ಪರಿಶಿಷ್ಟರ ಅಭಿವೃದ್ಧಿಗೆ ಹೆಚ್ಚು ಹಣ
Team Udayavani, Jun 9, 2017, 1:02 PM IST
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದೇಶದಲ್ಲಿಯೇ ಪ್ರಥಮವಾಗಿ ಪ.ಜಾತಿ ಮತ್ತು ಪ.ಪಂಗಡದ ಜನರ ಅಭಿವೃದ್ಧಿಗೆ ಕಾಯಿದೆ ಜಾರಿಗೆ ತಂದು ಹೆಚ್ಚು ಹಣವನ್ನು ಖರ್ಚು ಮಾಡುತ್ತಿದೆ ಎಂದು ವರುಣಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ವರುಣಾ ಕ್ಷೇತ್ರದ ತಗಡೂರು, ಚಿನ್ನಂಬಳ್ಳಿ ಹಾಡ್ಯ, ಕಾರಾಪುರ ಕಾರ್ಯ ಗ್ರಾಮಗಳಲ್ಲಿ ಸುಮಾರು 2 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿಪೂಜೆ, ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಎಲ್ಲಾವರ್ಗದ ಬಡವರು, ಹಿಂದುಳಿದವರು, ಪ.ಜಾತಿ, ಪ.ಪಂಗಡದ ಜನರ ಅಭಿವೃದ್ಧಿಗೆ ಕಾರ್ಯ ಕ್ರಮಗಳನ್ನು ರೂಪಿಸಿ ಆರ್ಥಿಕವಾಗಿ ಸಬಲರಾಗಲು ಅನುಕೂಲಮಾಡಿಕೊಟ್ಟಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಹಿಂದೆಂದೂ ಆಗದಂತಹ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಿ ಯಾವುದೇ ಭ್ರಷ್ಟಾಚಾರ ಹಗರಣಗಳಿಲ್ಲದೆ ಯಶಸ್ವಿಯಾಗಿ ನಾಲ್ಕು ವರ್ಷಗಳನ್ನು ಪೂರೈಸಿದೆ ಉಳಿದ ಒಂದು ವರ್ಷದಲ್ಲಿ ವರುಣಾ ಕ್ಷೇತ್ರದಲ್ಲಿ ಆಗಬೇಕಾಗಿರುವಂತಹ ಕೆಲಸಗಳನ್ನು ಪೂರ್ಣಗೊಳಿಸುವುದಾಗಿ ತಿಳಿಸಿದರು.
ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ ಮಾತನಾಡಿ, ಸರ್ಕಾರದ ಜನಪರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಅಧಿಕಾರಿಗಳು ಶ್ರಮಿಸಬೇಕು. ವರುಣಾ ಕ್ಷೇತ್ರದಲ್ಲಿ ಇತಿಹಾಸದಲ್ಲಿಯೇ ಆಗದಂತಹ ಅಭಿವೃದ್ಧಿ ಕೆಲಸ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ.
ಅವರ ಪುತ್ರ ಡಾ.ಯತೀಂದ್ರ ಕಳೆದ ಏಳೆಂಟು ತಿಂಗಳಿಂದ ಪ್ರತಿ ಹಳ್ಳಿಗೂ ಪ್ರವಾಸ ಮಾಡಿ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಶ್ರಮಿಸುತ್ತಿದ್ದಾರೆ. ಅವರ ಮೇಲೆ ನಿಮ್ಮ ಆಶೀರ್ವಾದವಿರಲಿ ಎಂದರು. ತಹಶೀಲ್ದಾರ್ ದಯಾನಂದ್, ತಾಪಂ ಸದಸ್ಯೆ ದೇವನೂರು ಮಹಾದೇವಮ್ಮ, ಚಿನ್ನಹಳ್ಳಿ ರಾಜು, ಸಿದ್ದರಾಮೇಗೌಡ, ಮಹೇಶ್ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ
Cyber Crime: ಸೈಬರ್ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್ಗಳಿಗೆ ನಿರ್ಬಂಧ
Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್ ಗಾಂಧಿ
Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.