ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿ ಬಿಹಾರ ರಾಜ್ಯಪಾಲ ರಾಮ ನಾಥ್ ಕೋವಿಂದ್
Team Udayavani, Jun 19, 2017, 3:18 PM IST
ಹೊಸದಿಲ್ಲಿ : ರಾಷ್ಟ್ರಪತಿ ಹುದ್ದೆಗೆ ಭಾರತೀಯ ಜನತಾ ಪಕ್ಷ ತನ್ನ ಅಭ್ಯರ್ಥಿಯಾಗಿ ಬಿಹಾರ ರಾಜ್ಯಪಾಲ ರಾಮ ನಾಥ ಕೋವಿಂದ್ ಅವರನ್ನು ಆಯ್ಕೆಮಾಡಿದೆ ಎಂದು ಪಕ್ಷದ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಮನಮೋಹನ್ ಸಿಂಗ್ ಅವರೊಂದಿಗೆ ಔಪಚಾರಿಕ ಮಾತುಕತೆ ನಡೆಸಿ ರಾಮ ನಾಥ ಕೋವಿಂದ್ ಅವರಿಗೆ ಪಕ್ಷದ ಬೆಂಬಲವನ್ನು ಕೋರಿದ್ದಾರೆ.
ಪ್ರಧಾನಿ ಮೋದಿ ಹಾಗೂ ಇತರ ಉನ್ನತ ನಾಯಕರನ್ನು ಭೇಟಿಯಾದ ಬಳಿಕ ಪಕ್ಷಾಧ್ಯಕ್ಷ ಅಮಿತ್ ಶಾ ಅವರು ಭೇಟಿಯಾದ ಬಳಿಕ ಈ ಹೇಳಿಕೆಯನ್ನು ನೀಡಿದರು.
ವಿರೋಧ ಪಕ್ಷಗಳು ಇಂದು ಬೆಳಗ್ಗೆ ‘ಬಿಜೆಪಿ ರಾಷ್ಟ್ರಪತಿ ಹುದ್ದೆಗೆ ತನ್ನ ಅಭ್ಯರ್ಥಿಯನ್ನು ಪ್ರಕಟಿಸಬೇಕು; ಆಗ ಮಾತ್ರವೇ ಆ ಅಭ್ಯರ್ಥಿಗೆ ನಮ್ಮ ಬೆಂಬಲ ಇದೆಯೇ ಇಲ್ಲವೇ ಎಂಬುದನ್ನು ನಾವು ತೀರ್ಮಾನಿಸಲು ಸಾಧ್ಯವಾಗುವುದು’ ಎಂಬ ಖಡಕ್ ಸಂದೇಶವನ್ನು ರವಾನಿಸಿದ್ದವು.
ರಾಜ್ಯಪಾಲ ರಾಮ ನಾಥ ಕೋವಿಂದ್ ಅವರು 71ರ ಹರೆಯದ ಓರ್ವ ದಲಿತರಾಗಿದ್ದು ಕಳೆದ ಮೂರು ವರ್ಷಗಳಿಂದ ಅವರು ಬಿಹಾರ ರಾಜ್ಯಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಾಜಿ ವಕೀಲರಾಗಿದ್ದು ದಿಲ್ಲಿ ಹೈಕೋರ್ಟ್‌ನಲ್ಲಿ ವಕೀಲ ವೃತ್ತಿ ನಡೆಸಿ ಬಳಿಕ 1990ರ ದಶಕದ ಆರಂಭದ ವರೆಗೂ ಅವರು ಸುಪ್ರೀಂ ಕೋರ್ಟಿನಲ್ಲಿ ವಕೀಲ ವೃತ್ತಿ ಕೈಗೊಂಡಿದ್ದರು.
ಹಿರಿಯ ಬಿಜೆಪಿ ನಾಯಕರು ರಾಮ ನಾಥ ಕೋವಿಂದ್ ಅವರಿಗೆ ಬೆಂಬಲ ಯಾಚಿಸಲು ವಿವಿಧ ವಿರೋಧ ಪಕ್ಷಗಳನ್ನು ಸಂಪರ್ಕಿಸುತ್ತಿದ್ದಾರೆ.
ಒಂದೊಮ್ಮೆ ವಿರೋಧ ಪಕ್ಷಗಳು ತಮ್ಮದೇ ಅಭ್ಯರ್ಥಿಯನ್ನು ನಿಲ್ಲಿಸಿ ಚುನಾವಣೆ ನಡೆಯುವುದನ್ನು ಅನಿವಾರ್ಯಗೊಳಿಸಿದಲ್ಲಿ ಆಗ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ದಕ್ಷಿಣದ ಪ್ರಾದೇಶಿಕ ಪಕ್ಷಗಳ ನೆರವಿನಿಂದ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವ ಯೋಜನೆ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.