ಮಾರುಕಟ್ಟೆ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹಿಸಿ ಪ್ರತಿಭಟನೆ
Team Udayavani, Jun 17, 2017, 3:02 PM IST
ಧಾರವಾಡ: ಇಲ್ಲಿಯ ಸೂಪರ್ ಮಾರುಕಟ್ಟೆಯಲ್ಲಿನ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಕಿರಾಣಿ, ಕಾಳುಕಡಿ ಕಾಯಿಪಲ್ಲೆ ವರ್ತಕರ ಸಂಘದ ವತಿಯಿಂದ ಇಲ್ಲಿನ ವಲಯ ಕಚೇರಿ-2ರ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಸೂಪರ್ ಮಾರುಕಟ್ಟೆಯಲ್ಲಿನ ಕುಡಿಯುವ ನೀರು, ಶೌಚಗೃಹ, ಸರಿಯಾದ ಕಸ ವಿಲೇವಾರಿ ಮಾಡುವಂತೆ ಪಾಲಿಕೆ ಆಯುಕ್ತರು ಹಾಗೂ ಮೇಯರ್ ಅವರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಕೂಡಲೇ ಎಲ್ಲ ಸೌಕರ್ಯಗಳನ್ನು ನೀಡುವ ಮೂಲಕ ಮಾರುಕಟ್ಟೆಯನ್ನು ಅಭಿವೃದ್ಧಿಗೊಳಿಸಬೇಕು ಎಂದು ಆಗ್ರಹಿಸಿದರು.
ಮಾರುಕಟ್ಟೆಯಲ್ಲಿ ಜನಸಂಪರ್ಕ ಸಭೆ, ಬೀದಿ ಬದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ಚಾಲ್ತಿ ಮಾಡುವುದು, ಹೈಮಾಸ್ಟ್ ದೀಪದ ವ್ಯವಸ್ಥೆ, ಚೀಟಿ ಹರಿಯುವವರ ದಬ್ಟಾಳಿಕೆ ತಡೆಯುವುದು, ಸಮರ್ಪಕ ರಸ್ತೆ ನಿರ್ಮಾಣ, ಸಂಬಂಧಪಟ್ಟ ಅಧಿಕಾರಿಗಳಿಂದ ನಿತ್ಯ ಮಾರುಕಟ್ಟೆ ಪರಿಶೀಲನೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.
ಕೆಲ ದಿನಗಳ ಹಿಂದೆ ಸಹ ಮೇಯರ್ ಭೇಟಿ ನೀಡಿದ ಸಂದರ್ಭದಲ್ಲಿ ಈ ಕುರಿತು ಮನವಿ ಸಲ್ಲಿಸಲಾಗಿದೆ. ಹೀಗಾಗಿ ನಮ್ಮ ಎಲ್ಲ ಸಮಸ್ಯೆಗಳಿಗೆ ಶೀಘ್ರ ಪರಿಹಾರ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಲಾಯಿತು. ಈ ಕುರಿತಂತೆ ವಲಯ ಕಚೇರಿ ಆಯುಕ್ತರ ಮೂಲಕ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.