ಹಗರಣ ಮುಚ್ಚಿಹಾಕಲು ಸದನ ಸಮಿತಿ ರಚಿಸಿ ನಾಟಕ


Team Udayavani, Jun 10, 2017, 1:59 PM IST

mys3.jpg

ಮೈಸೂರು: ವಿದ್ಯುತ್‌ ಖರೀದಿಯಲ್ಲಿ ನಡೆದಿರುವ 25 ರಿಂದ 30 ಸಾವಿರ ಕೋಟಿ ರೂ. ಮೊತ್ತದ ದೊಡ್ಡ ಹಗರಣವನ್ನು ಮುಚ್ಚಿಹಾಕಲು ರಾಜ್ಯಸರ್ಕಾರ ಸದನ ಸಮಿತಿ ರಚಿಸಿ ನಾಟಕವಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಸಂಬಂಧ ನಾನೇ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದರು.

ಕಾಲಹರಣ: ಸತತ ಬರಗಾಲದಿಂದ ಬೆಳೆನಷ್ಟಕ್ಕೆ ಒಳಗಾದ ರೈತರಿಗೆ ಒಂದು ರೂಪಾಯಿ ಪರಿಹಾರ ನೀಡದಿರುವ ಸರ್ಕಾರದ ಕ್ರಮವನ್ನು ಟೀಕಿಸಿದ ಅವರು, ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರ ಅನಗತ್ಯ ವಿಷಯಗಳ ಚರ್ಚೆಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದರಿಂದ ಶಾಸಕರು ಅಧಿವೇಶನದಲ್ಲಿ ಪಾಲ್ಗೊಳ್ಳಲು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಹೇಳಿದರು.

ಬರ ಪರಿಹಾರ ಕುರಿತು ಚರ್ಚೆ ಕೈಗೆತ್ತಿಕೊಳ್ಳುವುದಾಗಿ ಹೇಳಿ ಪರ್ಜನ್ಯ ಹೋಮದ ಕುರಿತು ಚರ್ಚೆ ಮಾಡುವ ಮೂಲಕ ಸದನದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಲಾಯಿತು. ಇನ್ನು ಸದನಕ್ಕೆ ಮಂತ್ರಿಗಳು, ಆಡಳಿತ ಪಕ್ಷದ ಶಾಸಕರೇ ಬರುತ್ತಿಲ್ಲ. ಹೀಗಾಗಿ ಖಾಲಿ ಕುರ್ಚಿಗಳ ಜತೆ ಮಾತನಾಡಲು ನಾವು ಅಧಿವೇಶನಕ್ಕೆ ಹೋಗಬೇಕೇ ಎಂದು ಅವರು ಪ್ರಶ್ನಿಸಿದರು.

ರೈತರ ಸಾಲಮನ್ನಾ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯಸರ್ಕಾರಗಳು ರಾಜ್ಯದ ರೈತರ ಜತೆ ಚೆಲ್ಲಾಟವಾಡುತ್ತಿವೆ. ಕೇಂದ್ರ ಸರ್ಕಾರ ಮನ್ನಾ ಮಾಡಿದರೆ ನಾನೂ ಮನ್ನಾ ಮಾಡುತ್ತೇನೆ ಎಂದು ಸಿದ್ದರಾಮಯ್ಯ ರೈತರ ಮೂಗಿಗೆ ತುಪ್ಪ ಸವರುತ್ತಿದ್ದಾರೆ ಎಂದು ಟೀಕಿಸಿದರು.

ಸಾಲ ಮಾಡಿದ್ದೇ ಸಾಧನೆ: ಹಿಂದಿನ ಬಿಜೆಪಿ ಸರ್ಕಾರ ಮಾಡಿದ್ದಕ್ಕಿಂತ ಹೆಚ್ಚು ಸಾಲ ಮಾಡಿದ್ದೇ ಸಿದ್ದರಾಮಯ್ಯ ಸರ್ಕಾರದ ಸಾಧನೆ ಎಂದು ಜರಿದ ಅವರು, ಇತ್ತೀಚೆಗೆ ಸರ್ಕಾರದ ನಾಲ್ಕು ವರ್ಷಗಳ ಸಾಧನಾ ಸಮಾವೇಶ ಮಾಡಿ, ಚುನಾವಣಾ ಪ್ರಣಾಳಿಕೆಯಲ್ಲಿ ಪಕ್ಷ ನೀಡಿದ್ದ ಭರವಸೆಗಳ ಪೈಕಿ 150ಕ್ಕೂ ಹೆಚ್ಚು ಭ ರವಸೆ ಈಡೇರಿಸಿದ್ದೇನೆ, ಹಿಂದಿನ ಯಾವ ಮುಖ್ಯಮಂತ್ರಿಯೂ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆ ಈಡೇರಿಸಿಲ್ಲ ಎಂದಿದ್ದೀರಿ, ನೀವು ಎಲ್ಲ ಭರವಸೆಗಳನ್ನೂ ಈಡೇರಿಸಿದ ಮೇಲೆ ರೈತರೇಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪ್ರಶ್ನಿಸಿದರು.

ನಿಮ್ಮ ಭರವಸೆಗಳ ಈಡೇರಿಕೆ ಕೇವಲ ಪುಸ್ತಕಕ್ಕೆ ಸೀಮಿತವಾಗಿದೆ. ನೀವು ನೀಡಿದ್ದ ಭರವಸೆ ಈಡೇರಿಸಿದ್ದರೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರಲಿಲ್ಲ ಎಂದರು. ಕೃಷಿ ಉತ್ಪನ್ನಗಳಿಗೆ ರೈತರು ನಿಗದಿ ಮಾಡಿದ ಬೆಲೆ ದೊರೆಯುವಂತೆ ಮಾಡುವೆ ಎಂಬ ನಿಮ್ಮ ಭರವಸೆ ಏನಾಯಿತು ಎಂದು ಟೀಕಿಸಿದರು.

ರಾಜ್ಯದ ಜನರ ಮೇಲೆ ಸಾಲ ಹೊರಿಸುವ ಭರವಸೆಯನ್ನೇನಾದರೂ ನೀಡಿದ್ದರೆ ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಈಡೇರಿಸಿದ್ದಾರೆ ಎಂದು ಕುಹಕವಾಡಿದರು. ಸ್ಟೀಲ್‌ ಬ್ರಿàಡ್ಜ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಸರ್ಕಾರ ಏನೇ ನಿರ್ಧಾರ ಕೈಗೊಂಡರೂ ಅದು ವಿವಾದಕ್ಕೆ ಕಾರಣವಾಗುತ್ತಿದೆ. ಇಂತಹ ಉದ್ಧಟತನದ ನಿರ್ಧಾರ ಕೈಗೊಳ್ಳುವ ಸರ್ಕಾರಕ್ಕೆ ಜನರೇ ಮುಂದಿನ ದಿನಗಳಲ್ಲಿ ಪಾಠ ಕಲಿಸಲಿದ್ದಾರೆ ಎಂದರು.

ಮರುಜೀವ: ತಮ್ಮ ವೇಗಕ್ಕೆ ಕಡಿವಾಣ ಹಾಕುವ ಸಲುವಾಗಿಯೇ 11 ವರ್ಷಗಳ ಹಿಂದೆ ಜನಾರ್ದನ ರೆಡ್ಡಿ ಮಾಡಿದ್ದ ಗಣಿ ಲಂಚ ಆರೋಪ ಪ್ರಕರಣಕ್ಕೆ ಸರ್ಕಾರ ಮರು ಜೀವ ನೀಡಿದೆ. ಜಂತಕಲ್‌ ಮೈನಿಂಗ್‌ ಪ್ರಕರಣದ ಎಸ್‌ಐಟಿ ತನಿಖೆಗೆ ಆದೇಶಿಸುವ ಮೂಲಕ ತಮ್ಮ ವರ್ಚಸ್ಸು ಹಾಳು ಮಾಡಲು ಸುಪ್ರೀಂಕೋರ್ಟ್‌ ವಜಾ ಮಾಡಿರುವ ಪ್ರಕರಣಕ್ಕೆ ಮರು ಜೀವ ನೀಡಲಾಗಿದೆ ಎಂದು ಹರಿಹಾಯ್ದರು.

ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧಪಕ್ಷಗಳು ತೆಗೆದುಕೊಳ್ಳುವ ತೀರ್ಮಾನ ಆಧರಿಸಿ ಜೆಡಿಎಸ್‌ ನಿರ್ಧಾರ ಕೈಗೊಳ್ಳಲಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಈ ಕುರಿತು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು. ಇದಕ್ಕೂ ಮುನ್ನ ಎಚ್‌.ಡಿ.ಕುಮಾರಸ್ವಾಮಿ ಹುಣ್ಣಿಮೆ ನಿಮಿತ್ತ ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಶಾಸಕ ಜಿ.ಟಿ.ದೇವೇಗೌಡ, ಮೇಯರ್‌ ಎಂ.ಜೆ.ರವಿಕುಮಾರ್‌ ಇತರರು ಹಾಜರಿದ್ದರು.

ಟಾಪ್ ನ್ಯೂಸ್

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.