ಬೆಂಗಳೂರು ಮಾರುಕಟ್ಟೆಗೆ ವಾಘ್ ಬಕ್ರಿ ಚಹಾ


Team Udayavani, Jun 16, 2017, 12:23 PM IST

bang-tea-vagh.jpg

ಬೆಂಗಳೂರು: ದೇಶದ ಮೂರನೇ ಅತಿ ದೊಡ್ಡ ಪ್ಯಾಕೇಜ್ಡ್ ಚಹಾ ಕಂಪನಿ “ವಾಘ್ ಬಕ್ರಿ ಟೀ ಗ್ರೂಪ್‌’ ನಗರದಲ್ಲಿ ತನ್ನ ಪ್ರೀಮಿಯಂ ಶ್ರೇಣಿಯ ಚಹಾ ಪುಡಿ ಬಿಡುಗಡೆ ಮಾಡಿದೆ. ಗುರುವಾರ ಖಾಸಗಿ ಹೋಟೆಲ್‌ ಒಂದರಲ್ಲಿ ನಡೆದ ಸಮಾರಂಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಸೇಶ್‌ ದೇಸಾಯಿ “ವಾಘ್ ಬಕ್ರಿ’ ಚಹಾವನ್ನು ಮಾರುಕಟ್ಟೆಗೆ ಪರಿಚಯಿಸಿದರು.

ನಂತರ ಮಾತನಾಡಿದ ಅವರು, “ನಾನು ಇಲ್ಲಿನ ಆರ್‌ವಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಬಿಇ ಪದವಿ ಪಡೆದಿದ್ದು, ಬೆಂಗಳೂರಿನ ವಾತಾವರಣ ಹಾಗೂ ಇಲ್ಲಿನ ಜನರ ಅಭಿರುಚಿಗಳನ್ನು ಬಲ್ಲೆ. ಚಹಾ ಬಳಕೆಯ ಪ್ರಮುಖ ಸ್ಥಳಗಳಲ್ಲಿ ಬೆಂಗಳೂರು ಕೂಡ ಒಂದು. ಈ ಹಿನ್ನೆಲೆಯಲ್ಲಿ ವಾಘ್ ಬಕ್ರಿ ಟೀಯನ್ನು ನಗರಕ್ಕೆ ಪರಿಚಯಿಸುತ್ತಿದ್ದೇನೆ,’ ಎಂದರು. 

ಫ್ಯಾಮಿಲಿ ಲೆಗೆಸ್ಸಿ ಬ್ಯುಸಿನೆಸ್‌ ಪ್ರಶಸ್ತಿ: 1892ರಲ್ಲಿ ಸ್ಥಾಪಿಸಲ್ಪಟ್ಟ ವಾಘ್ ಬಕ್ರಿ ಟೀ ಸಂಸ್ಥೆ, 120 ವರ್ಷಗಳ ಸೇವೆ ಸಲ್ಲಿಸುವ ಮೂಲಕ ಬದ್ಧತೆ ಮತ್ತು ಅನುಭವ ಹೊಂದಿದೆ. ಇದರಿಂದಾಗಿ ಇತೀ¤ಚೆಗೆ ಸಂಸ್ಥೆಗೆ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ “ಫ್ಯಾಮಿಲಿ ಲೆಗೆಸ್ಸಿ ಬ್ಯುಸಿನೆಸ್‌ ಪ್ರಶಸ್ತಿ’ ನೀಡಿದೆ ಎಂದು ದೇಸಾಯಿ ತಿಳಿಸಿದರು. 

ಸಂಸ್ಥೆಯ ಕಾರ್ಯಕಾರಿ ನಿರ್ದೇಶಕ ಪರಾಗ್‌ ದೇಸಾಯಿ, “ವಾಘ್ ಬಕ್ರಿ ಜಗತ್ತಿನಾದ್ಯಂತ ಹೊಂದಿರುವ 70 ದಶಲಕ್ಷ ಗ್ರಾಹಕರನ್ನು ಹೊಂದಿ ವಿಶ್ವಾಸಾರ್ಹತೆ ಉಳಿಸಿಕೊಂಡಿದೆ. 30ಕ್ಕೂ ಹೆಚ್ಚು ದೇಶಗಳಿಗೆ ಚಹಾ ರಫ್ತು ಮಾಡಲಾಗುತ್ತಿದೆ. 45 ದಶಲಕ್ಷ ಕೆ.ಜಿ.ಗೂ ಅಧಿಕ ಚಹಾ ಪುಡಿಯನ್ನು ಪೂರೈಕೆ ಮಾಡುತ್ತಿದ್ದೇವೆ.

ಭಾರತದಲ್ಲಿ 5 ಸ್ಟಾರ್‌ ಟೀ ಲಾಂಜ್‌ ಅನ್ನು ಪರಿಚಯಿಸಿದ್ದು ನಾವು. ಇಂದು ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಪೀಮಿಯಂ ಬ್ರಾಂಡ್‌ ಚಹಾವನ್ನು ಬಿಡುಗಡೆ ಮಾಡಿರುವುದು ಸಂತಸತಂದಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪರಿಚಯಿಸುವ ಇಚ್ಛೆಯೂ ಇದೆ. ಗುಜರಾತ್‌ನಿಂದ ಪ್ರಾರಂಭಗೊಂಡ ವಾಘ್ ಬಕ್ರಿ ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ದೆಹಲಿ, ಛತೀಸ್‌ಗಡ, ಗೋವಾ ಹಾಗೂ ಹೈದರಾಬಾದ್‌ಗೆ ವಿಸ್ತರಿಸಿದೆ.

ಇತೀಚೆಗೆ ಆಂಧ್ರಪ್ರದೇಶ ಹಾಗೂ ತೆಲಂಗಾಣದ ಇತರ ಪ್ರಾಂತ್ಯಗಳಲ್ಲಿ ಬಿಡುಗಡೆ ಕೂಡ ಮಾಡಲಾಯಿತು. ಒಟ್ಟಾರೆ, ದೇಶದ ಚಹಾ ಪುಡಿ ಮಾರುಕಟ್ಟೆಯ ಪ್ರತಿಶತ 7ರಷ್ಟು ಪಾಲು ವಾಘ್ ಬಕ್ರಿಯದಾಗಿದೆ ಎಂದು ವಿವರಿಸಿದರು. ಕಾರ್ಯಕ್ರಮದಲ್ಲಿ ಕಂಪನಿಯ ಅಧಿಕಾರಿಗಳಾದ ವಿಜಯ್‌ ಲಹೋಟಿ, ಯೋಗೇಶ್‌ ಶಿಂಧೆ ಇತರರಿದ್ದರು. 

ಟಾಪ್ ನ್ಯೂಸ್

krishna bhaire

1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್‌ ಹುಕುಂ ಚೀಟಿ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

krishna bhaire

1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್‌ ಹುಕುಂ ಚೀಟಿ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.