ಚುನಾವಣೆ ಸೋಲು: ಮೇ ವಿರುದ್ಧ ಬಂಡಾಯದ ಧ್ವನಿ
Team Udayavani, Jun 12, 2017, 2:08 PM IST
ಲಂಡನ್: ಸಾರ್ವತ್ರಿಕ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ ಬ್ರಿಟನ್ ಪ್ರಧಾನಿ ಥೆರೇಸಾ ಮೇ ಅವರನ್ನು ಪ್ರಧಾನಿ ಹುದ್ದೆಯಿಂದ ಜಾಗ ಖಾಲಿ ಮಾಡಿಸಲು ತಯಾರಿ ನಡೆದಿದೆಯೇ? ಕನ್ಸರ್ವೇಟಿವ್ ಪಕ್ಷದ ನಾಯಕನಾಗಿ ಥೆರೇಸಾ ಮೇ ಅವರ ಸ್ಥಾನವನ್ನು ತುಂಬುವಂತೆ ಬೋರಿಸ್ ಜಾನ್ಸನ್ ಅವರ ಮೇಲೆ ಬ್ರಿಟನ್‌ನ ಕನಿಷ್ಠ ಐವರು ಸಂಸದರು ಒತ್ತಡ ಹೇರುತ್ತಿದ್ದಾರೆ ಎಂಬ ಅಂಶ ಇದೀಗ ಬೆಳಕಿಗೆ ಬಂದಿದೆ. ಆದರೆ, ಇಲ್ಲಿನ ವಿದೇಶಾಂಗ ಸಚಿವರು ಇದನ್ನು ತಳ್ಳಿಹಾಕಿದ್ದಾರೆ. ಸಂಸತ್ ಮಟ್ಟದಲ್ಲೇ ಕೆಲವು ಹಿರಿಯ ಸಂಸದರು ಬೋರಿಸ್ ಪರ ಒಲವು ಹೊಂದಿದ್ದಾರೆ. ಬಹುಮತದ ಸರಕಾರವನ್ನು ಅಲ್ಪಮತಕ್ಕೆ ಕುಸಿಯುವಂತೆ ಮಾಡಿದ ಮೇ ಅವರ ಬಗ್ಗೆ ಅಸಮಾಧಾನ ಭುಗಿಲೇಳತೊಡಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಆದರೆ, ಬಂಡಾಯದ ಧ್ವನಿಯನ್ನು ನಿರಾಕರಿಸಿರುವ ಬೋರಿಸ್, ಅಂಥದ್ದೇನೂ ಇಲ್ಲ. ನಾನು ಥೆರೇಸಾರಿಗೆ ಬೆಂಬಲ ನೀಡುತ್ತೇನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.