ಸಾಲ ಮನ್ನಾ ಮಾಡಲು ಸಿದ್ದುಗೇಕೆ ಸಾಧ್ಯವಿಲ್ಲ?
Team Udayavani, Jun 12, 2017, 11:32 AM IST
ಮೈಸೂರು: ಈ ಹಿಂದೆ ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಯಾರಿಗೂ ಕೈ ಮುಗಿಯದೆ ಎರಡು ಬಾರಿ ರೈತರ ಸಾಲ ಮನ್ನಾ ಮಾಡಿದ್ದೆ ಎಂದು ಪ್ರತಿಪಾದಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಉತ್ತರ ಪ್ರದೇಶ, ಮಹಾರಾಷ್ಟ್ರದಲ್ಲಿ ಕೇಂದ್ರದ ಸಹಕಾರವಿಲ್ಲದೆ ಸಹಕಾರಿ ಬ್ಯಾಂಕುಗಳ ಸಾಲಮನ್ನಾ ಮಾಡಬಹುದಾದರೆ ಸಿಎಂ ಸಿದ್ದರಾಮಯ್ಯನವರಿಗೆ ಏಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾಲ ಮನ್ನಾ ವಿಷಯದಲ್ಲಿ ಯಾವ ಪ್ರತಿಷ್ಠೆಯೂ ಇಲ್ಲ. ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಜುಲೈ 10ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದು. ಒಂದು ವೇಳೆ, ರೈತರ ಸಾಲ ಮನ್ನಾ ಮಾಡಿದರೆ ಹೋರಾಟ ಕೈಬಿಟ್ಟು ಸಿದ್ದರಾಮಯ್ಯನವರನ್ನು ಅಭಿನಂದಿಸುವುದಾಗಿ ತಿಳಿಸಿದರು. ಅಲ್ಲದೆ, ರಾಷ್ಟ್ರೀಕೃತ ಬ್ಯಾಂಕ್ಗಳ ಸಾಲ ಮನ್ನಾ ಮಾಡುವ ಬಗ್ಗೆ ಸೂಕ್ತ ಸ್ಥಳದಲ್ಲಿ ಮಾತನಾಡುತ್ತೇನೆ ಎಂದರು. ಬಳಿಕ, ನಗರದ ಕುರಿಮಂಡಿಯಲ್ಲಿ ದಲಿತರೊಂದಿಗೆ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿ, ಜನ ಸಂಪರ್ಕ ಯಾತ್ರೆ ವೇಳೆ ನಿತ್ಯ ದಲಿತರ ಮನೆಯಲ್ಲಿ ಊಟ-ತಿಂಡಿ ಮಾಡುತ್ತಿರುವುದನ್ನು ಸಹಿಸದ ಸಿದ್ದರಾಮಯ್ಯ ಈ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಎಂದಾದರೂ ದಲಿತರ ಮನೆಯಲ್ಲಿ ಊಟ ತಿಂಡಿ ಮಾಡಿದ್ದಾರಾ? ದಲಿತರ ಕಾಲೋನಿಗೆ ಹೋಗಿ ಅವರ ಕಷ್ಟ ಸುಖ ವಿಚಾರಿಸಿದ್ದಾರಾ ಎಂದು ತರಾಟೆಗೆ
ತೆಗದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.