ಹಿರಿಯ ಪತ್ರಕರ್ತ ಎಲ್‌.ಎಸ್‌.ಶಾಸ್ತ್ರೀ ಅವರಿಗೆ ಕರ್ಕಿ ಪ್ರಶಸ್ತಿ


Team Udayavani, Jun 16, 2017, 3:43 PM IST

13-L-S-Shastri.jpg

ಮುಂಬಯಿ: ಹವ್ಯಕ ವೆಲ್ಫೇರ್‌ ಅಸೋಸಿಯೇಶನ್‌ ಟ್ರಸ್ಟ್‌ ಮುಂಬಯಿ ಇದರ 2017ನೇ ಸಾಲಿನ ಪ್ರತಿಷ್ಠಿತ ಕರ್ಕಿ ವೆಂಕಟರಮಣ ಶಾಸ್ತ್ರೀ ಸೂರಿ ಪ್ರಶಸ್ತಿಗೆ ಎಲ್‌. ಎಸ್‌. ಶಾಸ್ತ್ರೀ ಅವರು ಆಯ್ಕೆಯಾಗಿದ್ದಾರೆ.

ಕಳೆದ ಐದು ದಶಕಗಳಿಂದ ಪತ್ರಿಕೋದ್ಯಮ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಾ ಬಂದಿರುವ ಶ್ರೀ ಲಕ್ಷ್ಮೀ ನಾರಾಯಣ ಶಂಭು ಶಾಸ್ತ್ರೀ ಅವರು ಬಹುಮುಖ ಪ್ರತಿಭೆ. ಹಿಂದೂಸ್ತಾನಿ ಸಂಗೀತವನ್ನು ಅಭ್ಯಸಿಸಿ, ಗಾಯಕರಾಗಿ ಜನಮನಸೂರೆಗೊಂಡಿದ್ದಾರೆ. ಅನೇಕ ಸಂಘಟನೆಗಳನ್ನು ಕಟ್ಟುವ ಮೂಲಕ ಸಭೆ, ಸಮಾರಂಭ‌ಗಳನ್ನು ಆಯೋಜಿಸಿದ ಚತುರ ಸಂಘಟನಕಾರರು. ಗಮಕವಾಚನ, ಆಕಾಶವಾಣಿ ಕಾರ್ಯಕ್ರಮ, ಯಕ್ಷಗಾನ ಪ್ರದರ್ಶನ, ನಾಟಕಗಳಲ್ಲಿ ಅಭಿನಯ, ಸಂಗೀತ ನೃತ್ಯ ತರಬೇತಿ ಶಾಲೆ ಸ್ಥಾಪನೆ ಇತ್ಯಾದಿ ಹಲವಾರು ಕ್ಷೇತ್ರಗಳಲ್ಲಿ ಹೆಸರಾದ ಶಾಸ್ತ್ರೀ ಅವರು ಸದಾ ಚಟುವಟಿಕೆಯಲ್ಲಿದ್ದಾರೆ.

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಶ್ರೀ ಶಾಸ್ತ್ರೀಯವರು ಹುಟ್ಟಿದ ಊರಿನಲ್ಲಿ ತಮ್ಮ ವಿದ್ಯಾಭ್ಯಾಸವನ್ನು ಪೂರೈಸಿ, 1962ರಲ್ಲಿ ಜ. 26 ರಂದು ಪತ್ರಿಕಾರಂಗಕ್ಕೆ ಪಾದಾರ್ಪಣೆಗೈದರು. ಇವರ ಕಲಾ ಸಾಹಿತ್ಯಕ ಪತ್ರಿಕೆಯಾದ ಶೃಂಗಾರ ಸಾಹಿತಿ ಡಾ|. ದ. ರಾ. ಬೇಂದ್ರೆ ಅವರಿಂದ ಬಿಡುಗಡೆಯಾಗಿದೆ. ಶಾಸ್ತಿÅà ಅವರು ಕನ್ನಡ ಪ್ರಭಾ ಪತ್ರಿಕೆಯಲ್ಲಿ ಹಿರಿಯ ಉಪಸಂಪಾದಕರಾಗಿ, ಸಂಯುಕ್ತ ಕರ್ನಾಟಕನ ವರದಿಗಾರರಾಗಿ, ಜನತಾ ವಾರಪತ್ರಿಕೆ, ನಾಡೋಜ ದಿನಪತ್ರಿಕೆಗಳಲ್ಲಿ ಸಂಪಾದಕರಾಗಿ, ವಿಶ್ವವಾಣಿ, ಪ್ರಪಂಚದಲ್ಲಿ ಉಪ ಸಂಪಾದಕರಾಗಿ ಸಕ್ರಿಯವಾಗಿ ಕೆಲಸ ಮಾಡಿದ್ದಲ್ಲದೆ, ಇನ್ನೂ ಹಲವಾರು ಮಾಸಿಕ, ದೈನಿಕಗಳಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಕನ್ನಡ, ಹಿಂದಿ, ಮರಾಠಿ, ಸಂಸ್ಕೃತ, ಇಂಗ್ಲಿಷ್‌ ಮತ್ತು ಕೊಂಕಣಿ ಭಾಷೆಗಳನ್ನು ಬಲ್ಲ ಅವರಿಗೆ ಎಲ್ಲಾ ಮೂಲಗಳಿಂದ ಮಾಹಿತಿಗಳನ್ನು ಸಂಗ್ರಹಿಸಿ ವರದಿ ಮಾಡಲು ಇವರ ಭಾಷಾ ಜ್ಞಾನವೂ ನೆರವಾಯಿತು.

ರಾಜ್ಯ ಪತ್ರಕರ್ತರ   22 ನೇ ಸಾಹಿತ್ಯ ಸಮ್ಮೇಳನವನ್ನು ಬೆಳಗಾವಿಯಲ್ಲಿ ಸಂಘಟಿಸಿದ ಇವರು ಪತ್ರಿಕಾ ತರಬೇತಿ ಶಿಬಿರಗಳನ್ನು ಕೂಡ ಆಯೋಜಿಸಿದ್ದಾರೆ. ಹಲವು ಯುವ ಉದಯೋನ್ಮುಖ ಪತ್ರಕರ್ತರಾಗಿ ಸಲಹೆ, ಮಾರ್ಗದರ್ಶನಗಳನ್ನು ಪ್ರೋತ್ಸಾಹಿಸಿದ್ದಾರೆ. ಜಿಲ್ಲಾ ಸಣ್ಣ ಪತ್ರಿಕೆಗಳ ಸಂಘ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕಗಳನ್ನು ಸ್ಥಾಪಿಸಿ ನೂರಾರು ಕಾರ್ಯಕ್ರಮಗಳನ್ನು ಸಂಘಟಿಸಿ ಗ್ರಾಮೀಣ ಪತ್ರಕರ್ತರಿಗೆ ಪ್ರೋತ್ಸಾಹಿಸುತ್ತಿದ್ದಾರೆ. ಬೆಂಗಳೂರು, ಮೌಂಟ್‌ ಅಬು, ಬೆಳಗಾವಿ, ಧಾರವಾಡ, ಹುಬ್ಬಳ್ಳಿ ಹೀಗೆ ಹಲವೆಡೆ ಮಾಧ್ಯಮಗೋಷ್ಠಿಗಳಲ್ಲಿ ಉಪನ್ಯಾಸ, ಪ್ರಬಂಧಗಳನ್ನು ಮಂಡಿಸಿದ್ದಾರೆ.

ವೃತ್ತಿಯಲ್ಲಿ ಪತ್ರಿಕೋದ್ಯಮಿಯಾದ ಇವರು ಸಾಹಿತ್ಯ, ಸಂಗೀತ, ಗಮಕ, ನಾಟಕ, ಯಕ್ಷಗಾನವನ್ನು ತಮ್ಮ ಪ್ರವೃತ್ತಿಯನ್ನಾಗಿಸಿಕೊಂಡವರು. ಸೃಜನಶೀಲ ಲೇಖಕರಾದ ಇವರ ಕತೆ, ಕವನ, ಹರಟೆ, ಲಲಿತ ಪ್ರಬಂಧ, ಚುಟುಕು, ಜೀವನ ಚರಿತ್ರೆ, ಯಕ್ಷಗಾನ, ಇತಿಹಾಸ, ವೈದ್ಯಕೀಯ, ಮಕ್ಕಳ ಸಾಹಿತ್ಯ, ಶರಣರ ಸಾಹಿತ್ಯ ಹೀಗೆ ವೈವಿಧ್ಯಮಯ ವಿಷಯಗಳಲ್ಲಿ 42ಕ್ಕೂ ಹೆಚ್ಚು ಕೃತಿಗಳು ಬೆಳಕು ಕಂಡಿವೆ. 150ಕ್ಕೂ ಅಧಿಕ ಸಂಪಾದಿತ ಸ್ಮರಣ ಸಂಚಿಕೆಗಳು, ಅಭಿನಂದನ ಗ್ರಂಥಗಳು, ವಿಶೇಷಾಂಕಗಳು ಪ್ರಕಟವಾಗಿದೆ.

15ಕ್ಕೂ ಹೆಚ್ಚು ಸಾಹಿತ್ಯಕ ಸಂಘ-ಸಂಸ್ಥೆಗಳನ್ನು ಸ್ಥಾಪಿಸಿದಲ್ಲದೆ ಇಲ್ಲಿಯವರೆಗೆ ಐದು ಸಾವಿರಕ್ಕೂ ಹೆಚ್ಚು ಸಾಹಿತ್ಯಕ ಕಾರ್ಯಕ್ರಮಗಳನ್ನು ಸಂಘಟಿಸಿ ತಮ್ಮ ಸಂಘಟನ ಚಾತುರ್ಯದಿಂದ ಅಸಾಧ್ಯವೆನಿಸುವ ಕೆಲಸಗಳನ್ನು ಮಾಡಿ ತೋರಿಸಿದ್ದಾರೆ. ಯಕ್ಷಗಾನ ಕಲಾವಿದರ ಕುರಿತು ಐದು ಕೃತಿಗಳನ್ನು, 50ಕ್ಕೂ ಅಧಿಕ ಲೇಖನಗಳನ್ನು ರಚಿಸಿದ್ದಾರೆ. ರಾಜ್ಯ ಹಾಗೂ ವಿಭಾಗೀಯ ಮಟ್ಟದ ನಾಟಕ ಸ್ಪರ್ಧೆಗಲ್ಲಿ ಭಾಗವಹಿಸಿ ಮೂರು ಬಾರಿ ಪ್ರಥಮ ಬಹುಮಾನ ಗಳಿಸಿದ್ದಾರೆ. 50ಕ್ಕೂ ಹೆಚ್ಚು ವೃತ್ತಿ ನಾಟಕ ಕಂಪೆನಿಗಳ ಕಲಾವಿದರ ಸಂದರ್ಶನ, ಪರಿಚಯ ಲೇಖನಗಳನ್ನು ರಚಿಸಿದ್ದಾರೆ.

ಸುಮಾರು 200ಕ್ಕೂ ಅಧಿಕ ಸುಗಮ ಸಂಗೀತ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದ ಹೆಗ್ಗಳಿಕೆ ಅವರಿಗಿದೆ. ಗೀತ ಗೋವಿಂದ, ಗೀತ ರಾಮಾಯಣ ಮೊದಲಾದವುಗಳಿಗೆ ರಾಗ ಸಂಯೋಜಿಸಿರುವುದಲ್ಲದೆ, ನಾಡಿನ ವಿವಿಧೆಡೆಗಳಲ್ಲಿ 80ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನೀಡಿ ಜನಪ್ರಿಯರಾಗಿದ್ದಾರೆ. ಸಂಗೀತ ಜ್ಞಾನವನ್ನು ಹೊಂದಿರುವ ಅವರು 100ಕ್ಕೂ ಅಧಿಕ ಕಾರ್ಯಕ್ರಮಗಳಲ್ಲಿ ಗಮಕ ವಾಚಿಸಿದ್ದಲ್ಲದೆ, ಗಮಕ ಕಲಾ ಸಮ್ಮೇಳನವನ್ನು ಸಂಯೋಜಿಸಿದ್ದಾರೆ. ಕರ್ನಾಟಕ ಗಮಕ ಕಲಾ ಪರಿಷತ್ತಿನ ಬೆಳಗಾವಿ ಜಿಲ್ಲಾ ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.  ಹೀಗೆ ಪತ್ರಿಕೋದ್ಯಮ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಮ್ಮನ್ನು ಸದಾ ತೊಡಗಿಸಿಕೊಂಡ ಶಾಸ್ತ್ರೀ ಅವರನ್ನು ಅರಸಿಕೊಂಡು ಬಂದ ಪ್ರಶಸ್ತಿಗಳು ಹಲವಾರು. ಕರ್ನಾಟಕ ಪತ್ರಿಕಾ ಅಕಾಡೆಮಿ ಪ್ರಶಸ್ತಿ, ಜಿ. ಆರ್‌. ಪಾಂಡೇಶ್ವರ ಪತ್ರಿಕಾ ಪ್ರಶಸ್ತಿ, ಕುಮಾರವ್ಯಾಸ ಪ್ರಶಸ್ತಿ, ದಿನಕರ ದೇಸಾಯಿ ಚುಟುಕು ಕಾವ್ಯ ಪ್ರಶಸ್ತಿ, ಸೇವಾರತ್ನ ಪ್ರಶಸ್ತಿ ನಾಗನೂರು ಮಠ, ಸಿರಿಗನ್ನಡ ಪ್ರಶಸ್ತಿ, ಕನ್ನಡ ಜ್ಯೋತಿ ಪ್ರಶಸ್ತಿಗಳು ಅವುಗಳಲ್ಲಿ ಮುಖ್ಯವಾಗಿವೆ. ಶಾಸ್ತ್ರೀ ಅವರದ್ದು ಶಿಸ್ತಿನ ನಡೆ, ಶ್ರಮಪೂರ್ಣ ದುಡಿಮೆ, ಜೀವನ ಶೋಧಕ್ಕೆ ಹೊರಟಂತಹ ಮನೋಭಾವ. ನಾಡು-ನುಡಿಗಳ ಅಭಿವೃದ್ಧಿಗೆ ಶ್ರಮಿಸಿದ ಹಿರಿಯ ಧೀಮಂತ ಪತ್ರಿಕೋದ್ಯಮಿಯಾದ  ಲಕ್ಷ್ಮೀನಾರಾಯಣ ಶಾಸ್ತ್ರೀ ಅವರು ಈ ವರ್ಷದ ಕರ್ಕಿವೆಂಕಟರಮಣ ಶಾಸ್ತ್ರೀ ಸೂರಿ ಪ್ರಶಸ್ತಿಗೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.

ಟಾಪ್ ನ್ಯೂಸ್

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ

ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.