ಇಂದಿನ ಬಂದ್‌ಗೆ ಮೈಸೂರು ಜಿಲ್ಲಾದ್ಯಂತ ಬೆಂಬಲವಿಲ್ಲ


Team Udayavani, Jun 12, 2017, 1:22 PM IST

mys5.jpg

ಮೈಸೂರು: ರೈತರ ಸಾಲಮನ್ನಾಗೆ ಆಗ್ರಹಿಸಿ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ, ಬರ ಪೀಡಿತ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆ ಜಾರಿಗೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಬಂದ್‌ ಕರೆಗೆ ಸಾಂಸ್ಕೃತಿಕ ನಗರಿ ಮೈಸೂರು ನಗರ ಮತ್ತು ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗಿಲ್ಲ.

ಕನ್ನಡ ಪರ ಸಂಘಟನೆಗಳ ಒಕ್ಕೂಟ ಮುಂದಿಟ್ಟಿರುವ ವಿಷಯಗಳಿಗೆ ನಮ್ಮ ಬೆಂಬಲವಿದೆ, ಆದರೆ ಪದೇ ಪದೆ ಬಂದ್‌ ಮಾಡುವುದರಿಂದ ನಮಗೇ ತೊಂದರೆಯಾಗುತ್ತದೆ. ಹೀಗಾಗಿ ಬಂದ್‌ ಬೆಂಬಲಿಸುತ್ತಿಲ್ಲ ಎಂದು ರೈತ ಹಾಗೂ ಕನ್ನಡ ಪರ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.

ಬಂದ್‌ ವಿಚಾರದಲ್ಲಿ ವಾಟಾಳ್‌ ನಾಗರಾಜ್‌ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ. ಮೈಸೂರಿಗೆ ಬಂದ ವಾಟಾಳ್‌ ನಾಗರಾಜ್‌ ಅವರು ಸೌಜನ್ಯಕ್ಕೂ ಇಲ್ಲಿನ ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರು, ಸಾಹಿತಿಗಳು, ಕಾರ್ಮಿಕ ಮುಖಂಡರು, ರೈತ ಮುಖಂಡರ ಸಭೆ ಕರೆದು ಚರ್ಚಿಸುವ ಬದಲು, ನೇರವಾಗಿ ಮಾಧ್ಯಮ ಗೋಷ್ಠಿ ನಡೆಸಿ ತಮ್ಮ ನಿರ್ಧಾರವನ್ನು ಪ್ರಕಟಿಸಿರುವುದರಿಂದ ಬಂದ್‌ ಬೆಂಬಲಿಸುತ್ತಿಲ್ಲ ಎಂದು ಹಲವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು ಮೈಸೂರು ನಗರ ಮತ್ತು ಜಿಲ್ಲೆಯಲ್ಲಿ ಶಾಲಾ- ಕಾಲೇಜುಗಳು ಸಹ ಎಂದಿನಂತೆ ತೆರೆಯಲಿವೆ ಎಂದು ಡಿಡಿಪಿಐ ಎಚ್‌.ಆರ್‌.ಬಸಪ್ಪ ತಿಳಿಸಿದ್ದಾರೆ. ಹೋಟೆಲ್‌ ಮಾಲೀಕರ ಸಂಘ, ಚಲನಚಿತ್ರ ಮಂದಿರಗಳ ಮಾಲೀಕರ ಸಂಘ, ಪೆಟ್ರೋಲ್‌ ಬಂಕ್‌ಗಳ ಸಂಘಟನೆಗಳು ಸಹ ಬಂದ್‌ ಕರೆಯನ್ನು ಬೆಂಬಲಿಸಿಲ್ಲ.

ಪದೇ ಪದೆ ಬಂದ್‌ಗೆ ಕರೆ ನೀಡುವುದರಿಂದ ಜನ ಜೀವನದ ಮೇಲೆ ಪರಿಣಾಮ ಬೀರಲಿದೆ. ರೈತರ ಕೃಷಿ ಚಟುವಟಿಕೆಗೂ ತೊಂದರೆಯಾಗಲಿದೆ. ಹೀಗಾಗಿ ಬಂದ್‌ ಬೆಂಬಲಿಸುತ್ತಿಲ್ಲ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ತಿಳಿಸಿದ್ದಾರೆ. ರೈತಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್‌, ಬಂದ್‌ಗೆ ಕರೆ ನೀಡಿರುವವರು ಹೇಳಿರುವ ವಿಷಯಗಳು ಸರಿ ಇವೆ. ಆದರೆ, ಎಲ್ಲಕ್ಕೂ ಬಂದ್‌ ಒಂದೇ ಪರಿಹಾರವಲ್ಲ. ಹೀಗಾಗಿ ನಾಳಿನ ಬಂದ್‌ಗೆ ನಮ್ಮ ಬೆಂಬಲವಿಲ್ಲ ಎಂದರು.

ಕನ್ನಡ ಸಾಹಿತ್ಯ ಪರಿಷತ್‌ ಕೇಂದ್ರ ಸಮಿತಿಯಿಂದ ತಮಗೆ ಯಾವುದೇ ಸೂಚನೆ ಬಾರದಿರುವುದರಿಂದ ಬಂದ್‌ ಬೆಂಬಲಿಸುತ್ತಿಲ್ಲ ಎಂದು ಕಸಾಪ ಜಿಲ್ಲಾಧ್ಯಕ್ಷ ಡಾ.ವೈ.ಡಿ.ರಾಜಣ್ಣ ತಿಳಿಸಿದರು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಪದೇ ಪದೆ ಬಂದ್‌ಗೆ ಕರೆ ಕೊಡುವುದು ಸರಿಯಾದ ನಿಲುವಲ್ಲ ಎಂದು ಸಾಹಿತಿ ಬನ್ನೂರು ಕೆ.ರಾಜು ಅಸಮಾಧಾನ ವ್ಯಕ್ತಪಡಿಸಿದರು. ಒಟ್ಟಾರೆ ವಾಟಾಳ್‌ ನಾಗರಾಜ್‌ ಕರೆ ನೀಡಿರುವ ಬಂದ್‌ಗೆ ಮೈಸೂರು ಜಿಲ್ಲೆಯಲ್ಲಿ ಬೆಂಬಲ ಇಲ್ಲದಂತಾಗಿದೆ.

ಎಂದಿನಂತೆ ಕೆಎಸ್ಸಾರ್ಟಿಸಿ ಬಸ್‌…: ಬಂದ್‌ ಕರೆಗೆ ಯಾವುದೇ ಸಂಘಟನೆಗಳ ಬೆಂಬಲ ದೊರೆಯದ ಹಿನ್ನೆಲೆ ಜನ ಜೀವನ ಎಂದಿನಂತೆ ಇರಲಿದೆ. ಕೆಎಸ್ಸಾರ್ಟಿಸಿಯ ನಗರ ಮತ್ತು ಗ್ರಾಮಾಂತರ ಸಾರಿಗೆ ಬಸ್‌ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಕೆಎಸ್ಸಾರ್ಟಿಸಿ ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಮಹೇಶ್‌ ಉದಯವಾಣಿಗೆ ತಿಳಿಸಿದರು.

ಟಾಪ್ ನ್ಯೂಸ್

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.