ದೇಶದ ವಿಕಾಸ, ಅಭಿವೃದ್ಧಿಯೇ ಬಿಜೆಪಿ ಗುರಿ: ಪಿ.ಪಿ. ಚೌಧರಿ

Team Udayavani, Jun 8, 2017, 2:36 PM IST

pp-chaudari.jpg

ಮಂಗಳೂರು: ಜಗತ್ತಿನಲ್ಲಿ ಭಾರತವನ್ನು ಉನ್ನತ ಸ್ಥಾನಕ್ಕೆ ಕೊಂಡೊ ಯ್ಯುವ ಮೂಲಕ, ಪ್ರತೀ ನಾಗರಿಕನ ಸಮಗ್ರ ಅಭಿ ವೃದ್ಧಿಯೇ ಬಿಜೆಪಿಯ ಗುರಿ ಯಾಗಿದೆ. ಈ ನಿಟ್ಟಿನಲ್ಲಿ ಜನರ ಮನೆ-ಮನ ಗಳನ್ನು ಬೆಳಗಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ನಿರಂತರ ಕಾರ್ಯ ಯೋಜನೆ ಗಳನ್ನು ಜಾರಿಗೊಳಿಸುತ್ತಿದ್ದಾರೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ, ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಖಾತೆ ಸಚಿವ ಪಿ.ಪಿ. ಚೌಧರಿ ಹೇಳಿದರು.

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳಾದ ಹಿನ್ನೆಲೆಯಲ್ಲಿ ಮಂಗಳೂರು ಪುರಭವನದಲ್ಲಿ ಬುಧವಾರ ಆಯೋಜಿಸಲಾದ “ಸಬ್‌ಕಾ ಸಾಥ್‌ ಸಬ್‌ ಕಾ ವಿಕಾಸ್‌’ ಸಾಧನಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಳೆದ ಮೂರು ವರ್ಷಗಳ ಅವಧಿಯಲ್ಲಿ ದೇಶದ ಕ್ಷಿಪ್ರ ಬೆಳವಣಿಗೆಯಲ್ಲಿ ಪ್ರಧಾನಿ ಮೋದಿಯವರ ಕಾರ್ಯದಕ್ಷತೆ ಪ್ರಮುಖ ವಾದುದು. ದಿನದ 18ರಿಂದ 20 ಗಂಟೆ ಅವರು ಖುದ್ದಾಗಿ ದೇಶದ ಅಭಿವೃದ್ಧಿ ಕಾರ್ಯದಲ್ಲಿ ತೊಡಗಿಕೊಳ್ಳುವ ಜತೆಗೆ ಇತರ ಸಚಿವರು, ಜನಪ್ರತಿನಿಧಿಗಳೂ ಪ್ರೇರಣೆಯಾಗಿದ್ದಾರೆ. ಹಿಂದೆ ಬಡವರ ಬಗ್ಗೆ ಮಾತನಾಡಲಾಗುತ್ತಿತ್ತು. ಆದರೆ ಬಡವರ ಕಲ್ಯಾಣಕ್ಕಾಗಿನ ಯೋಜನೆಗಳು ಮಾತ್ರ ಅರ್ಹರನ್ನು ತಲುಪುತ್ತಿರಲಿಲ್ಲ.

ಅದನ್ನು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮೂರು ವರ್ಷಗಳ ಆಡಳಿತಾವಧಿಯಲ್ಲಿ ಜನಧನ್‌, ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ, ಜನಸಾಮಾನ್ಯರಿಗೂ ಪಿಂಚಣಿ ಸೌಲಭ್ಯದ ಮೂಲಕ ಮಾಡಿ ತೋರಿಸಿದ್ದಾರೆ. ರೈತ ಸಮುದಾಯದ ಸಮಗ್ರ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ಅನುಷ್ಠಾನಿಸಿದೆ. ಮುಂದಿನ ಎರಡು ವರ್ಷಗಳಲ್ಲಿ ರೈತರ ಸಮಸ್ಯೆಗಳ ಬಗ್ಗೆ ಕೇಂದ್ರ ಸರಕಾರ ಸೂಕ್ತವಾದ ಪರಿಹಾರವನ್ನು ಒದಗಿಸಲಿದೆ. ಈಗಾಗಲೇ ಮಣ್ಣು ಆರೋಗ್ಯ ಕಾರ್ಡ್‌, ಯೂರಿಯಾ ಕಾಳಸಂತೆಯಲ್ಲಿ ಮಾರಾಟಕ್ಕೆ ತಡೆ ಹಾಕುವ ಕಾರ್ಯವನ್ನು ಮಾಡಿ ರೈತರ ಹಿತವನ್ನು ಕಾಪಾಡಲಾಗಿದೆ ಎಂದು ವಿವರಿಸಿದರು.

ಭಾರತದಲ್ಲಿ ದ.ಕ. ನಂ.1: ನಳಿನ್‌
ಸಂಸದ ನಳಿನ್‌ ಕುಮಾರ್‌ ಕಟೀಲು ಮಾತ ನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಯೋಜನೆ-ಯೋಚನೆಗಳ ಮುಖೇನವಾಗಿ ಭಾರತ ಇಂದು ವಿಶ್ವದ ಎತ್ತರಕ್ಕೆ ಬೆಳೆದು ನಿಂತಿದೆ. ಗ್ರಾಮ ಗ್ರಾಮ ಗಳಲ್ಲಿ ಆಧುನಿಕ ಸೌಕರ್ಯಗಳನ್ನು ಕಲ್ಪಿಸುವ ಮೂಲಕ ಭಾರತವನ್ನು ಸಮೃದ್ಧಗೊಳಿಸುವ ಕಾರ್ಯ ನಡೆಯುತ್ತಿದೆ. ದ.ಕ. ಜಿಲ್ಲೆಯ ಅಭಿ ವೃದ್ಧಿಗಾಗಿ ಮೋದಿ ಸರಕಾರದಿಂದ ನಿರೀಕ್ಷೆಗೂ ಮೀರಿ ಅನುದಾನ ಬಂದಿದೆ. ಈ ಮೂಲಕ ಮುಂದಿನ ಜಗದ್ಗುರು ಭಾರತದಲ್ಲಿ ದ.ಕ. ಜಿಲ್ಲೆ ಭಾರತದ ನಂ. 1 ಸ್ಥಾನಕ್ಕೇರುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.

ದ.ಕ. ಜಿಲ್ಲೆಗೆ 1,29,365 ಕೋ.ರೂ.
ದ.ಕ. ಜಿಲ್ಲೆಯ ಅಭಿ ವೃದ್ಧಿಗೆ ಕೇಂದ್ರದಿಂದ ಸಾಕಷ್ಟು ಅನುದಾನ ದೊರಕಿದೆ. ರೈಲ್ವೇಗೆ 1,243 ಕೋ. ರೂ., ರಾ. ಹೆದ್ದಾರಿಗಾಗಿ 7,456 ಕೋಟಿ ರೂ., ಸ್ಮಾರ್ಟ್‌ ಸಿಟಿ ಯೋಜನೆಗೆ ಅನುದಾನ, ದೇಶದಲ್ಲಿಯೇ ಮೊದಲ ಬಾರಿಗೆ ಬಿ.ಸಿ. ರೋಡ್‌-ಅಡ್ಡಹೊಳೆ ಕಾಂಕ್ರೀಟ್‌ ರಸ್ತೆ ಹಾಗೂ ಮಂಗಳೂರು-ಬೆಂಗಳೂರು ಹೈಸ್ಪೀಡ್‌ ರಸ್ತೆಗೆ ಅನುದಾನ ಸಹಿತ ಒಟ್ಟು ಮೂರು ವರ್ಷಗಳ ಅವಧಿಗೆ ಕೇಂದ್ರದಿಂದ 1, 29,365 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ ಎಂದು ನಳಿನ್‌ ಕುಮಾರ್‌ ಹೇಳಿದರು. 

ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಿದರು. ಮಾಜಿ ಸಚಿವರಾದ ಕೃಷ್ಣ ಜೆ. ಪಾಲೆಮಾರ್‌, ನಾಗರಾಜ ಶೆಟ್ಟಿ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಎನ್‌. ಯೋಗೀಶ್‌ ಭಟ್‌, ರುಕ್ಮಯ ಪೂಜಾರಿ, ಮೋನಪ್ಪ ಭಂಡಾರಿ, ಮುಖಂಡರಾದ ಬಾಲಕೃಷ್ಣ ಭಟ್‌, ಸುಲೋಚನಾ ಭಟ್‌, ಉಮಾನಾಥ ಕೋಟ್ಯಾನ್‌, ಬೃಜೇಶ್‌ ಚೌಟ, ಸುದರ್ಶನ್‌ ಉಪಸ್ಥಿತರಿದ್ದರು.
ಬಿಜೆಪಿ ಮಂಗಳೂರು ನಗರ ದಕ್ಷಿಣ ಅಧ್ಯಕ್ಷ ವೇದವ್ಯಾಸ ಕಾಮತ್‌ ಸ್ವಾಗತಿಸಿದರು. ಕಿಶೋರ್‌ ರೈ ವಂದಿಸಿದರು.

ಶೈಕ್ಷಣಿಕ ಕ್ಷೇತ್ರಕ್ಕೆ ಹೊಸ ರೂಪ
ಕೇಂದ್ರ ಸಚಿವ ಪಿ.ಪಿ. ಚೌಧರಿ ಮಾತನಾಡಿ, ದೇಶದಲ್ಲಿ ಈಗಾಗಲೇ ನಗರ ಪ್ರದೇಶಗಳಲ್ಲಿ ಶೈಕ್ಷಣಿಕ ಗುಣಮಟ್ಟ ಉತ್ತಮವಾಗಿದ್ದರೂ ಗ್ರಾಮೀಣ, ಆದಿವಾಸಿ, ಮರು ಭೂಮಿ ಮೊದಲಾದ ಪ್ರದೇಶ ಗಳಲ್ಲಿ ಶಿಕ್ಷಕರ ಕೊರತೆ, ಮೂಲ ಸೌಕರ್ಯಗಳ ಕೊರತೆ ಯಿಂದ ಶಿಕ್ಷಣದ ಗುಣಮಟ್ಟ ದಲ್ಲಿ ಕೊರತೆ ಯನ್ನು ಕಾಣಲಾಗುತ್ತಿದೆ. ಇದ ಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ವಿಷನ್‌ ಆಗಿ ರುವ ಡಿಜಿಟಲ್‌ ಇಂಡಿಯಾದಡಿ 3ಡಿ ಆ್ಯನಿ ಮೇಶನ್‌ ಆಧಾರಿತ ಪಠ್ಯಕ್ರಮ ವನ್ನು ಅಳವಡಿಸುವ ಬಗ್ಗೆ ಚಿಂತನೆ ನಡೆಸ ಲಾಗುತ್ತಿದೆ. ಈ ಬಗ್ಗೆ ಮುಂದಿನ ಹಂತ ದಲ್ಲಿ ಪೂರಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಗ್ರಾ.ಪಂ.ಗಳಿಗೆ ಹೈಸ್ಪೀಡ್‌ ವೈಫೈ ಹಾಟ್‌ಸ್ಪಾಟ್‌
ಡಿಜಿಟಲ್‌ ಕ್ಷೇತ್ರದ ವಿಸ್ತಾರವನ್ನು ಶಿಕ್ಷಣದ ಜತೆಗೆ ಆರೋಗ್ಯ ಹಾಗೂ ಕೃಷಿ ಕ್ಷೇತ್ರಕ್ಕೂ ವ್ಯಾಪಿಸುವ ಮೂಲಕ ಮನೆಗಳಲ್ಲಿಯೇ ಚಿಕಿತ್ಸೆ, ವೈದ್ಯರ ಸಲಹೆ ಪಡೆಯುವ ವ್ಯವಸ್ಥೆಯನ್ನು ರೂಪಿಸಲಾಗುತ್ತಿದೆ. ಕೃಷಿಯಲ್ಲಿ ತಂತ್ರ ಜ್ಞಾನದ ಅಳವಡಿಕೆಯ ಮೂಲಕ ಕೃಷಿಕರ ಬದುಕನ್ನು ಹಸನುಗೊಳಿಸಲಾಗುವುದು. ಡಿಜಿಟಲ್‌ ಇಂಡಿಯಾ ದಡಿ ಈಗಾಗಲೇ ಒಂದು ಲಕ್ಷ ಗ್ರಾ.ಪಂ.ಗಳಲ್ಲಿ ಹೈಸ್ಪೀಡ್‌ ವೈಫೈ ಹಾಟ್‌ಸ್ಪಾಟ್‌ ಸಂಪರ್ಕ ವನ್ನು ಒದಗಿಸಲಾಗಿದೆ. ಮುಂದಿನ ದಿನ ಗಳಲ್ಲಿ 1.50 ಲಕ್ಷ ಗ್ರಾ.ಪಂ.ಗಳಿಗೆ ಈ ವ್ಯವಸ್ಥೆ ಯನ್ನು ವಿಸ್ತರಿಸಲಾಗುವುದು. ಮುಂದಿನ ಎರಡು ವರ್ಷ ಗಳಲ್ಲಿ ಮೋದಿಯವರ ಡಿಜಿಟಲ್‌ ಇಂಡಿಯಾದ ಕನಸು ದೇಶದ “ಗೇಮ್‌ ಚೇಂಜರ್‌’ ಆಗಿ ದೇಶದಲ್ಲಿ ಕ್ರಾಂತಿಕಾರಿ ಬದಲಾವಣೆಗೆ ಕಾರಣವಾಗಲಿದೆ ಎಂದು ಸಚಿವ ಪಿ.ಪಿ. ಚೌಧರಿ ತಿಳಿಸಿದರು.

ಟಾಪ್ ನ್ಯೂಸ್

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.