ಕೆಲಸ ಕಾಯಂಗೆ ಒತ್ತಾಯಿಸಿ ಪೌರಕಾರ್ಮಿಕರ ಪ್ರತಿಭಟನೆ


Team Udayavani, Jun 13, 2017, 1:14 PM IST

mys3.jpg

ಮೈಸೂರು: ಗುತ್ತಿಗೆ ಪೌರ ಕಾರ್ಮಿಕರನ್ನು ಕಾಯಂಗೊಳಿಸಿದ ಪೌರ ಕಾರ್ಮಿಕರು ಕೆಲಸ ಬಹಿಷ್ಕರಿಸಿ ನಗರಪಾಲಿಕೆ ಮುಂಭಾಗ ಪ್ರತಿಭಟನಾ ಧರಣಿ ನಡೆಸಿದರು. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಗುತ್ತಿಗೆ ಪೌರ ಕಾರ್ಮಿಕರನ್ನು ಕಾಯಂಗೊಳಿಸುವಂತೆ ಆಗ್ರಹಿಸಿದ ಪೌರ ಕಾರ್ಮಿಕರು, ಸೋಮವಾರದಿಂದ ಕೆಲಸ ಸ್ಥಗಿತಗೊಳಿಸಿ ರಾಜವ್ಯಾಪಿ ಪೌರಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಪ್ರತಿಭಟಿಸುತ್ತಿರುವುದಾಗಿ ತಿಳಿಸಿ, ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳೇ ಕಳೆದರೂ ಇದುವರೆವಿಗೂ ನಮ್ಮನ್ನು ಕಾಯಂಗೊಳಿಸಿಲ್ಲ.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಗುತ್ತಿಗೆ ಪದ್ಧತಿ ತಡೆಯಲು 2016ರ ಮೇ 4ರಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ 2017ರ ಮಾರ್ಚ್‌ ತಿಂಗಳೊಳಗೆ ವಿಶೇಷ ನೇಮಕಾತಿ ನಿಯಮ ರೂಪಿಸಿ ಎಲ್ಲಾ ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಲು ತೀರ್ಮಾನಿಸಿತ್ತು, ಆದರೆ ಜೂನ್‌ ತಿಂಗಳಾದರೂ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲವೆಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

45 ಸಾವಿರಕ್ಕೂ ಅಧಿಕ ಪೌರಕಾರ್ಮಿಕರು ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸರ್ಕಾರವಾಗಲೀ, ಗುತ್ತಿಗೆದಾರ ಸಂಸ್ಥೆಯಾಗಲೀ ಪೌರಕಾರ್ಮಿಕರಿಗೆ ಕೆಲಸದ ಭದ್ರತೆ, ಆರೋಗ್ಯದ ಸುರಕ್ಷತೆ ಒದಗಿಸದೆ ಹೀನಾಯವಾಗಿ ದುಡಿಸಿಕೊಳ್ಳುತ್ತಿವೆ. ಸುರಕ್ಷತೆ ಇಲ್ಲದ ಕಾರಣ ಪೌರಕಾರ್ಮಿಕರು ಹಲವಾರು ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಆದ್ದರಿಂದ ಕೂಡಲೇ ರಾಜ್ಯದಲ್ಲಿರುವ ಎಲ್ಲಾ ಪೌರ ಕಾರ್ಮಿಕರನ್ನು ಕಾಯಂಗೊಳಿಸಬೇಕು. ಪೌರಕಾರ್ಮಿಕರಿಗೆ ಸೂಕ್ತ ವೇತನ, ಸೇವಾ ಭದ್ರತೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ತಿಳಿಸಿದರು. ಸಂಘದ ಪದಾಧಿಕಾರಿಗಳಾದ ಶ್ರೀನಿವಾಸ್‌, ಎನ್‌. ನರಸಿಂಹ, ವಿಜಯ, ಜಯರಾಮು, ಪಳನಿಸ್ವಾಮಿ ಸೇರಿದಂತೆ ನೂರಾರು ಮಂದಿ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆಯಲ್ಲಿದ್ದರು.

ಕಾಂಗ್ರೆಸ್‌ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಂತೆ ಗುತ್ತಿಗೆ ಪೌರ ಕಾರ್ಮಿಕರು ಹಾಗೂ ವಾಟರ್‌ಮ್ಯಾನ್‌ಗಳನ್ನು ಕಾಯಂಗೊಳಿಸುವಲ್ಲಿ ವಿಫ‌ಲವಾಗಿದ್ದು, ಈ ಹಿನ್ನೆಲೆ ಸ್ಥಳೀಯ ಸಂಸ್ಥೆಗಳ ಗುತ್ತಿಗೆ ಪೌರಕಾರ್ಮಿಕರು ಹಾಗೂ ವಾಟರ್‌ ಮ್ಯಾನ್‌ಗಳು ಸ್ವತ್ಛತೆ, ಕುಡಿಯುವ ನೀರು ಪೂರೈಕೆ ಬಹಿಷ್ಕರಿಸಿ ಆಯಾ ನಗರಸಭೆ, ಪುರಸಭೆ, ಪಪಂ ಎದುರು ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ.
-ಮಾರ, ಮೈಸೂರು ಪೌರ ಕಾರ್ಮಿಕರ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.