ವೃದ್ಧೆಯ ಮೇಲೆ ಅತ್ಯಾಚಾರ:ಪ್ರಕರಣ ತಡವಾಗಿ ಬೆಳಕಿಗೆ
Team Udayavani, Jun 12, 2017, 4:44 PM IST
ಉಡುಪಿ: ಗುಜರಿ ಹೆಕ್ಕಿಕೊಂಡು ಬದುಕು ಸಾಗಿಸುತ್ತಿದ್ದ 70 ವರ್ಷದ ವೃದ್ಧೆಯ ಮೇಲೆ ಅಪರಿಚಿತ ಯುವಕನೊಬ್ಬ ಅತ್ಯಾಚಾರ ಮಾಡಿ ವೃದ್ಧೆಯಲ್ಲಿದ್ದ ನಗದು ಮತ್ತು ಚಿನ್ನಾಭರಣನ್ನು ಸಹ ದೋಚಿಕೊಂಡು ಹೋದ ಘಟನೆ ಉಡುಪಿ ನಗರ ಠಾಣೆ ವ್ಯಾಪ್ತಿಯಲ್ಲಿ ಜೂ. 5ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ನಗರದ ಹೊರವಲಯದಲ್ಲಿರುವ ಖಾಸಗಿ ಪುನರ್ವಸತಿ ಕೇಂದ್ರದಲ್ಲಿ ಸಂತ್ರಸ್ತ ವೃದ್ಧೆ ಆಶ್ರಯ ಪಡೆದಿದ್ದಾರೆ. ಪ್ರಕರಣದ ಕುರಿತು ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಉಡುಪಿ ಸರ್ಕಲ್ ಇನ್ಸ್‌ಪೆಕ್ಟರ್ ನವೀನ್‌ಚಂದ್ರ ಜೋಗಿ ತನಿಖೆ ನಡೆಸುತ್ತಿದ್ದಾರೆ. ಗಂಭೀರ ಪ್ರಕರಣವಾಗಿದ್ದರೂ, ಈ ಬಗ್ಗೆ ಮಾಧ್ಯಮಗಳಿಗೆ ಗೊತ್ತಾಗದಂತೆ ಪೊಲೀಸರೇ ನೋಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಇದಕ್ಕೆ ಪೂರಕವಾಗಿ ಪ್ರಕರಣದ ಕುರಿತು ತನಿಖಾಧಿಕಾರಿಗಳಲ್ಲಿ ಮಾಹಿತಿ ಕೇಳಿದಾಗ ಅತ್ಯಾಚಾರ ಪ್ರಕರಣವಾದ ಕಾರಣ ಮಾಧ್ಯಮಗಳಿಗೆ ಏನೂ ಹೇಳಲಾಗಲ್ಲ ಎಂದಿದ್ದಾರೆ.
ಸಂತ್ರಸ್ತೆಯ ಬಗ್ಗೆ ಬೇಡ, ಆರೋಪಿಯ ಕುರಿತಾಗಿ ಮಾಹಿತಿ ನೀಡಿ ಎಂದು ಹೇಳಿದರೂ, ಮಹಿಳಾ ಠಾಣೆಯಲ್ಲಿ ಕೇಳಿ ಎಂದು ತನ್ನ ಜವಾಬ್ದಾರಿಯಿಂದ ತನಿಖಾಧಿಕಾರಿ ನುಣುಚಿಕೊಂಡಿದ್ದಾರೆ. ಇಲಾಖೆಯ ಸಿಸಿ ಕೆಮರಾ, ಖಾಸಗಿ ಕಟ್ಟಡಗಳಲ್ಲಿ ಸಿಸಿ ಕೆಮರಾ ನಗರದೆಲ್ಲೆಡೆ ಕಣ್ಗಾವಲಿಗೆ ಇದ್ದರೂ ವಾರ ಕಳೆದರೂ, ಆರೋಪಿಯನ್ನು ಪತ್ತೆ ಹಚ್ಚಲು ಪೊಲೀಸರಿಂದ ಸಾಧ್ಯವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.