ಸಮಸ್ಯೆಗಳಿಗೆ ಸ್ಥಳೀಯವಾಗೇ ಪರಿಹಾರ ಹುಡುಕಿ
Team Udayavani, Jun 13, 2017, 12:44 PM IST
ಕೆಂಗೇರಿ: ದೇಶದಲ್ಲಿ ಎದುರಾಗುವ ಸಣ್ಣ ಸಮಸ್ಯೆ ಪರಿಹಾರಕ್ಕೂ ವಿದೇಶಗಳ ನೆರವು ಕೋರುವ ನಮ್ಮ ಆಲೋಚನೆಗಳನ್ನು ಬದಲಿಸಿಕೊಂಡು ಸ್ಥಳೀಯವಾಗೇ ಸಮಸ್ಯೆಗಳ ಪರಿಹಾರಕ್ಕೆ ಮಾರ್ಗೋಪಾಯ ಕಂಡುಕೊಳ್ಳಬೇಕಿದೆ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ ಹಿರಿಯ ವಿಜ್ಞಾನಿ ಡಾ.ಎಚ್.ಎನ್.ಚಾಣಕ್ಯ ಹೇಳಿದರು.
ಉಲ್ಲಾಳು ಮುಖ್ಯ ರಸ್ತೆಯ ಮಂಗಳೂರು ಸ್ವತಂತ್ರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ತರಗತಿ ಪ್ರಾರಂಭೋತ್ಸವ ಹಾಗೂ ದ್ವಿತೀಯ ಪಿಯುಸಿಯಲ್ಲಿ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳ ಅಭಿನಂದನೆ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.
ಬೆಂಗಳೂರಿಗೆ ಇರುವ “ಗಾಬೇಜ್ ಸಿಟಿ’ ಎಂಬ ಕಳಂಕವನ್ನು ಅಳಿಸಿಹಾಕುವ ನಿಟ್ಟಿನಲ್ಲಿ ನಮ್ಮಲ್ಲೇ ಪರಿಹಾರ ಹುಡುಕುವ, ಕಸದಿಂದಲೇ ರಸ ತೆಗೆಯುವ ಯೋಜನೆ ರೂಪಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆಸಿಕೊಂಡು, ಹೊಸ ಆವಿಷ್ಕಾರಗನ್ನು ಪರಿಚಯಿಸುವ ಮೂಲಕ ಸಾಮಾಜಿಕ ಬದಲಾವಣೆಗೆ ಸಿದ್ಧರಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ.ಜಯರಾಮ್ ಶೆಟ್ಟಿ ಮಾತನಾಡಿ, ನಾಡಿನ ಕಲೆ, ಕ್ರೀಡೆ, ಸಾಹಿತ್ಯ, ಸಂಸ್ಕೃತಿ ಬಿಂಬಿಸುವ ವಾತಾವರಣ ಕಾಲೇಜಿನಲ್ಲಿದೆ. ಇದರೊಂದಿಗೆ ವಿದ್ಯಾರ್ಥಿಗಳಿಗೆ ನಮ್ಮ ಪರಂಪರೆ, ಇತಿಹಾಸವನ್ನು ಪರಿಚಯಿಸಿ ಅವರನ್ನು ಉತ್ತಮ ಪ್ರಜೆಗಳನ್ನಾಗಿಸು ಪ್ರಯತ್ನದಲ್ಲಿ ಸಂಸ್ಥೆ ತೊಡಗಿದೆ ಎಂದರು.
ಸಮಾರಂಭದಲ್ಲಿ ಶ್ರೀದೇವಿ ಎಜುಕೇಷನ್ ಟ್ರಸ್ಟ್ ಉಪಾಧ್ಯಕ್ಷ ಎಚ್.ಆರ್.ಸುರೇಶ್, ಕಾರ್ಯದರ್ಶಿ ಡಾ.ಎಂ.ಜಯಕರ ಶೆಟ್ಟಿ, ಕಾಲೇಜಿನ ಆಡಳಿತ ಸಲಹೆಗಾರ ಟಿ.ಎಸ್.ತುಳಸಿಕುಮಾರ್ ಇದ್ದರು. ಇದೇ ವೇಳೆ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಆರು ಮತ್ತು ಹತ್ತನೇ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
TAMATE MOVIE: ಟೀಸರ್‌ನಲ್ಲಿ ತಮಟೆ ಸದ್ದು
Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ
Jalandhara Kannada Movie: ಜಲಂಧರ ಮೇಲೆ ಪ್ರಮೋದ್ ಕಣ್ಣು
Rishab Shetty: ʼಜೈ ಹನುಮಾನ್ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್ ಶೆಟ್ಟಿ?
Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.