಮತ್ತು ಪುಣಚ ಗ್ರಾಮಗಳಲ್ಲಿ ತಲಾ ಒಂದೊಂದು ಇಲಿ ಜ್ವರ, ಪುಣಚದಲ್ಲಿ 12  ಡೆಂಗ್ಯೂ ದೃಢೀಕರಣ,  34 ಶಂಕಿತ ಪ್ರಕರಣಗಳು ಪತ್ತೆಯಾಗಿವೆ.  ಪುದು ಗ್ರಾಮದಲ್ಲಿ 2, ಬೆಂಜನಪದವಿನಲ್ಲಿ 1 ಮಲೇರಿಯಾ ಪ್ರಕರಣ ಪತ್ತೆಯಾಗಿದೆ. ರೋಗ‌ ನಿಯಂತ್ರಣದ ಬಗ್ಗೆ ಆರೋಗ್ಯ ಕಾರ್ಯಕರ್ತೆಯರಿಂದ  ಜಾಗƒತಿ ಮೂಡಿಸಲಾಗುತ್ತಿದೆ. ಭಯಪಡುವ ಆವಶ್ಯಕತೆ ಇಲ್ಲ ಎಂದು ಆರೋಗ್ಯಾಧಿಕಾರಿ ಡಾ|  ದೀಪಾ ಪ್ರಭು ಹೇಳಿದರು.

ಟಾಪ್ ನ್ಯೂಸ್

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

GTD

Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ

KH-Muniyappa

Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

2(1)

AI ಆರೋಗ್ಯ ರಕ್ಷಣೆಯ ವ್ಯವಸ್ಥೆಯಲ್ಲಿ ಸ್ವೀಕಾರದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆಯೇ?

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.