ಪೋಡಿ ಮುಕ್ತ ರಾಜ್ಯಕ್ಕಾಗಿ ಮರು ಸರ್ವೇ: ಕಾಗೋಡು
Team Udayavani, Jun 20, 2017, 10:18 AM IST
ವಿಧಾನಸಭೆ: ಇಡೀ ರಾಜ್ಯವನ್ನು ಹೊಸದಾಗಿ ಸರ್ವೇ ಮಾಡಿಸಿ, ಪೋಡಿ ಮುಕ್ತ ಮಾಡುವ ಗುರಿ ಹೊಂದಲಾಗಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ. ಸೋಮವಾರ ಸದನದಲ್ಲಿ ಬೇಡಿಕೆ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ಸರ್ಕಾರಿ ಸೇರಿದಂತೆ ರಾಜ್ಯದ ಎಲ್ಲ ಭೂಮಿಗಳನ್ನು ಹೊಸತಾಗಿ ಸರ್ವೇ ಮಾಡಲಾಗುವುದು ಎಂದರು.
ಬ್ರಿಟಿಷರ ಕಾಲದಲ್ಲಿ ಸರ್ವೇ ಮಾಡಲಾಗಿತ್ತು.
ಈಗ ಹೊಸದಾಗಿ ಭೂಮಿ ಮಂಜೂರು ಮಾಡಿ, ಬಗರ್ ಹುಕುಂನಲ್ಲಿ ಹಂಚಿಕೆ ಮಾಡಲಾಗಿದೆ. ಇನ್ನು ಕುಟುಂಬಗಳಲ್ಲೂ ಆಸ್ತಿ ಹಂಚಿಕೆ ಮಾಡಿಕೊಂಡಿರುವುದರಿಂದ ಸರ್ವೇ ನಂಬರ್‌ಗಳಲ್ಲಿ ಸಾಕಷ್ಟು ವ್ಯತ್ಯಾಸವಾಗಿರುತ್ತದೆ. ಅದನ್ನು ಸರಿಪಡಿಸಲು ಸಂಪೂರ್ಣ ಸರ್ವೇ ಮಾಡಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ಅಗತ್ಯ ಸಿಬ್ಬಂದಿ ಮತ್ತು ಅಧಿಕಾರಿಗಳ ಕೊರತೆ ಹಿನ್ನೆಲೆಯಲ್ಲಿ ಸಂಪೂರ್ಣ ಸರ್ವೇ ಮಾಡಲು ಸಾಕಷ್ಟು ಸಿದ್ಧತೆ ಮಾಡಿಕೊಳ್ಳಬೇಕಿದೆ. ಒಂದು ಸಾವಿರ ಸರ್ವೇಯರ್‌ಗಳನ್ನು ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ತಕ್ಷಣಕ್ಕೆ 300 ಮಂದಿ ನಿವೃತ್ತ ಸರ್ವೇಯರ್‌ಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.