“ಭೂಮಿ ಕೊಡಿ, ಇಲ್ಲ ಜೈಲಿಗೆ ಕಳಿಸಿ’ ಸತ್ಯಾಗ್ರಹ

Team Udayavani, Jun 19, 2017, 12:32 PM IST

doreswamy.jpg

ಬೆಂಗಳೂರು: ಬಡವರಿಗೆ ಬೇಸಾಯಕ್ಕೆ ಭೂಮಿ ಹಾಗೂ ವಾಸಕ್ಕೆ ಮನೆ ನೀಡುವುದು ಸರ್ಕಾರದ ಆದ್ಯತೆ ಎಂದು ಘೋಷಣೆ ಮಾಡಿದ್ದ ಮುಖ್ಯಮಂತ್ರಿಯವರು, ಈಗ ಮಾತು ತಪ್ಪಿದ್ದಾರೆ. ಆದ್ದರಿಂದ ಭೂಮಿ ಮತ್ತು ವಸತಿ ಹಕ್ಕು ವಂಚಿತ ರಾಜ್ಯದ ಎಲ್ಲ ಬಡವರು, ರೈತರ ಪರವಾಗಿ “ಭೂಮಿ ಕೊಡಿ, ಇಲ್ಲ ಜೈಲಿಗೆ ಕಳಿಸಿ’ ಎಂದು ಆಗ್ರಹಿಸಿ ಸೋಮವಾರದಿಂದ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌. ದೊರೆಸ್ವಾಮಿ ಹೇಳಿದ್ದಾರೆ.

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಹೋರಾಟದ ಸ್ಥಳದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿದ ಅವರು, “ಭೂಮಿ ಹಾಗೂ ವಸತಿ ವಂಚಿತ ರಾಜ್ಯದ ಎಲ್ಲ ಬಡವರು, ರೈತರು ಈ ಭೂಸತ್ಯಾಗ್ರಹದಲ್ಲಿ ಭಾಗವಹಿಸುವಂತೆ ಕರೆ ನೀಡಿದರು. ಅಷ್ಟೇ ಅಲ್ಲ ಹೋರಾಟಕ್ಕೆ ಬರುವವರು ಜೈಲಿಗೆ ಹೋಗಲು ಸಿದ್ಧರಾಗಿರಬೇಕು,’ ಎಂದು ಹೇಳಿದರು. 

“ಉಳುಮೆ ಮಾಡಿ ಬದುಕು ಕಟ್ಟಿಕೊಳ್ಳಲು ಒಂದಿಷ್ಟು ಜಮೀನು ಕೊಡಿ ಎಂದು ಈ ರಾಜ್ಯದ ರೈತ ಕೇಳುತ್ತಿದ್ದಾನೆ. ಸ್ವಾಭಿಮಾನದ ಜೀವನ ನಡೆಸಲು ವಾಸಕ್ಕೆ ಒಂದು ಮನೆ ಕೊಡಿ ಎಂದು ಈ ನಾಡಿನ ಬಡವ ಮನವಿ ಮಾಡುತ್ತಿದ್ದಾನೆ. ಭೂಮಿ ಕೊಡಿ ಮನೆ ಕೊಡಿ ಎಂದು ಅನೇಕ ವರ್ಷಗಳಿಂದ ಲಕ್ಷಾಂತರ ಜನ ಅರ್ಜಿ ಸಲ್ಲಿಸಿದ್ದಾರೆ. ಸರ್ಕಾರದ ಬಳಿ ಜಮೀನು ಇದೆ. ಆದರೆ, ಕೊಡಲು ಮನಸ್ಸು ಮಾಡುತ್ತಿಲ್ಲ. ಆದ್ದರಿಂದ ಸರ್ಕಾರವನ್ನು ಎಚ್ಚರಿಸುವ ನಿರ್ಣಾಯಕ ಹೋರಾಟ ಮಾಡಬೇಕಾಗಿದೆ,’ ಎಂದು ದೊರೆಸ್ವಾಮಿ ಹೇಳಿದರು.

ಇದೇ ವೇಳೆ ಮಾತನಾಡಿದ ಸಮಿತಿಯ ಸಂಚಾಲಕ ಕುಮಾರ ಸಮತಳ, “ರಾಜ್ಯದಲ್ಲಿನ ಬಡವರ ಭೂಮಿ-ವಸತಿ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಲು ಸರ್ಕಾರ ಉನ್ನತಾಧಿಕಾರ ಸಮಿತಿ ರಚಿಸಬೇಕು. ಅನೇಕ ವರ್ಷಗಳಿಂದ ಭೂಮಿ ಅಥವಾ ಮನೆಗಾಗಿ ಲಕ್ಷಾಂತರ ಜನ ಅರ್ಜಿಗಳನ್ನು ಸಲ್ಲಿಸಿದ್ದು, ಈ ಅರ್ಜಿಗಳನ್ನು ಒಂದು ತಿಂಗಳಲ್ಲಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಬೇಕು.

ಭೂಮಿ ಮತ್ತು ವಸತಿ ಹಕ್ಕಿಗೆ ನಡೆದ ಹೋರಾಟಗಳಲ್ಲಿ ರೈತರು, ಬಡವರು, ಸಂಘ-ಸಂಸ್ಥೆಗಳ ಕಾರ್ಯಕರ್ತರ ಮೇಲೆ ದಾಖಲಿಸಲಾಗಿರುವ ಪ್ರಕರಣಗಳನ್ನು ತಕ್ಷಣ ವಾಪಸ್‌ ಪಡೆಯಬೇಕು ಎಂಬ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಹೋರಾಟ ನಡೆಸಲಾಗುತ್ತಿದೆ,’ ಎಂದರು. 

ಟಾಪ್ ನ್ಯೂಸ್

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.