3 ವರ್ಷದಲ್ಲಿ 34 ಲಕ್ಷ ಸಂಪರ್ಕ: ಧರ್ಮೇಂದ್ರ
Team Udayavani, Jun 18, 2017, 2:41 PM IST
ಹುಬ್ಬಳ್ಳಿ: ಕರ್ನಾಟಕದಲ್ಲಿ 1955ರಿಂದ 2014ರವರೆಗೆ ಸುಮಾರು 84ಲಕ್ಷ ಅಡುಗೆ ಅನಿಲ ಸಂಪರ್ಕ ಇದ್ದವು. ಇದೀಗ ಅದು 1.10ಕೋಟಿ ಆಗಿದೆ. ಕಳೆದ ಮೂರು ವರ್ಷಗಳಲ್ಲಿ ಸುಮಾರು 34ಲಕ್ಷ ಅಡುಗೆ ಅನಿಲ ಸಂಪರ್ಕ ಕಲ್ಪಿಸಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಖಾತೆ ಸಹಾಯಕ ಸಚಿವ ಧಮೇಂದ್ರ ಪ್ರಧಾನ್ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಉಜ್ವಲ ಯೋಜನೆ ರಾಜ್ಯದಲ್ಲಿ ಅನುಷ್ಠಾನಕ್ಕೆ ಇಲ್ಲಿನ ನೆಹರು ಮೈದಾನದಲ್ಲಿ ಶನಿವಾರ ನಡೆದ ಬೃಹತ್ ಸಮಾವೇಶದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.
ಉಜ್ವಲ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಧಮೇಂದ್ರ ಪ್ರಧಾನ್, ದೇಶದಲ್ಲಿ ಕಳೆದ 70 ವರ್ಷಗಳಲ್ಲಿ ಸುಮಾರು 14 ಕೋಟಿ ಅಡುಗೆ ಅನಿಲ ಸಂಪರ್ಕ ಕಲ್ಪಿಸಿದ್ದರೆ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರಕಾರ ಕೇವಲ ಮೂರೇ ವರ್ಷಗಳಲ್ಲಿ ಸುಮಾರು 6.90ಕೋಟಿ ಅಡುಗೆ ಅನಿಲ ಸಂಪರ್ಕ ಕಲ್ಪಿಸುವ ಸಾಧನೆ ತೋರಿದೆ ಎಂದರು.
ಕಳೆದೊಂದು ವರ್ಷದಲ್ಲಿ ದೇಶದಲ್ಲಿ ಸುಮಾರು 1.50 ಕೋಟಿ ಅಡುಗೆ ಅನಿಲ ಸಂಪರ್ಕ ಗುರಿ ಹೊಂದಲಾಗಿತ್ತು. ಒಂದು ವರ್ಷ ಒಂದು ತಿಂಗಳಲ್ಲಿ ಸುಮಾರು 2.25 ಕೋಟಿ ಅಡುಗೆ ಅನಿಲ ಸಂಪರ್ಕ ಕಲ್ಪಿಸುವ ಮೂಲಕ ಗುರಿ ಮೀರಿದ ಸಾಧನೆ ತೋರಲಾಗಿದೆ ಎಂದರು.
ಕರ್ನಾಟಕದಲ್ಲಿ 2011ರ ಸಾಮಾಜಿಕ ಆರ್ಥಿಕ ಜಾತಿ ಗಣತಿಯಲ್ಲಿ ಸುಮಾರು 36ಲಕ್ಷ ಬಡ ಕುಟುಂಬಗಳನ್ನು ಗುರುತಿಸಲಾಗಿದ್ದು, ಇದರಲ್ಲಿ ಸುಮಾರು 5-6ಲಕ್ಷ ಕುಟುಂಬಗಳು ಅಡುಗೆ ಅನಿಲ ಸಂಪರ್ಕ ಹೊಂದಿವೆ. ಉಳಿದ ಅಂದಾಜು 30 ಲಕ್ಷ ಕುಟುಂಬಗಳಿಗೆ ಉಜ್ವಲ ಯೋಜನೆಯಡಿ ಸಂಪರ್ಕ ಕಲ್ಪಿಸಲಾಗುವುದು ಎಂದರು.
ಭಾರತೀಯ ತೈಲ ನಿಗಮದ ಕಾರ್ಯ ನಿರ್ವಾಹಕ ನಿರ್ದೇಶಕ ವೈ.ಕೆ.ಗುಪ್ತಾ ಪ್ರಾಸ್ತಾವಿಕ ಮಾತನಾಡಿ, ಇನ್ನು 2-3 ವರ್ಷಗಳಲ್ಲಿ ಕರ್ನಾಟಕದ ಎಲ್ಲ ಮನೆಗಳಿಗೆ ಅಡುಗೆ ಅನಿಲ ಸಂಪರ್ಕ ಕಲ್ಪಿಸಲಾಗುತ್ತದೆ ಎಂದರು. ಇದೇ ಸಂದರ್ಭದಲ್ಲಿ 30ಕ್ಕೂ ಅಧಿಕ ಫಲಾನುಭವಿಗಳಿಗೆ ಸಾಂಕೇತಿಕ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಿತರಿಸಲಾಯಿತು.
ಕೇಂದ್ರ ಸಚಿವರಾದ ಅನಂತಕುಮಾರ, ರಮೇಶ ಜಿಗಜಿಣಗಿ, ರಾಜ್ಯದ ಸಚಿವರಾದ ಯು.ಟಿ.ಖಾದರ್, ವಿನಯ ಕುಲಕರ್ಣಿ, ಲೋಕಸಭಾ ಸದಸ್ಯರಾದ ಬಿ.ಎಸ್. ಯಡಿಯೂರಪ್ಪ, ಪ್ರಹ್ಲಾದ ಜೋಶಿ, ಸುರೇಶ ಅಂಗಡಿ, ಪಿ.ಸಿ. ಗದ್ದಿಗೌಡರ, ಶಿವಕುಮಾರ ಉದಾಸಿ, ಸಂಗಣ್ಣ ಕರಡಿ,
-ರಾಜ್ಯಸಭಾ ಸದಸ್ಯ ಡಾ| ಪ್ರಭಾಕರ ಕೋರೆ, ವಿವಿಧ ಜಿಲ್ಲೆಗಳ ವಿಧಾನಸಭೆ ಹಾಗೂ ವಿಧಾನ ಪರಿಷತ್ ಹಾಲಿ-ಮಾಜಿ ಸದಸ್ಯರು, ತೈಲ ಕಂಪೆನಿಗಳು ಹಿರಿಯ ಅಧಿಕಾರಿಗಳು ಹಾಜರಿದ್ದರು. ವಿವಿಧ ಜಿಲ್ಲೆಗಳ ಸಾವಿರಾರು ಜನರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.