ತ್ಯಾಜ್ಯ: ಸಾಂಕ್ರಾಮಿಕ ರೋಗ ಭೀತಿ; ಎಷ್ಟು  ಹೇಳಿದರೂ ಚಾಳಿ ಬಿಡದ ಜನರು

Team Udayavani, Jun 7, 2017, 4:11 PM IST

06062017KLR-E-3(A).jpg

ಕೋಟೇಶ್ವರ: ಇಲ್ಲಿನ ಗ್ರಾ.ಪಂ. ವ್ಯಾಪ್ತಿಯ ರಾ. ಹೆದ್ದಾರಿ ಹಾಗೂ ಒಳಭಾಗಗಳಲ್ಲಿ ಸುರಿಯುತ್ತಿರುವ ತ್ಯಾಜ್ಯ ವಿಲೇವಾರಿ ಮಾಡಿರುವ ಗ್ರಾ.ಪಂ.ಗೆ ಮತ್ತೆ ತಲೆ ಎತ್ತಿರುವ ಮೂಟೆಗಟ್ಟಲೆ ತ್ಯಾಜ್ಯವು ಸಾಂಕ್ರಾಮಿಕ ರೋಗ ಹರಡುವ ಭೀತಿ ಉಂಟುಮಾಡಿದ್ದು ಮುಂಬರುವ ಮಳೆಗಾಲದಲ್ಲಿ ಈ ಭಾಗದಲ್ಲಿ ವಾಸವಾಗಿರುವ ಮಂದಿ ಭಯದ ಪರಿಸರದಲ್ಲಿ ಜೀವಿಸಬೇಕಾದ ಸಂದಿಗ್ಧ  ಪರಿಸ್ಥಿತಿ ಬಂದೊದಗಿದೆ.

ಮಳೆಗಾಲದ ಮೊದಲು ರಾ.ಹೆ.ಯ ಇಕ್ಕೆಲಗಳಲ್ಲಿ ಮೂಟೆಗಟ್ಟಲೆ ಎಸೆದು ಹೋದ ತ್ಯಾಜ್ಯ ವಸ್ತುಗಳನ್ನು ವಿಲೇವಾರಿಗೊಳಿಸಿ ಆ ಭಾಗದ ಪ್ರದೇಶದಲ್ಲಿ ಎಚ್ಚರಿಕೆಯ ಫಲಕ ಹಾಕಿ ಜನಜಾಗೃತಿಯ ಮುನ್ನೆಚ್ಚರಿಕೆ ನೀಡಲಾಗಿದ್ದರೂ ಇದೀಗ ಮತ್ತೆ ಅದೇ ಹಳೆ ಚಾಳಿ ಆರಂಭವಾಗಿದ್ದು ಅಲ್ಲಲ್ಲಿ ತ್ಯಾಜ್ಯಗಳನ್ನು ಎಸೆದು ಸಾಗುವ ಮಂದಿಯ ಈ ವರ್ತನೆಗೆ ಪಂಚಾಯತ್‌ ವ್ಯವಸ್ಥೆ ಕೈಚೆಲ್ಲಿ ಕುಳಿತುಕೊಳ್ಳಬೇಕಾಗಿದೆ. 

ಇಲ್ಲಿನ ಹಿಂದೂ ರುದ್ರಭೂಮಿಯ ಎದುರಿನ ರಸ್ತೆಯಲ್ಲಿ ಆರಂಭಗೊಳ್ಳುತ್ತಿರುವ ಬೃಹತ್‌ ಕಟ್ಟಡದ ಸನಿಹದ ಒಳಚರಂಡಿಯನ್ನು ತ್ಯಾಜ್ಯ ವಿಲೇವಾರಿ ಹಾಕಲು ಕೆಲವೊಂದು ಮಂದಿ ಬಳಸುತ್ತಿರುವುದು ತೀರಾ ಅಸಹನೀಯ ವರ್ತನೆಯಾಗಿ ಮೂಡಿಬಂದಿದೆ. ಅದೆಷ್ಟೋ ಬಾರಿ ಜನಜಾಗೃತಿ ಸಭೆ, ಬ್ಯಾನರ್‌ಗಳ ಮೂಲಕ ಎಚ್ಚರಿಕೆ ನೀಡಲಾಗಿದ್ದರೂ ಮತ್ತೆ ಮಳೆಗಾಲದ ಆರಂಭದ ಈ ಹಂತದಲ್ಲಿ ಚರಂಡಿಯಲ್ಲಿ ತ್ಯಾಜ್ಯ ಎಸೆಯುತ್ತಿರುವುದು ಸಾಂಕ್ರಾಮಿಕ ರೋಗಗಳ ಹರಡುವಿಕೆಗೆ ಕಾರಣವಾಗುತ್ತಿದೆ.

ಕಾಳಾವರ ಗ್ರಾ.ಪಂ. ವ್ಯಾಪ್ತಿಯ ವಕ್ವಾಡಿಯ ಸರಕಾರಿ ಸ್ವಾಮ್ಯದ ರಸ್ತೆ ಪಕ್ಕದ ಜಾಗದಲ್ಲಿ ಮೂಟೆಗಟ್ಟಲೆ ತ್ಯಾಜ್ಯ ಎಸೆದಿರುವುದು ಮುಂಬರುವ ಮಳೆಗಾಲದಲ್ಲಿ ಅಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗಾಣುಗಳು ಹರಡುವ ಭೀತಿ ಇದೆ. ತ್ಯಾಜ್ಯ ವಿಲೇವಾರಿಯ ಪ್ರಕ್ರಿಯೆಯು ಇದೀಗ ಎಲ್ಲ ಗ್ರಾ.ಪಂ. ಗಳಿಗೆ ತಲೆನೋವಾಗಿ ಮೂಡಿದ್ದು ಪರಿಹಾರ ಕಂಡುಕೊಳ್ಳುವಲ್ಲಿ ಅಥವಾ ತ್ಯಾಜ್ಯ ವಿಲೇ ವಾರಿ ಘಟಕವನ್ನು ಆರಂಭಿಸಲು ಸೂಕ್ತ ಸರಕಾರಿ ಭೂಮಿ ಇದ್ದರೂ ಅಲ್ಲಿನ ಆಸು ಪಾಸಿನ ನಿವಾಸಿಗಳ ವಿರೋಧದಿಂದಾಗಿ ಆ ಒಂದು ಯೋಜನೆ ಕೈಬಿಡಬೇಕಾಗಿದೆ. ಕುಂದಾಪುರ ಪುರಸಭೆಯ ಬೃಹತ್‌ ತ್ಯಾಜ್ಯ ವಿಲೇವಾರಿ ಘಟಕವು ಅದರ ಆಸುಪಾಸಿನ ಗ್ರಾ.ಪಂ.ಗಳಿಗೆ ಉಪಯೋಗಿಯಾಗಿದ್ದರೂ ಆ ಘಟಕಕ್ಕೆ ತ್ಯಾಜ್ಯ ಒಯ್ಯಲು ಪುರಸಭೆ ನಿರಾಕರಿಸುತ್ತಿರುವುದು ಪಂಚಾಯತ್‌ಗಳಿಗೆ ಬಗೆಹರಿಯದ ಸಮಸ್ಯೆಯಾಗಿ ಮುಂದುವರಿಯುತ್ತಿದೆ.

ಇತ್ತೀಚಿನ ದಿನಗಳಲ್ಲಿ ನೀರಿನ ಹೊರ ಹರಿವಿಗೆ ಯೋಗ್ಯವಾದ ರೀತಿಯಲ್ಲಿ ಒಳಚರಂಡಿಯ ವ್ಯವಸ್ಥೆ ಗೊಳಿಸಬೇಕಾಗಿರುವ ಗ್ರಾಮ ಪಂಚಾಯತ್‌ಗಳು ಆ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿರುವುದು, ತ್ಯಾಜ್ಯ ವಸ್ತುಗಳನ್ನು ಎಸೆಯಲು ಅನಾಗರಿಕ ಪ್ರವೃತ್ತಿಯ ಮಂದಿಗೆ ಹೊಸ ಚೆ„ತನ್ಯ ಕಲ್ಪಿಸಿದಂತಾಗಿದೆ. 

ಒಟ್ಟಾರೆ ಸ್ವತ್ಛ ಭಾರತದ ಪರಿಕಲ್ಪನೆಗೆ ಅದೆಷ್ಟೋ ಕಡೆ ಜನಪರ ಕಾಳಜಿ ಯಿಂದ ಸಂಘಟನೆಗಳು ಸೂಕ್ತ ಕ್ರಮ ಕೈಗೊಂಡರೂ ತಮ್ಮ ಮನೆಯ ಕಸವನ್ನು ಬೇರೆಡೆ ಎಸೆಯುವ ಹುಚ್ಚು ಮನಸ್ಸಿನ ವಿಲಕ್ಷಣ ಬುದ್ಧಿಯ ಕೆಲವೊಂದು ಮಂದಿಯ ಈ ಒಂದು ಪ್ರವೃತ್ತಿಯು ಮಳೆಗಾಲದಲ್ಲಿ ಡೆಂಗ್ಯೂ, ಮಲೇರಿಯಾ, ಟೆ„ಫಾಯ್ಡ ಮುಂತಾದ ಸಾಂಕ್ರಾಮಿಕ ರೋಗಗಳಿಗೆ ಎಡೆಮಾಡಿಕೊಡುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.

– ಡಾ| ಸುಧಾಕರ ನಂಬಿಯಾರ್‌

ಟಾಪ್ ನ್ಯೂಸ್

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

Naxal-Rehablitation

Vikram Gowda Encounter: ನಕ್ಸಲ್‌ ಪುನರ್ವಸತಿ, ಶರಣಾಗತಿ ಸಮಿತಿ ಭೇಟಿ, ಪರಿಶೀಲನೆ

barkuru-Kamabala

Kambala: ಆರು ಶತಮಾನಗಳ ಇತಿಹಾಸ ಹೊಂದಿರುವ ಬಾರ್ಕೂರು ಕಂಬಳ

Police

Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.