ಬಾಲ ಕಾರ್ಮಿಕ ಪದ್ಧತಿ ಪೂರ್ಣ ತಡೆಗೆ ಸಹಕರಿಸಿ: ಶ್ರೀದೇವಿ


Team Udayavani, Jun 13, 2017, 1:33 PM IST

dvg2.jpg

ದಾವಣಗೆರೆ: ಸರ್ಕಾರದೊಂದಿಗೆ ಸಂಘ- ಸಂಸ್ಥೆಗಳು, ಪೊಷಕರು ಹಾಗೂ ಸಮಾಜ ಕೈಜೋಡಿಸುವ ಮೂಲಕ ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ಸಹಕರಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಎಂ. ಶ್ರೀದೇವಿ ಮನವಿ ಮಾಡಿದ್ದಾರೆ. 

ಸೋಮವಾರ ಜಿಲ್ಲಾಡಳಿತದ ತುಂಗಭದ್ರಾ ಸಭಾಂಗಣದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ ಅನಿಷ್ಟ ಬಾಲಕಾರ್ಮಿಕ ಪದ್ಧತಿ ತಡೆಯಲು ಸಾಕಷ್ಟು ಕಾನೂನು, ಕ್ರಮ ಇವೆ. ಅವುಗಳಿಂದ ಸಂಪೂರ್ಣ ತಡೆಗಟ್ಟಲಿಕ್ಕೆ ಸಾಧ್ಯವಿಲ್ಲ ಎಂದರು. 

ಪ್ರತಿ ವರ್ಷ ಜೂ. 12ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಬಾಲಕಾರ್ಮಿಕರ ಸಂಖ್ಯೆ ಕಡಿಮೆ ಆಗುತ್ತಿದೆ. ಹಿಂದೆಲ್ಲಾ ಶೇ. 20ರಷ್ಟು ಬಾಲಕಾರ್ಮಿಕರು ಕಾಣ ಸಿಗುತ್ತಿದ್ದರು. ಆದರೆ, ಈಗ ಸಂಖ್ಯೆ ಕಡಿಮೆ ಆಗಿದೆಯಷ್ಟೇ ಸಂಪೂರ್ಣ ನಿಂತಿಲ್ಲ.

ದಾವಣಗೆರೆ ಜಿಲ್ಲೆ ಬಾಲಕಾರ್ಮಿಕ ಪದ್ಧತಿ ವಿರೋಧಿಸುವ ಹಾಗೂ ಮಕ್ಕಳನ್ನು ಮುಖ್ಯವಾಹಿನಿಗೆ ಕರೆ ತರುವ ನಿಟ್ಟಿನಲ್ಲಿ ಸ್ವಲ್ಪ ಮುಂಚೂಣಿಯಲ್ಲಿದೆ. ಪೂರ್ಣ ಪ್ರಮಾಣದಲ್ಲಿ ತಡೆಗಟ್ಟಲು ಹಾಗೂ 14 ವರ್ಷದೊಳಗಿನ ಎಲ್ಲ ಮಕ್ಕಳು ಶಾಲೆಯಲ್ಲಿ ಇರುವಂತಾಗಲು ಸಾರ್ವಜನಿಕರು ಸಹಕರಿಸಬೇಕು ಎಂದರು. 

14 ವರ್ಷದೊಳಗಿನ ಮಕ್ಕಳಿಗೆ ಅಷ್ಟಾಗಿ ಕೆಲಸ ಮಾಡುವ ಸಾಮರ್ಥ್ಯ ಇರುವುದೇ ಇಲ್ಲ. ಅಂತಹ ಮಕ್ಕಳನ್ನು ತೀರಾ ಅಪಾಯಕಾರಿ ಕ್ಷೇತ್ರ ಎನ್ನುವ ರೈಲ್ವೆ. ಬಸ್‌ ನಿಲ್ದಾಣ, ಬಣ್ಣ, ಪಟಾಕಿ ಅಂಗಡಿಯಲ್ಲಿ ಕೆಲಸಕ್ಕೆ ಇಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧ. ಜಿಲ್ಲೆಯಲ್ಲಿ ಅಪಾಯಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುವ ಮಕ್ಕಳ ಸಂಖ್ಯೆ ಹೆಚ್ಚಾಗಿದೆ.

ಹಿಂದೆಲ್ಲಾ 14 ವರ್ಷದ ಮಕ್ಕಳಿಗೆ ಶಿಕ್ಷಣ ಕಡ್ಡಾಯ ಆಗಿರಲಿಲ್ಲ. ಈಗ ಅದು ಕಡ್ಡಾಯ. ಎಲ್ಲ ಮಕ್ಕಳಲ್ಲಿ ಟಾಪರ್‌ ಆಗುವ ಸಾಮರ್ಥ್ಯ ಇದೆ. ಹಾಗಾಗಿ ಎಲ್ಲ ಮಕ್ಕಳಿಗೆ ಸಮಾನ ಅವಕಾಶ ನೀಡಬೇಕು ಎಂದು ತಿಳಿಸಿದರು. ಜಗತ್ತಿನಲ್ಲಿ ಶೇ. 33ರಷ್ಟು ಮಹಿಳೆಯರು ಮತ್ತು ಮಕ್ಕಳು ಸಂಘರ್ಷ ಮತ್ತು ವಿಪತ್ತಿಗೆ ಒಳಗಾಗಿದ್ದಾರೆ.

ಸಂಘರ್ಷಕ್ಕೆ ತುತ್ತಾದ ಮಹಿಳೆಯರು ಮತ್ತು ಮಕ್ಕಳು ಕಂಡು ಬಂದಾಗ ಸಂಬಂಧಿತರ ಗಮನಕ್ಕೆ ತರಬೇಕು. ಬಾಲಕಾರ್ಮಿಕ ಮಕ್ಕಳ ಪೋಷಕರಿಗೆ ಶಿಕ್ಷಣ ಅಗತ್ಯತೆ, ಮಹತ್ವದ ಬಗ್ಗೆ ತಿಳಿಹೇಳಬೇಕು. ಮನಪರಿವರ್ತನೆ ಮೂಲಕ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶ್ರಮಿಸುವುದು ಎಲ್ಲರ ಆದ್ಯ ಕರ್ತವ್ಯ ಎಂದು ತಿಳಿಸಿದರು. 

ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆಂಗಬಾಲಯ್ಯ ಮಾತನಾಡಿ, ಅನಕ್ಷರತೆ, ಬಡತನ, ಇಂದಿನ ಸಾಮಾಜಿಕ ಸ್ಥಿತಿಗತಿಯ ಬಗ್ಗೆ ಗೊತ್ತಿಲ್ಲದವರ ಮಕ್ಕಳು ಹೆಚ್ಚಾಗಿ ಬಾಲಕಾರ್ಮಿಕ ಪದ್ಧತಿಗೆ ತುತ್ತಾಗುತ್ತಿದ್ದಾರೆ. ಪೋಷಕರಲ್ಲಿ ಬಾಲಕಾರ್ಮಿಕ ಪದ್ಧತಿಯ ದುಷ್ಪರಿಣಾಮ, ಶಿಕ್ಷಣದ ಅಗತ್ಯತೆ ಬಗ್ಗೆ ಮನಃಪರಿವರ್ತನೆ ಮಾಡುವ ಮೂಲಕ ಮಕ್ಕಳು ಬಾಲಕಾರ್ಮಿಕರಾಗುವುದ ತಪ್ಪಿಸಬೇಕು.

ಕಾನೂನು, ಕ್ರಮದಿಂದ ಪೂರ್ಣ ಪ್ರಮಾಣದ ಸಫಲತೆ ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು. ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ಮಾತನಾಡಿ, ಬಾಲ್ಯಾವಸ್ಥೆಯಲ್ಲಿ ಮಕ್ಕಳನ್ನು ಕೆಲಸಕ್ಕೆ ದೂಡುವುದರಿಂದ ಅವರ ಬಾಲ್ಯವನ್ನೇ ಕಸಿದುಕೊಂಡಂತಾಗುತ್ತದೆ. ಮಕ್ಕಳು ತಮ್ಮ ಬಾಲ್ಯವನ್ನು ಬಾಲ್ಯವಾಗಿಯೇ ಕಳೆಯುವ ಅವಕಾಶ ಮಾಡಿಕೊಡಬೇಕು.

ಸಂಘರ್ಷದಲ್ಲಿರುವ ಮಹಿಳೆಯರು ಮತ್ತು ಮಕ್ಕಳನ್ನು ರಕ್ಷಿಸುವುದು ಆದ್ಯ ಕರ್ತವ್ಯ ಎಂದರು. ಜಿಲ್ಲಾ ರಕ್ಷಣಾಧಿಕಾರಿ ಡಾ| ಭೀಮಶಂಕರ್‌ ಎಸ್‌. ಗುಳೇದ್‌ ಮಾತನಾಡಿ, ಸ್ವಾತಂತ್ರ ಬಂದ 70 ವರ್ಷದ ನಂತರವೂ ಬಾಲಕಾರ್ಮಿಕ ಪದ್ಧತಿ ಜೀವಂತವಾಗಿರುವುದು ನಾಚಿಕೆಗೇಡಿನ ಮತ್ತು ತಲೆತಗ್ಗಿಸುವ ವಿಚಾರ.

ಕೆಲವರು ನಮ್ಮ ಮುಂದೆ ಏನೆಲ್ಲಾ ನಡೆದರೂ ಉಸಾಬರಿ ಬೇಡ  ಎಂದು ಸುಮ್ಮನಾಗುತ್ತಾರೆ. ಆ ರೀತಿ ಮಾಡದೆ ಸಹಾಯವಾಣಿ 1098 ಇಲ್ಲವೇ 100ಕ್ಕೆ ಮಾಹಿತಿ ನೀಡಿ, ಮಗುವಿನ ಭವಿಷ್ಯ ಕತ್ತಲಾಗುವುದ ತಪ್ಪಿಸಬೇಕು ಎಂದು ಮನವಿ ಮಾಡಿದರು. ಆರ್‌.ಎಲ್‌. ಕಾನೂನು ಕಾಲೇಜು ಪ್ರಾಧ್ಯಾಪಕಿ ಟಿ.ಸಿ. ಪಂಕಜಾ ಉಪನ್ಯಾಸ ನೀಡಿದರು. ಮೇಯರ್‌ ಅನಿತಾಬಾಯಿ ಅಧ್ಯಕ್ಷತೆ ವಹಿಸಿದ್ದರು.

ಡೆಪ್ಯುಟಿ ಮೇಯರ್‌ ಜಿ. ಮಂಜುಳಾ, ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ಲೋಕಿಕೆರೆ ಸಿದ್ದಪ್ಪ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಎಚ್‌.ಎಂ. ಪ್ರೇಮಾ, ಜಿ.ಎಂ. ರವೀಂದ್ರ, ಡಾ| ರಂಗಸ್ವಾಮಿ, ಡಿ.ಸಿ. ನಾಗೇಶ್‌ ಇತರರು ಇದ್ದರು. ಕಾರ್ಯಕ್ರಮದ ಮುನ್ನ ಮಿಲ್ಲತ್‌ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದರು.  

ಟಾಪ್ ನ್ಯೂಸ್

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: 35 ಪ್ರಯಾಣಿಕರಿದ್ದ ಬಸ್ ಪಲ್ಟಿ… ೧೦ ಮಂದಿ ಮೃತ್ಯು, ಹಲವರಿಗೆ ಗಾಯ

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

IPL 2024: Pant has the ambition to become India’s cricket captain: Parth Jindal

IPL 2025: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: 35 ಪ್ರಯಾಣಿಕರಿದ್ದ ಬಸ್ ಪಲ್ಟಿ… ೧೦ ಮಂದಿ ಮೃತ್ಯು, ಹಲವರಿಗೆ ಗಾಯ

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.