ಜಾನುವಾರು ಅಧಿಸೂಚನೆಗೆ ಸದ್ಯವೇ ತಿದ್ದುಪಡಿ: ಸರಕಾರ
Team Udayavani, Jun 14, 2017, 2:06 PM IST
ಹೊಸದಿಲ್ಲಿ: ವಧೆಗಾಗಿ ಜಾನುವಾರುಗಳ ಮಾರಾಟ ಮತ್ತು ಖರೀದಿಗೆ ನಿರ್ಬಂಧ ಹೇರಿರುವ ಅಧಿಸೂಚನೆಯಲ್ಲಿ ಬಳಸಿರುವ ಭಾಷೆಯನ್ನು ಬದಲಿಸಲಾಗುವುದು. ಅಧಿಸೂಚನೆಗೆ ಆದಷ್ಟು ಬೇಗನೆ ತಿದ್ದುಪಡಿ ತಂದು, ಆ ಮೂಲಕ ಎಲ್ಲ ಅನುಮಾನಗಳಿಗೂ ತೆರೆ ಎಳೆಯಲಾಗುವುದು ಎಂದು ಕೇಂದ್ರ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ಅಧಿಸೂಚನೆಯು ಭಾರೀ ವಿವಾದ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಮಾತನಾಡಿದ ಸಚಿವ, “ಜನರ ಆಹಾರದ ಆಯ್ಕೆಯ ಹಕ್ಕನ್ನು ಕಿತ್ತುಕೊಳ್ಳುವುದು ಅಥವಾ ಜಾನುವಾರುಗಳ ವಧೆಯಂಥ ಉದ್ಯಮಗಳಿಗೆ ತೊಂದರೆ ಉಂಟುಮಾಡುವುದು ಕೇಂದ್ರ ಸರಕಾರದ ಉದ್ದೇಶವಲ್ಲ. ನಾವು ಸುಪ್ರೀಂ ಕೋರ್ಟ್ನ ನಿರ್ದೇಶನದ ಅನ್ವಯ ಕೆಲವು ನಿಯಮಗಳನ್ನು ತಂದಿದ್ದೇವೆ ಅಷ್ಟೆ. ಈಗ ಸಲಹೆಗಳನ್ನು ಆಧರಿಸಿ ಅದಕ್ಕೆ ಕೆಲವು ತಿದ್ದುಪಡಿಗಳನ್ನೂ ತರಲಿದ್ದೇವೆ,’ ಎಂದಿದ್ದಾರೆ. ಇದೇ ವೇಳೆ, ಈ ಕುರಿತು ಮಾತನಾಡಿರುವ ಸಿಪಿಎಂ ನಾಯಕ ಸೀತಾರಾಂ ಯೆಚೂರಿ, “ವೈವಿಧ್ಯತೆಯಿರುವ ಜನರ ಆಹಾರದ ಹಕ್ಕಿನ ಬಗ್ಗೆ ಚಿಂತೆ ಮಾಡುವ ಬದಲು ಸರಕಾರವು ಯುವಕರಿಗೆ ಉದ್ಯೋಗ ಕಲ್ಪಿಸುವ ಕೆಲಸ ಮಾಡಲಿ,’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UP bypolls; ನಿಯಮ ಉಲ್ಲಂಘನೆ: 7 ಪೊಲೀಸರನ್ನು ಅಮಾನತುಗೊಳಿಸಿದ ಚುನಾವಣ ಆಯೋಗ
Kallakurichi ಕಳ್ಳಭಟ್ಟಿ ದುರಂತ: ಪ್ರಕರಣ ಸಿಬಿಐಗೆ ನೀಡಿದ ಮದ್ರಾಸ್ ಹೈಕೋರ್ಟ್
Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.