ಅವ್ಯವಹಾರ ತನಿಖೆಗಾಗಿ ಸದನ ಸಮಿತಿಗೆ ದೂರು
Team Udayavani, Jun 13, 2017, 1:33 PM IST
ಜಗಳೂರು: ಜಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಸಣ್ಣ ನೀರಾವರಿ ಇಲಾಖೆ ನಡೆಸಿರುವ ಅವ್ಯವಹಾರವನ್ನು ತನಿಖೆ ನಡೆಸುವಂತೆ ಸದನ ಸಮಿತಿಗೆ ದೂರು ನೀಡಲಾಗುವುದು ಎಂದು ಮಾಜಿ ಶಾಸಕ ಎಸ್.ವಿ.ರಾಮಚಂದ್ರ ತಿಳಿಸಿದರು. ಪಟ್ಟಣದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ಜಗಳೂರು ಪಟ್ಟಣದ ಕೆರೆಯ ಅಭಿವೃದ್ಧಿಗೆ ನಾಲ್ಕೆçದು ಕೋಟಿ ರೂಪಾಯಿ ಅನುದಾನ ಖರ್ಚು ಮಾಡಲಾಗಿದೆ ಎಂದು ದಾಖಲೆಗಳು ಹೇಳುತ್ತಿವೆ. ಆದರೆ ಭೌತಿಕವಾಗಿ ಪ್ರಗತಿಯಾಗಿಲ್ಲ, ಬದಲಿಗೆ ಡ್ರೆನೇಜ್ ಗುಂಡಿಯಾಗಿ ಪರಿವರ್ತನೆಯಾಗಿದೆ ಎಂದು ಆರೋಪಿಸಿದರು.
ಜಗಳೂರು ತಾಲೂಕಿನ 8 ಗ್ರಾಪಂಗಳಲ್ಲಿ ನರೇಗಾ ಯೋಜನೆಯಡಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು, ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳೇ ಸಾಕ್ಷಿಯಾಗಿದೆ. ಕೂಲಿ ಇಲ್ಲದೇ ಜನತೆ ಬೇರೆ ಕಡೆ ಗುಳೆ ಹೋಗುತ್ತಿದ್ದಾರೆ. ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಅಗತ್ಯಕ್ಕೆ ತಕ್ಕಂತೆ ಬೀಜಗೊಬ್ಬರ ದಾಸ್ತಾನ ಮಾಡಿಲ್ಲ.
ಪಶುಭಾಗ್ಯ ಯೋಜನೆಯಡಿ ಹಗಲು ದರೋಡೆ ನಡೆದಿದೆ. ವಸತಿ ಯೋಜನೆಯಡಿ ಅನರ್ಹರಿಗೆ ವಸತಿ ಕಲ್ಪಿಸಲಾಗಿದೆ. ಸಾರ್ವಜನಿಕರ ಕೆಲಸಗಳು ಆಗುತ್ತಿಲ್ಲ ಎಂದು ದೂರಿದರು. ಕ್ಷೇತ್ರದಲ್ಲಿ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದಿದ್ದು, ಶಾಸಕರ ಮಾತನ್ನು ಅ ಧಿಕಾರಿಗಳು ಕೇಳುತ್ತಿಲ್ಲ. ರೆಗ್ಯೂಲರ್ ರೇಂಜ್ ಫಾರೆಸ್ಟ್‌ನಲ್ಲಿ ಅವ್ಯವಹಾರ ನಡೆದಿದೆ.
ಜಿಲ್ಲಾ ಪಂಚಾಯಿತಿಯಲ್ಲಿ ಬ್ಲಾಕ್ ಸ್ಪಾಟ್ ಕಾಮಗಾರಿಯಲ್ಲಿ 70 ಲಕ್ಷ ರೂ. ದುರುಪಯೋಗವಾಗಿದ್ದು, ವಿವಿಧ ಇಲಾಖಾ ಕಚೇರಿಗಳಲ್ಲಿ ಕುರುಡು ಕಾಂಚಾಣ ಕುಣಿತೈತಿ. ಹಣ ಕೊಡದಿದ್ದರೇ ಏನೂ ಕೆಲಸಗಳು ನಡೆಯುತ್ತಿಲ್ಲ. ಸ್ಥಳೀಯ ಸಂಸ್ಥೆಗಳ ಜನಪ್ರತಿನಿ ಧಿಗಳು ಕೇಳಿದ ಮಾಹಿತಿ ಅಧಿಕಾರಿಗಳು ನೀಡುತ್ತಿಲ್ಲ. ಕ್ಷೇತ್ರದ ಶಾಸಕರು ಇವುಗಳಿಗೆ ಕಡಿವಾಣ ಹಾಕುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
1400 ಕೋಟಿ ಅನುದಾನ ತಂದಿದ್ದೇವೆ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದಾರೆ. ಆದರೆ ಅಂತಹ ಮುಖ್ಯವಾದ ಕೆಲಸಗಳೇನು ನಡೆದಿಲ್ಲ. ಹಿರೇಮಲ್ಲನಹೊಳೆ ಫವರ್ ಸ್ಟೇಷನ್, ತಾಲೂಕಿನ ರಾಜ್ಯ ಹೆದ್ದಾರಿ ಅಭಿವೃದ್ಧಿ, ಅರಸಿಕೆರೆ ಭಾಗದ 13 ಕೆರೆಗಳಿಗೆ ನೀರು ತುಂಬಿಸುವುದು ಸೇರಿದಂತೆ ಇತರೇ ನನ್ನ ಅವಧಿಯಲ್ಲಿ ಮಂಜೂರಾದ ಯೋಜನೆಗಳನ್ನು ಹಾಲಿ ಶಾಸಕರ ಅವಧಿಯಲ್ಲಿ ನಡೆದಿವೆ ಎಂಬಂತೆ ಜಾಹೀರಾತಿ ನೀಡುತ್ತಿದ್ದಾರೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಎಸ್.ಕೆ. ಮಂಜುನಾಥ್ ಮಾತನಾಡಿ, ಜಗಳೂರು ರೆಗ್ಯೂಲರ್ ರೇಂಜ್ ಫಾರೆಸ್ಟ್‌ನಲ್ಲಿ ನಡೆದಿರುವ ಅವ್ಯವಹಾರ ಮತ್ತು ಗಣಿಗಾರಿಕೆ ಬಗ್ಗೆ ದೂರು ನೀಡಿದರೆ, ದೂರು ನೀಡಿದವರ ಮೇಲೆ ವಲಯ ಅರಣ್ಯಾ ಧಿಕಾರಿ ಅಮಾಯಕ ಜನರನ್ನು ಎತ್ತಿ ಕಟ್ಟಿದ್ದಾರೆಂದು ಆರೋಪಿಸಿದರು.
ಅಧಿಕಾರಿ ವಿರುದ್ಧ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತನಿಖೆ ನಡೆಸುತ್ತಿದ್ದು, ಆದಷ್ಟು ಬೇಗನೆಸರ್ಕಾರಕ್ಕೆ ವರದಿ ಸಲ್ಲಿಸಬೇಕು. ತಾಲೂಕಿನ ಲಕ್ಕಂಪುರ ಗ್ರಾಮದಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರ ಸ್ಥಾಪಿಸಬೇಕೆಂದು ಒತ್ತಾಯಿಸಿದರು. ಜಿಪಂ ಸದಸ್ಯೆ ಶಾಂತಕುಮಾರಿ ಮಾತನಾಡಿದರು.
ಜಿಪಂ ಉಪಾಧ್ಯಕ್ಷ ಸಿದ್ದಪ್ಪ, ಸದಸ್ಯೆ ರಶ್ಮಿ ರಾಜಪ್ಪ, ಬಿಜೆಪಿ ತಾಲೂಕು ಅಧ್ಯಕ್ಷ ಡಿ.ವಿ.ನಾಗಪ್ಪ, ಅರಸಿಕೆರೆ ಬ್ಲಾಕ್ ಬಿಜೆಪಿ ಅಧ್ಯಕ್ಷ ದ್ಯಾಮನಗೌಡ, ಪ್ರಧಾನ ಕಾರ್ಯದರ್ಶಿ ಜೆ.ವಿ.ನಾಗರಾಜ್, ಎಪಿಎಂಸಿ ಸದಸ್ಯ ಶರಣಪ್ಪ, ತಾಪಂ ಸದಸ್ಯರಾದ ಶಂಕರನಾಯ್ಕ, ಟಿ.ಬಸವರಾಜ್, ಸಿದ್ದೇಶ್, ಮುಖಂಡರಾದ ಶ್ರೀನಿವಾಸ್, ಮಹ್ಮದ್ ಅನ್ವರ್, ಶಿವಕುಮಾರ್ ಸ್ವಾಮಿ, ಸಿ.ಲಕ್ಷಣ, ಹನುಮಂತಪ್ಪ, ಕೃಷ್ಣಮೂರ್ತಿ, ಗುರುಮೂರ್ತಿ ಸೇರಿದಂತೆ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.