“ಇಂದಿರಾ ಕ್ಯಾಂಟಿನ್‌’ ಸಿದ್ಧತೆ ಮಾಹಿತಿ ಪಡೆದ ಮೇಯರ್‌


Team Udayavani, Jun 10, 2017, 12:40 PM IST

mayor-padma.jpg

ಬೆಂಗಳೂರು: ನಗರದಲ್ಲಿ “ಇಂದಿರಾ ಕ್ಯಾಂಟಿನ್‌’ ಜಾರಿಗೆ ಬಿಬಿಎಂಪಿ ಸಕಲ ಸಿದ್ಧತೆ ನಡೆಸಿದ್ದು, ಈಗಾಗಲೇ ಕ್ಯಾಂಟಿನ್‌ನ ಲಾಂಭನ ಅಂತಿಗೊಳಿಸಲಾಗಿದೆ. ಜತೆಗೆ ಎಲ್ಲ 198 ಕ್ಯಾಂಟಿನ್‌ಗಳ ವಿನ್ಯಾಸ ಅಂತಿಮಗೊಳಿಸುವ ಕಾರ್ಯದಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ. ಆಗಸ್ಟ್‌ 15ರಂದು ಏಕಕಾಲದಲ್ಲಿ ಎಲ್ಲಾ 198 ವಾರ್ಡ್‌ಗಳಲ್ಲಿ ಇಂದಿರಾ ಕ್ಯಾಂಟೀನ್‌ ಆರಂಭಿಸಲು ತೀರ್ಮಾನಿಸಲಾಗಿದೆ. ಕ್ಯಾಂಟಿನ್‌ ನಿರ್ಮಾಣಕ್ಕಾಗಿ ಪಾಲಿಕೆಯ 198 ವಾರ್ಡ್‌ಗಳಲ್ಲಿ ಈಗಾಗಲೇ ಸ್ಥಳ ಗುರುತಿಸಲಾಗಿದೆ.

ಈ ಪೈಕಿ 21 ವಾರ್ಡ್‌ಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಕೂಡಲೇ ಪ್ರೀಕಾರ್ಟ್‌ ಎಲಿಮೆಂಟ್‌ಗಳನ್ನು ಜೋಡಿಸಲಾಗುತ್ತಿದೆ. 18 ಸ್ಥಳಗಳಲ್ಲಿ ಸಣ್ಣಪುಟ್ಟ ಬದಲಾವಣೆಗಳನ್ನು ಮಾಡಿಕೊಳ್ಳಬೇಕಿದ್ದು, 3 ಸ್ಥಳಗಳಲ್ಲಿ ಮಾತ್ರ ಬದಲಾವಣೆ ಮಾಡಿಕೊಳ್ಳುವುದು ಕಷ್ಟವಾದ ಹಿನ್ನೆಲೆಯಲ್ಲಿ ಬೇರೆ ಸ್ಥಳಗಳನ್ನು ಗುರುತಿಸುವಂತೆ ಮೇಯರ್‌ ಸೂಚಿಸಿದ್ದಾರೆ. 

ಇಂದಿರಾ ಕ್ಯಾಂಟಿನ್‌ ಕುರಿತಂತೆ ಶುಕ್ರವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಕ್ಯಾಂಟಿನ್‌ಗಾಗಿ 198 ವಾರ್ಡ್‌ಗಳಲ್ಲಿ ಜಾಗ ಗುರುತಿಸಿರುವ ಕುರಿತು ಮತ್ತು ಕೂಡಲೇ ನಿರ್ಮಾಣಕ್ಕೆ ಸಿದ್ಧವಾಗಿರುವ ಸ್ಥಳಗಳ ಕುರಿತು ಮಾಹಿತಿ ಪಡೆದರು. 

ನಗರದ 21 ಜಾಗಗಳ ಕ್ಯಾಂಟಿನ್‌ ವಿನ್ಯಾಸದಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ ಎಂದು ಸಭೆಯಲ್ಲಿ ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮೇಯರ್‌, ಕಟ್ಟಡದಲ್ಲಿ ಭಾರಿ ಪ್ರಮಾಣದಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಬಂದರೆ ಅಂತಹ ಜಾಗ ಬಿಟ್ಟು ಬೇರೆ ಕಡೆ ಜಾಗ ಗುರುತಿಸಿ ಎಂದು ಸೂಚನೆ ನೀಡಿದ್ದಾರೆ.

ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಮೇಯರ್‌ ಪದ್ಮಾವತಿ, ಬೆಂಗಳೂರು ನಗರಾಭಿವೃದ್ಧಿ ಸಚಿವರು ಇಂದಿರಾ ಕ್ಯಾಂಟಿನ್‌ಗೆ ಗುರುತಿಸಿರುವ ಜಾಗಗಳ ವಿವರ ನೀಡುವಂತೆ ಕೋರಿದ್ದು, ಅದರ ಹಿನ್ನೆಲೆಯಲ್ಲಿ ಸಭೆ ನಡೆಸಲಾಗಿದೆ. ಅಧಿಕಾರಿಗಳು ಮೂರು ಜಾಗಗಳಲ್ಲಿ ಮಾತ್ರ ಕ್ಯಾಂಟಿನ್‌ ನಿರ್ಮಾಣಕ್ಕೆ ಸಾಧ್ಯವಿಲ್ಲವೆಂದು ತಿಳಿಸಿದ್ದು, ಹೊಸ ಜಾಗ ಗುರುತಿಸುವಂತೆ ತಿಳಿಸಲಾಗಿದೆ ಎಂದು ಹೇಳಿದರು. 

ಒಟ್ಟು 198 ಕ್ಯಾಂಟಿನ್‌ಗಳ ಪೈಕಿ ಶೇ.20ರಷ್ಟು ವಾರ್ಡ್‌ಗಳನ್ನು ಸ್ತ್ರೀ ಸ್ವಸಹಾಯ ಸಂಘಟಗಳಿಗೆ ನೀಡಲು ಸರ್ಕಾರದ ನಿರ್ಧರಿಸಿದೆ. ಉಳಿದಂತೆ ಕ್ಯಾಂಟೀನ್‌ ಸೇವೆ ನೀಡಲು ಸಿದ್ಧವಿರುವವರು ಪಾಲಿಕೆಗೆ ಮನವಿ ಮಾಡಿದರೆ ಲಾಟರಿ ಮೂಲಕ ಆಯ್ಕೆ ಮಾಡುವುದಾಗಿ ತಿಳಿಸಿದರು. 

ಟಾಪ್ ನ್ಯೂಸ್

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.