ಪತ್ರಕರ್ತರಿಗೂ ಸ್ವಾತಂತ್ರ್ಯ ಇಲ್ಲ; ನ್ಯಾಶನಲ್ ಹೆರಾಲ್ಡ್ ಪುನಾರಂಭ
Team Udayavani, Jun 12, 2017, 4:06 PM IST
ಬೆಂಗಳೂರು: ದೇಶದಲ್ಲಿ ರೈತರಿಗೆ, ದಲಿತರಿಗೆ ಹಾಗೂ ಪತ್ರಕರ್ತರಿಗೆ ಸ್ವಾತಂತ್ರ್ಯ ಇಲ್ಲದಂತಾಗಿದೆ. ದೇಶದಲ್ಲಿ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ಕೇಂದ್ರ ಸರ್ಕಾರದ ವಿರುದ್ಧ ಆರೋಪಿಸಿದರು.
ಬೆಂಗಳೂರಿನ ವಸಂತನಗರದ ಅಂಬೇಡ್ಕರ್ ಸಭಾಂಗಣದಲ್ಲಿ ಪಕ್ಷದ ಮುಖವಾಣಿಯಾದ ನ್ಯಾಶನಲ್ ಹೆರಾಲ್ಡ್ ಪತ್ರಿಕೆಯ ಸ್ಮರಣ ಸಂಚಿಕೆಯನ್ನು ರಾಹುಲ್ ಗಾಂಧಿ ಹಾಗೂ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಬಿಡುಗಡೆಗೊಳಿಸಿದ್ದರು.
ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ರಾಹುಲ್, ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪುನರಾರಂಭಗೊಳ್ಳುವ ಮೂಲಕ ದೇಶಕ್ಕೆ ಸ್ಫೂರ್ತಿ ತುಂಬುತ್ತೆ. ಪತ್ರಿಕೆ ಪಕ್ಷದ ಮುಖವಾಣಿ ಆಗುವುದು ಬೇಡ ಎಂದು ಹೇಳಿದ್ದು, ಪತ್ರಿಕೆಯಲ್ಲಿ ನನ್ನ ವಿರುದ್ಧವೂ ಬರೆಯಿರಿ ಎಂದು ಹೇಳಿರುವುದಾಗಿ ತಿಳಿಸಿದರು.
ಎಲ್ಲರ ಬಾಯಿಯನ್ನು ಬಲವಂತವಾಗಿ ಮುಚ್ಚಿಸಲಾಗುತ್ತಿದೆ. ಹೋರಾಟ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ಒಗ್ಗಟ್ಟಾಗಿ ದುಡಿಯುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಅಧಿಕಾರದ ಗದ್ದುಗೆಗೆ ಏರಿಸಬೇಕಾಗಿದೆ ಎಂದು ಹೇಳಿದರು.
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಚಾಂಪಿಯನ್: ಸಿಎಂ ಸಿದ್ಧರಾಮಯ್ಯ
ಪಂಡಿತ್ ಜವಾಹರಲಾಲ್ ನೆಹರು ಅವರು ಸ್ವಾತಂತ್ರ್ಯ ಹೋರಾಟಗಾರರೊಂದಿಗೆ ರೂಪಿಸಿದ್ದ ಪತ್ರಿಕೆ ನ್ಯಾಶನಲ್ ಹೆರಾಲ್ಡ್. ನೆಹರು ಪತ್ರಿಕೆಯ ಸಂಪಾದಕರಾಗಿ, ವರದಿಗಾರರಾಗಿ ದುಡಿದಿದ್ದರು. ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕತೆ ಪತ್ರಿಕೆಯ ಧ್ಯೇಯವಾಗಿತ್ತು. ನ್ಯಾಶನಲ್ ಹೆರಾಲ್ಡ್ ಪತ್ರಿಕೆಯನ್ನು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಬೆಂಗಳೂರಿನಲ್ಲಿ ಪುನರಾರಂಭಿಸುತ್ತಿರುವುದು ಹೆಮ್ಮೆಯ ವಿಚಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
70 ವರ್ಷಗಳ ಇತಿಹಾಸವುಳ್ಳ ನ್ಯಾಶನಲ್ ಹೆರಾಲ್ಡ್ ಪತ್ರಿಕೆ ಪವರ್ ಆಫ್ ಟ್ರುತ್ , ಪವರ್ ಆಫ್ ಕರೇಜ್ ಅಗತ್ಯವಿದೆ. ನ್ಯಾಶನಲ್ ಹೆರಾಲ್ಡ್ ಪತ್ರಿಕೆ ಚಾಂಪಿಯನ್ ಎಂದು ಹೊಗಳಿದರು. ಸ್ವಾತಂತ್ರ್ಯ ಹೋರಾಟಕ್ಕೆ ಸ್ಫೂರ್ತಿ ತುಂಬಿದ್ದ ಪತ್ರಿಕೆ ಮತ್ತೆ ಆರಂಭಗೊಳ್ಳುತ್ತಿರುವುದು ಸಂತಸದ ಸುದ್ದಿ ಎಂದರು.
(ಇದನ್ನೂ ಓದಿ:ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖವಾಣಿ ನ್ಯಾಶನಲ್ ಹೆರಾಲ್ಡ್ ಮತ್ತೆ ಶುರು)
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.