ಕಿಲ್ಲರ್ ಕೆಎಸ್ಆರ್ ಟಿಸಿ; ಭೀಕರ ಅಪಘಾತಕ್ಕೆ ಬೈಕ್ ಸವಾರನ ಸಾವು
Team Udayavani, Jun 14, 2017, 3:24 PM IST
ಮೈಸೂರು:ಕೆಎಸ್ ಆರ್ ಟಿಸಿ ಬಸ್ ಚಾಲಕನ ಅಜಾಗರೂಕತೆಯ ಹಾಗೂ ಅತಿವೇಗದ ಚಾಲನೆಯಿಂದ ಬೈಕ್ ವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಭಯಾನಕ ಘಟನೆ ಮೈಸೂರಿನ ಹುಣಸೂರು ಪಟ್ಟಣದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಶರವೇಗದಲ್ಲಿ ಬಂದ ಕೆಎಸ್ ಆರ್ ಟಿಸಿ ಬಸ್ ಮುಂಭಾಗದಲ್ಲಿದ್ದ ಬೈಕ್ ಅನ್ನು ದಿಢೀರ್ ಎಂದು ತಪ್ಪಿಸಲು ಹೋಗಿ ಎದುರಿನಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಮಾಗಳಿ ಗ್ರಾಮದ ಮಂಜುನಾಥ್ ಹಾಗೂ ರವಿ ಕುಮಾರ್ ಅವರು ಬೈಕ್ ನಲ್ಲಿ ತೆರಳುತ್ತಿದ್ದಾಗ ಕೆಎಸ್ ಆರ್ ಟಿಸಿ ಡಿಕ್ಕಿ ಹೊಡೆದ ದೃಶ್ಯ ಭಯಾನಕವಾಗಿತ್ತು. ಮಂಜುನಾಥ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.
ರವಿಶಂಕರ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮೈಸೂರಿನ ಅರವಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ನೀಡಲು ಹಣವಿಲ್ಲದೆ ಪೋಷಕರು ಪರದಾಡುವಂತಾಗಿತ್ತು. ಏತನ್ಮಧ್ಯೆ ಅಪಘಾತದ ವಿಷಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದನ್ನು ಗಮನಿಸಿ ಎಚ್ಚೆತ್ತುಕೊಂಡ ಕೆಎಸ್ ಆರ್ ಟಿಸಿ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಧನಸಹಾಯ ನೀಡಿದ್ದರು.
ಮಂಗಳವಾರ ಮಧ್ಯಾಹ್ನ ಘಟನೆ ನಡೆದಿತ್ತು. ಹುಣಸೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.