8 ಮೇಲ್ಮನೆ ಸದಸ್ಯರ ವಿರುದ್ಧ ಮತ್ತೂಂದು ದೂರು
Team Udayavani, Jun 10, 2017, 12:40 PM IST
ಬೆಂಗಳೂರು: ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಮತ ಹಾಕಲು ಬೆಂಗಳೂರಿನ ವಿಳಾಸ ನಮೂದಿಸಿ, ಸ್ವಂತ ಕ್ಷೇತ್ರದ ವಿಳಾಸದಲ್ಲಿ ಪ್ರಯಾಣ ಭತ್ಯೆ ಪಡೆದುಕೊಂಡಿರುವ ಆರೋಪ ಎದುರಿಸುತ್ತಿರುವ ಎಂಟು ಮಂದಿ ವಿಧಾನಪರಿಷತ್ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಬಿಎಂಪಿ ಪ್ರತಿಪಕ್ಷ ನಾಯಕ ಪದ್ಮನಾಭ ರೆಡ್ಡಿ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್ಕುಮಾರ್ ಝಾ ಅವರಿಗೆ ದೂರು ಸಲ್ಲಿಸಿದ್ದಾರೆ.
ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಝಾ ಅವರನ್ನು ಭೇಟಿ ಮಾಡಿದ ಪದ್ಮನಾಭರೆಡ್ಡಿ, “ಕಾಂಗ್ರೆಸ್ನ ಅಲ್ಲಂ ವೀರಭದ್ರಪ್ಪ, ಆರ್.ಬಿ. ತಿಮ್ಮಾಪುರ, ಎನ್.ಎಸ್. ಭೋಸರಾಜ್, ರಘು ಆಚಾರ್, ಎಂ.ಡಿ. ಲಕ್ಷ್ಮೀನಾರಾಯಣ, ಎಸ್. ರವಿ, ಜೆಡಿಎಸ್ನ ಸಿ.ಆರ್. ಮನೋಹರ್, ಅಪ್ಪಾಜಿಗೌಡ ಸುಳ್ಳು ವಿಳಾಸ ನೀಡಿ ಮೇಯರ್ ಚುನಾವಣೆಯಲ್ಲಿ ಮತ ಹಾಕಿದ್ದಲ್ಲದೇ ತಪ್ಪು ಮಾಹಿತಿ ನೀಡಿ ಪ್ರಯಾಣ ಭತ್ಯೆ ಪಡೆದುಕೊಂಡಿದ್ದಾರೆ. ಈ ಮೂಲಕ ಎಂಟು ಮಂದಿ ಸದಸ್ಯರು ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 31ನ್ನು ಉಲ್ಲಂ ಸಿದ್ದಾರೆ. ಆದ್ದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು,’ ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.
ಉಗ್ರಪ್ಪ ಮೇಧಾವಿ ಅಲ್ಲ: ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪದ್ಮನಾಭ ರೆಡ್ಡಿ, “ಎಂಟು ಮಂದಿ ವಿಧಾನಪರಿಷತ್ ಸದಸ್ಯರ ವಿರುದ್ಧ ನನ್ನ ಹೋರಾಟ ನಿಲ್ಲುವುದಿಲ್ಲ. ಈಗ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ಕೊಟ್ಟಿದ್ದೇನೆ. ಮುಂದೆ ರಾಜ್ಯಪಾಲರಿಗೂ ದೂರು ನೀಡುತ್ತೇನೆ ಎಂದರು. ನಿಮ್ಮ ದೂರು ಕಾನೂನು ಬದ್ಧವಾಗಿಲ್ಲ ಎಂದು ವಿ.ಎಸ್. ಉಗ್ರಪ್ಪ ಹೇಳಿದ್ದಾರಲ್ಲ ಎಂದು ಕೇಳಿದ ಪ್ರಶ್ನೆಗೆ “ಉಗ್ರಪ್ಪ ಮಹಾ ಮೇಧಾವಿ ಅಲ್ಲ’ ಎಂದು ಪದ್ಮನಾಭರೆಡ್ಡಿ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.