ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

Team Udayavani, Jun 19, 2017, 1:05 PM IST

mys3.jpg

ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ರೈತ ಕಾಂಗ್ರೆಸ್‌ ಸಮಿತಿ ಹಾಗೂ ನಾಯಕರ ಹಿತರಕ್ಷಣಾ ವೇದಿಕೆ ಸದಸ್ಯರು ನಗರದ ಪ್ರತ್ಯೇಕ ಕಡೆಗಳಲ್ಲಿ ಪ್ರತಿಭಟನೆ ನಡೆಸಿದರು. 

ಗೋಲಿಬಾರ್‌ಗೆ ಖಂಡನೆ: ನಗರದ ಗಾಂಧಿಚೌಕದಲ್ಲಿ ಪ್ರತಿಭಟನೆ ನಡೆಸಿದ ಮೈಸೂರು ಜಿಲ್ಲಾ ರೈತ ಕಾಂಗ್ರೆಸ್‌ ಸಮಿತಿ ಸದಸ್ಯರು, ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಹಾಗೂ ಮಧ್ಯ ಪ್ರದೇಶದಲ್ಲಿ ರೈತರ ಮೇಲೆ ನಡೆದ ಗೋಲಿಬಾರ್‌ ಪ್ರಕರಣ ಖಂಡಿಸಿದರು.

ರಾಜ್ಯದ ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದು, ಹೀಗಾಗಿ ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕುಗಳ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿದರು. ಇನ್ನೂ ಮಧ್ಯಪ್ರದೇಶದಲ್ಲಿ ರೈತರ ಮೇಲೆ ನಡೆದ ಗೋಲಿಬಾರ್‌ ಖಂಡನೀಯವಾಗಿದ್ದು, ಬೇಡಿಕೆ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಗೋಲಿಬಾರ್‌ ನಡೆಸಿರುವುದು ಸರಿಯಲ್ಲ.

ಹೀಗಾಗಿ ಘಟನೆಯಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಸತ್ಯನಾರಾಯಣ್‌, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್‌, ಮುಖಂಡರಾದ ಮರಿಗೌಡ, ಪುಷ್ಪ ಅಮರ್‌ನಾಥ್‌, ಸುರೇಶ್‌ ಕುಮಾರ್‌ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

ಸಮಗ್ರ ತನಿಖೆಗೆ ಆಗ್ರಹ: ನಗರದ ನ್ಯಾಯಾಲಯದ ಎದುರು ಪ್ರತಿಭಟನೆ ನಡೆಸಿದ ನಾಯಕರ ಹಿತರಕ್ಷಣಾ ವೇದಿಕೆ ಕಾರ್ಯಕರ್ತರು, ತಾಲೂಕಿನ ಉದೂºರು ಗ್ರಾಮದ ಶಂಕರ್‌ ಆತ್ಮಹತ್ಯೆ ಪ್ರಕರಣ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು. ಪೊಲೀಸ್‌ ದೌರ್ಜನ್ಯದಿಂದ ಶಂಕರ್‌ ಮೃತಪಟ್ಟಿದ್ದು, ಪೊಲೀಸರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು. ವಿಚಾರಣೆ ನೆಪದಲ್ಲಿ ಆತನನ್ನು ಠಾಣೆಗೆ ಕರೆತಂದ ಪೊಲೀಸರು ಆತನ ಮೇಲೆ ಹಲ್ಲೆ ನಡೆಸಿ ಅವಮಾನಿಸಿದ್ದಾರೆ.

ಇದರಿಂದ ಮನನೊಂದ ಶಂಕರ್‌ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಸೂಕ್ತ ತನಿಖೆ ನಡೆಸುವ ಮೂಲಕ ಪೊಲೀಸರ ವಿರುದ್ಧ ಕ್ರಮಕೈ ಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವಕೀಲ ಪಡುವಾರಹಳ್ಳಿ ರಾಮಕೃಷ್ಣ, ವೇದಿಕೆ ದ್ಯಾವಪ್ಪನಾಯಕ, ಪ್ರಬಾಕರ ಹುಣಸೂರು, ಶ್ರೀಧರ್‌ ಚಾಮುಂಡಿಬೆಟ್ಟ, ತಿಮ್ಮನಾಯಕ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.