ಭಾರತ ವಿಶ್ವಕ್ಕೆ ಗುರುವಾಗುವ ದಿನ ದೂರವಿಲ್ಲ
Team Udayavani, Jun 18, 2017, 2:41 PM IST
ಹುಬ್ಬಳ್ಳಿ: ಯುವ ಜನಾಂಗದ ಜ್ಞಾನದಿಂದಲೇ ದೇಶ ಅಭಿವೃದ್ಧಿಯತ್ತ ಸಾಗುತ್ತಿದೆ. ಅವರ ಜ್ಞಾನದಿಂದಾಗಿಯೇ ವಿಶ್ವದಲ್ಲಿಯೇ ಬೆಂಗಳೂರು ಸಿಲಿಕಾನ್ ಸಿಟಿಯಾಗಿ ಬೆಳೆದಿದೆ. ಯುವಕರು ತಮ್ಮ ಜ್ಞಾನ ವೃದ್ಧಿಸಿಕೊಳ್ಳಬೇಕು, ಕೌಶಲವಂತರಾಗಬೇಕೆಂದು ಕೇಂದ್ರದ ಪೆಟ್ರೋಲಿಯಂ ಖಾತೆ ಸಹಾಯಕ ಸಚಿವ ಧರ್ಮೇಂದ್ರ ಪ್ರಧಾನ್ ಕರೆ ನೀಡಿದರು.
ಇಲ್ಲಿನ ವಿದ್ಯಾನಗರದ ಬಿವಿಬಿ ಇಂಜನಿಯರಿಂಗ್ ಕಾಲೇಜ್‌ನ ಬಯೋಟೆಕ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ “ಏಕ್ ಭಾರತ ಶ್ರೇಷ್ಠ ಭಾರತ’ ಕುರಿತ ಯುವ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯೂರೋಪ್ ಖಂಡ ಆರ್ಥಿಕ ದುರ್ಬಲತೆಯಿಂದ ನರಳಾಡುತ್ತಿದೆ. 20ನೇ ಶತಮಾನದಲ್ಲಿ ಬಲಾಡ್ಯತೆ ಮೆರೆದು ದೊಡ್ಡಣ್ಣನಾಗಿರುವ ಅಮೆರಿಕ ಚಿಕ್ಕಣ್ಣನಾಗುತ್ತಿದ್ದಾನೆ.
ಚೀನಾ ಸಹ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಸದ್ಯ ಅಮೆರಿಕ ಮತ್ತು ಚೀನಾ ಹೊರತುಪಡಿಸಿದರೆ ಅತಿ ಹೆಚ್ಚು ಇಂಧನ ಬಳಕೆ ಮಾಡುತ್ತಿರುವ ದೇಶ ಭಾರತವಾಗಿದೆ. ಆದ್ದರಿಂದ 21ನೇ ಶತಮಾನವು ಭಾರತದ್ದಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಭಾರತ ನಿರ್ಮಿಸಲು ಮುಂದಾಗಿದ್ದಾರೆ ಎಂದರು.
ಹುಬ್ಬಳ್ಳಿ ನೆನಪಿಸಿಕೊಂಡ ಸಚಿವರು: 14 ವರ್ಷದ ಹಿಂದೆ ನಾನು ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ್ದ ನೆನಪು ಈಗಲೂ ಇದೆ. ಅಂದು ಈದ್ಗಾ ಮೈದಾನದಲ್ಲಿ ತಿರಂಗಾ ಧ್ವಜ ಹಾರಿಸುವ ವಿಷಯವಾಗಿ ಸಚಿವೆ ಉಮಾ ಭಾರತಿ ಅವರನ್ನು ಬಂಧಿಸಲಾಗಿತ್ತು ಎಂದು ನೆನಪಿಸಿಕೊಂಡರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸದ ಪ್ರಲ್ಹಾದ ಜೋಶಿ, ವಿಶ್ವದ ಯಾವುದೇ ದೇಶದಲ್ಲಿ ಭಯೋತ್ಪಾದಕರನ್ನು ಹತ್ಯೆಗೈದರೆ ಮಾನವ ಹಕ್ಕುಗಳು ಅನ್ವಯಿಸಲ್ಲ. ಆದರೆ ಭಾರತ ಭೌಗೋಳಿಕವಾಗಿ ಒಂದಾಗಿದ್ದರು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಇನ್ನಿತರೆಡೆ ಮಾನವ ಹಕ್ಕು ಅನ್ವಯವಾಗುತ್ತದೆ.
ಇದು ದೇಶದ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ದೇಶದಲ್ಲಿ ಸೇನೆಯ ಮೇಲೆ ಕಲ್ಲು ಎಸೆಯುವವರು ಇದ್ದಾರೆ. ಇಂತಹ ಮನಸ್ಥಿತಿ ಬದಲಾಯಿಸಿ ಎಲ್ಲರನ್ನೂ ಒಂದುಗೂಡಬೇಕಿದೆ ಎಂದರು. ವಿಧಾನ ಸಭೆ ವಿಪಕ್ಷ ನಾಯಕ ಜಗದೀಶ ಶೆಟ್ಟರ್, ಸಂಸದ ಸುರೇಶ ಅಂಗಡಿ, ವಿಧಾನ ಪರಿಷತ್ ಸದಸ್ಯರಾದ ಪ್ರಭಾಕರ ಕೋರೆ, ಪ್ರದೀಪ ಶೆಟ್ಟರ, ಮಹಾಂತೇಶ ಕವಟಗಿಮಠ, ಶಾಸಕ ಬಸವರಾಜ ಬೊಮ್ಮಾಯಿ, ಮಹಾಪೌರ ಡಿ.ಕೆ. ಚವ್ಹಾಣ,
-ಉಪ ಮಹಾಪೌರ ಲಕ್ಷೀಬಾಯಿ ಬಿಜವಾಡ, ಮಾಜಿ ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ವೀರಭದ್ರಪ್ಪ ಹಾಲಹರವಿ, ಸಂಜಯ ಪಾಟೀಲ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾ. ನಾಗರಾಜ, ಶಂಕರಣ್ಣ ಮುನವಳ್ಳಿ, ಡಾ| ಅಶೋಕ ಶೆಟ್ಟರ, ರಘು ಅಕ್ಮಂಚಿ ಮೊದಲಾದವರಿದ್ದರು. ರಾಜು ಜರತಾರಘರ ಸ್ವಾಗತಿಸಿದರು. ಮಹೇಂದ್ರ ಕೌತಾಳ ನಿರೂಪಿಸಿದರು. ಜಗದೀಶ ಬುಳ್ಳಣ್ಣವರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.