ಎನ್‌ಆರ್‌ಡಿಡಬ್ಲ್ಯುಪಿಗೆ ಕೇಂದ್ರ ನಿರ್ಬಂಧ: ಎಚ್ಕೆಪಿ
Team Udayavani, Jun 8, 2017, 12:45 PM IST
ವಿಧಾನಸಭೆ: ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆಯಡಿ (ಎನ್‌ಆರ್‌ಡಿಡಬ್ಲ್ಯುಪಿ) ಯಾವುದೇ ಯೋಜನೆಗಳನ್ನು ಕೈಗೆತ್ತಿಕೊಳ್ಳದಂತೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದ್ದರಿಂದ ರಾಜ್ಯದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಬುಧವಾರ ಜೆಡಿಎಸ್ ಸದಸ್ಯ ಕೆ.ಎಂ.ತಿಮ್ಮರಾಯಪ್ಪ ಅವ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಹೆಚ್ಚಿನ ಅನುದಾನ ಬೇಕಾಗುತ್ತದೆ. ಇದುವರೆಗೆ ಎನ್‌ಆರ್‌ಡಿಡಬ್ಲ್ಯುಪಿ ಅನುದಾನ ಬಳಸಿಕೊಳ್ಳಲಾಗುತ್ತಿತ್ತು. ಆದರೆ, ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳದಂತೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿರುವುದರಿಂದ ಹೊಸ ಯೋಜನೆ ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ವಿಚಾರದಲ್ಲಿ ಪ್ರತಿಪಕ್ಷ ಬಿಜೆಪಿ ಶಾಸಕರು ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಹೇಳಿದರು.
ಕೇಂದ್ರ ಸರ್ಕಾರವು 2017-18ನೇ ಸಾಲಿಗೆ ಎನ್‌ಆರ್‌ಡಿಡಬ್ಲ್ಯುಪಿ ಯೋಜನೆಯಡಿ 290.85 ಕೋಟಿ ರೂ. ನಿಗದಿಪಡಿಸಿದ್ದು, ಈ ಮೊತ್ತವನ್ನು ಮುಂದುವರೆದ ಕಾಮಗಾರಿಗಳಿಗೆ ಮಾತ್ರ ಬಳಸಲು ನಿರ್ದೇಶನ ನೀಡಿದೆ ಎಂದು ಅವರು ವಿವರಿಸಿದರು.
ಪಾವಗಡ ತಾಲೂಕಿನ ನೀರಿನ ಸಮಸ್ಯೆ ಬಗೆಹರಿಸಲು ಸೂಕ್ತವಾದ ಯೋಜನೆ ಮತ್ತು ತಾಂತ್ರಿಕ ಅನುಮೋದನೆಗಳನ್ನು ಈಗಾಗಲೇ ನೀಡಲಾಗಿದೆ. ಆದರೆ, ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಕೈಗೆತ್ತಿಕೊಳ್ಳಲು ಅಡೆತಡೆಗಳು ಉಂಟಾಗಿವೆ ಎಂದು ತಿಳಿಸಿದರು. ಈ ಅಡೆತಡೆಗಳನ್ನು ನಿವಾರಿಸಲು ರಾಜ್ಯ ಸರ್ಕಾರದಿಂದ ಸೂಕ್ತವಾದ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಭರವಸೆ ನೀಡಿದರು.
ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಡಿಸೈನ್, ಬ್ಯುಲ್ಟ್, ಆಪರೇಟ್ ಅÂಂಡ್ ಟ್ರಾನ್ಸ್‌ಫರ್ (ಡಿಬಿಓಟಿ) ಆಧಾರದಲ್ಲಿ ಪಾವಗಡ ತಾಲೂಕಿನ ಪಾವಗಡ ಪಟ್ಟಣ ಮತ್ತು ಗ್ರಾಮಗಳು, ಚಿತ್ರದುರ್ಗ ಜಿÇÉೆ ಮೊಳಕಲ್ಮೂರು ತಾಲೂಕಿನ ಮೊಳಕಾಲ್ಮೂರು ಪಟ್ಟಣ ಮತ್ತು ಗ್ರಾಮಗಳು, ಚಳ್ಳಕೆರೆ ತಾಲೂಕಿನ ಗ್ರಾಮಗಳು ಹಾಗೂ ಬಳ್ಳಾರಿ ಜಿÇÉೆಯ ಕೂಡ್ಲಗಿ ತಾಲೂಕಿನ ಉಜ್ಜನಿ ಮತ್ತು 216 ಗ್ರಾಮಗಳು, ಹೊಸಪೇಟೆ ತಾಲೂಕಿನ ಚಿಲಕನಹಟ್ಟಿ ಮತ್ತು 14 ಗ್ರಾಮಗಳಲ್ಲಿ ಕೈಗೆತ್ತಿಕೊಳ್ಳಲು ಈಗಾಗಲೇ ಅನುಮೋದನೆ ನೀಡಲಾಗಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆ, ಯೋಜನಾ ಇಲಾಖೆ, ಜಲಸಂಪನ್ಮೂಲ ಇಲಾಖೆ, ನಗರಾಭಿವೃದ್ಧಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಹಮತಿ ಪಡೆಯಲು ಕ್ರಮವಹಿಸಲಾಗುತ್ತಿದೆ ಎಂದು ವಿವರಿಸಿದರು.
ಪಾವಗಡದ ಯೋಜನೆಗೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಉಪಯೋಜನೆಯಡಿ ಶೇ. 50ರಷ್ಟು ಆರ್ಥಿಕ ನೆರವು ನೀಡಲು ಒಪ್ಪಿಗೆ ನೀಡಿದೆ. ಆದ್ದರಿಂದ ಶೀಘ್ರವೇ ಯೋಜನೆ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.
17000 ಕೋಟಿಯ ಕಾಮಗಾರಿ ಬಾಕಿ
ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆಯಡಿ (ಎನ್‌ಆರ್‌ಡಿಡಬ್ಲ್ಯುಪಿ) ರಾಜ್ಯಕ್ಕೆ ಮಂಜೂರಾದ ಯೋಜನೆಯಡಿ 17 ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗಳು ಬಾಕಿ ಇವೆ. ಹೀಗಾಗಿ ಈ ಕಾಮಗಾರಿ ಮುಗಿಯುವವರೆಗೆ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳದಂತೆ ಕೇಂದ್ರ ಸರ್ಕಾರ ಹೇಳಿದೆ ಎಂದು ಬಿಜೆಪಿ ಸದಸ್ಯ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇಲಾಖಾ ಬೇಡಿಕೆಗಳ ಮೇಲಿನ ಚರ್ಚೆ ವೇಳೆ ಬಿಜೆಪಿಯ ಗೋವಿಂದ ಕಾರಜೋಳ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಕುರಿತಂತೆ ಮಾತನಾಡುತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಅವರು, ಎನ್‌ಆರ್‌ಡಿಡಬ್ಲ್ಯುಪಿ ಅಡಿ ಹೊಸ ಯೋಜನೆ ಕೈಗೆತ್ತಿಕೊಳ್ಳದಂತೆ ಕೇಂದ್ರ ಸೂಚನೆ ನೀಡಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ. ಆದರೆ, ಅದಕ್ಕೆ ಕಾರಣ ಹೇಳದೆ ವಿನಾ ಕಾರಣ ಆರೋಪದ ರೀತಿ ಮಾತನಾಡಿದ್ದಾರೆ ಎಂದರು.
ಎನ್‌ಆರ್‌ಡಿಡಬ್ಲ್ಯುಪಿ ಯೋಜನೆಯಡಿ ಶೇ. 60ರಷ್ಟನ್ನು ಕೇಂದ್ರ ಸರ್ಕಾರ ಭರಿಸಿದರೆ ಶೇ. 40ನ್ನು ರಾಜ್ಯ ಸರ್ಕಾರ ಭರಿಸಬೇಕು. ಅದರಂತೆ ಕೇಂದ್ರ ಸರ್ಕಾರ ಸಾಕಷ್ಟು ಅನುದಾನ ಬಿಡುಗಡೆ ಮಾಡಿದೆ. ಆದರೆ, ರಾಜ್ಯದಲ್ಲಿ ಈ ಯೋಜನೆಯಡಿ 17 ಸಾವಿರ ಕೋಟಿ ರೂ. ವೆಚ್ಚದ ಕಾಮಗಾರಿಗಳು ಬಾಕಿ ಇವೆ. ಇದನ್ನು ಮೊದಲು ಪೂರ್ಣಗೊಳಿಸಿ ನಂತರ ಹೊಸ ಯೋಜನೆ ಕೈಗೆತ್ತಿಕೊಳ್ಳಿ ಎಂದು ಕೇಂದ್ರ ಸರ್ಕಾರ ತಿಳಿಸಿದೆ ಎಂದು ಸ್ಪಷ್ಟಪಡಿಸಿದರು.
ಎನ್‌ಆರ್‌ಡಿಡಬ್ಲ್ಯುಪಿ ಯೋಜನೆಯಲ್ಲಿ ಶೇ.60 ಕೇಂದ್ರ ಸರ್ಕಾರ ಹಾಗೂ ಶೇ.40 ರಾಜ್ಯ ಸರ್ಕಾರಗಳ ಪಾಲಿದೆ. ಆದರೆ, ರಾಜ್ಯದಲ್ಲಿ ಯೋಜನೆಯಡಿ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಿ ನಂತರ ಹೊಸ ಯೋಜನೆ ಕೈಗೆತ್ತಿಕೊಳ್ಳಿ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
– ಬಸವರಾಜ ಬೊಮ್ಮಾಯಿ, ಮಾಜಿ ಸಚಿವ
ಕೇಂದ್ರ ಸರ್ಕಾರವು 2017-18ನೇ ಸಾಲಿಗೆ ಎನ್‌ಆರ್‌ಡಿಡಬ್ಲ್ಯುಪಿ ಯೋಜನೆಯಡಿ 290.85 ಕೋಟಿ ರೂ. ನಿಗದಿಪಡಿಸಿದ್ದು, ಈ ಮೊತ್ತವನ್ನು ಮುಂದುವರಿದ ಕಾಮಗಾರಿಗಳಿಗೆ ಮಾತ್ರ ಬಳಸಲು ನಿರ್ದೇಶನ ನೀಡಿದೆ.
– ಎಚ್.ಕೆ.ಪಾಟೀಲ್,
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..
Mangaluru: MCC ಬ್ಯಾಂಕ್ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು
Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.