ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ 85ನೇ ವಾರ್ಷಿಕ ಮಹಾಸಭೆ


Team Udayavani, Jun 20, 2017, 3:01 PM IST

18-Mum02b.jpg

ಮುಂಬಯಿ: ಬಿಲ್ಲವರು ನಾವೆಲ್ಲ ಒಂದೇ. ನಾವೆಲ್ಲರೂ ಬಂಧು ಗಳೆಂಬ ಭಾವೈಕ್ಯದೊಂದಿಗೆ ಸಮೃದ್ಧ ಸಮಾಜ ನಿರ್ಮಾಣವೇ ನಮ್ಮ ಉದ್ದೇಶ ವಾಗಿದೆ. ಬಿಲ್ಲವರ ಜಾಗೃತಿ ಬಳಗವು ಬಿಲ್ಲವರ ಅಸೋಸಿಯೇಶನ್‌ನೊಂದಿಗೆ ವಿಲೀನಗೊಳ್ಳುವ ಪ್ರಕ್ರಿಯೆಯು ಒಮ್ಮನ ಸ್ಸಿನಿಂದ ನಡೆಯುತ್ತಿದೆೆ. ಈಗಾಗಲೆ ಗುರುತು ಪತ್ರಿಕೆಯ ಚಂದಾದಾರರಿಗೆ ಅಕ್ಷಯ ಪತ್ರಿಕೆಯನ್ನು ನೀಡಲಾಗುತ್ತಿದೆ. ಬರುವ ವಾರ್ಷಿಕ ಮಹಾಸಭೆಯನ್ನು ಎರಡೂ ಸಂಸ್ಥೆಗಳು ಒಟ್ಟಾಗಿ ನಡೆಸಬೇಕು. ಇದು ನಮಗೆಲ್ಲರಿಗೂ ಸಂತಸದ ವಿಷಯ ವಾಗಿದೆ. ನಮ್ಮ ಸಮಾಜದ ಹಿತಚಿಂತಕರೂ  ಮಾರ್ಗದರ್ಶಕರೂ ಆದ ಜಯ ಸಿ. ಸುವರ್ಣ ಅವರ ಮಾರ್ಗದರ್ಶನ ನಮಗೆ ಸದಾ ಇದೆ ಎಂದು ಬಿಲ್ಲವರ ಅಸೋಸಿಯೇಶನ್‌ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್‌ ಅವರು  ಹೇಳಿದರು.

ಜೂ. 18ರಂದು ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ಭವನದಲ್ಲಿ ನಡೆದ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ 85ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತ ನಾಡಿದ ಅವರು, ನಮ್ಮ ಹಿರಿಯರು ಸಮಾಜದ ಸದುದ್ದೇಶದಿಂದ ಸ್ಥಾಪಿಸಿದ ಈ ಸಂಸ್ಥೆಯನ್ನು ಪ್ರಾಮಾಣಿಕ ಸೇವೆ ಯೊಂದಿಗೆ ಮುನ್ನಡೆಸೋಣ. ನಮ್ಮಿಂದ ತುಂಬಾ ಅಭಿವೃದ್ಧಿಪರ ಕಾರ್ಯಗಳಾಗಿವೆ. ಇನ್ನಷ್ಟು ಆಗಬೇಕಿದೆ. ಅದಕ್ಕಾಗಿ ಎಲ್ಲರ ಸಹಕಾರದ ಅಗತ್ಯವಿದೆ. ಗುರು ನಾರಾಯಣ ರಾತ್ರಿಶಾಲೆಯು ಕಳೆದ ಹಲವಾರು ವರ್ಷಗಳಿಂದ ನಿರಂತರ ಶೇ. 100 ಫಲಿತಾಂಶ ತರುತ್ತಿದ್ದು, ಇದು ನಾವು ಶಿಕ್ಷಣಕ್ಕೆ ನೀಡುವ ಮಹತ್ವವನ್ನು ಬಿಂಬಿಸುತ್ತದೆ ಎಂದು ನುಡಿದರು.

ಕೊನೆಯುಸಿರಿರುವ‌ವರೆಗೆ ಸಮಾಜ ಸೇವೆ 
ಬಿಲ್ಲವರ ಅಸೋಸಿಯೇಶನ್‌ ಇದರ ಮಾರ್ಗದರ್ಶಕ ಜಯ ಸಿ. ಸುವರ್ಣ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿ, ಕಳೆದ ಹಲವು ವರ್ಷಗಳಿಂದ ಅಸೋಸಿಯೇಶನ್‌ ನಿರಂತರ ಪ್ರಗತಿಪಥದತ್ತ ಸಾಗುತ್ತಿದೆ. ನಾವು ಯಾವಾಗಲೂ ಒಗ್ಗಟ್ಟನ್ನು ಪ್ರೋತ್ಸಾಹಿ ಸುತ್ತೇವೆ ಮತ್ತು ಬೆಂಬಲಿಸುತ್ತೇವೆ. ಅಸೋಸಿಯೇಶನ್‌ನ ಆರ್ಥಿಕ ಸಂಸ್ಥೆ ಭಾರತ್‌ ಬ್ಯಾಂಕ್‌ ನೂರು ಶಾಖೆಗಳನ್ನು ಹೊಂದಿ, 15 ಸಾವಿರ ಕೋ. ರೂ. ವ್ಯವಹಾರ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಹಿರಿಯರ  ಮಾರ್ಗ ದರ್ಶನವನ್ನು ನಾವೆಂದೂ ಮರೆಯ ಬಾರದು. ಎಲ್ಲರ ಸಹಕಾರದಿಂದ ನನ್ನ ಕೊನೆಯುಸಿರಿರುವ‌ವರೆಗೆ ಸಮಾಜ ಸೇವೆ ಯನ್ನು ಮಾಡುತ್ತೇನೆ ಎಂದು ಹೇಳಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಗುರುನಾರಾಯಣ ಮೂರ್ತಿಗೆ ಜಯ ಸಿ. ಸುವರ್ಣ ಅವರು ಹಾರಾರ್ಪಣೆ ಗೈದರು. ಅಸೋಸಿಯೇಶನ್‌ನ ಗೌರವ ಕಾರ್ಯದರ್ಶಿ ಧರ್ಮಪಾಲ ಜಿ. ಅಂಚನ್‌ ಅವರು ಪದಾಧಿಕಾರಿಗಳನ್ನು ವೇದಿಕೆಗೆ ಬರಮಾಡಿಕೊಂಡು ಪ್ರಾಸ್ತಾವಿಕ ವಾಗಿ ಮಾತನಾಡಿ, ಸಂಸ್ಥೆಯ  ಸಾಧನೆಗಳನ್ನು ವಿವರಿಸಿದರು. ಗೌರವ ಜತೆ ಕಾರ್ಯದರ್ಶಿ ಧನಂಜಯ ಎಸ್‌. ಕೋಟ್ಯಾನ್‌  ವರದಿ ಮಂಡಿಸಿದರು. ಜತೆ ಕಾರ್ಯದರ್ಶಿ ಆಶಾಲತಾ ಎಸ್‌. ಕೋಟ್ಯಾನ್‌ ವಿಶೇಷ ಮಹಾಸಭೆ  ವರದಿ ಮಂಡಿಸಿದರು.

ಸಭಿಕರ ಪರವಾಗಿ ಮಾತನಾಡಿದ ಅಸೋಸಿಯೇಶನ್‌ನ ಮಾಜಿ ಅಧ್ಯಕ್ಷ ಎಲ್‌. ವಿ. ಅಮೀನ್‌ ಅವರು, ಸಮಾಜದ ಅಭಿವೃದ್ಧಿಯ ಕೆಲಸವಾಗುವಾಗ ಎಲ್ಲರೂ ಒಂದಾಗಿರಬೇಕು. ಅದಕ್ಕಾಗಿ ನಾನು ಮತ್ತು ಇತರ ಗಣ್ಯರು ಕೆಲವು ವರ್ಷಗಳಿಂದ ನಿರಂತರವಾಗಿ ಶ್ರಮಿಸುತ್ತಿದ್ದೇನೆ. ಅದು ಈಗ ಯಶಸ್ವಿಯಾಗಿದೆ ಎಂಬುದಕ್ಕೆ ಸಂತೋಷವಾಗುತ್ತಿದೆ ಎಂದರು.

ಬಿಲ್ಲವ ಜಾಗೃತಿ ಬಳಗದ ಅಧ್ಯಕ್ಷ ಎನ್‌. ಟಿ. ಪೂಜಾರಿ ಅವರು ಮಾತನಾಡಿ, ಬಿಲ್ಲವರ ಅಸೋಸಿಯೇಶನ್‌ ಹಾಗೂ ಬಿಲ್ಲವ ಜಾಗೃತಿ ಬಳಗವು ಒಂದಾಗುವ ಕ್ಷಣ ಇದೀಗ ಒದಗಿ ಬಂದಿದೆ. ಈ ಕಾರ್ಯವು ಸದ್ಯದಲ್ಲಿಯೆ ಪೂರ್ಣಗೊಳ್ಳಲಿದೆ. ಮುಂದಿನ ಮಹಾಸಭೆಯನ್ನು ನಾವು ಒಟ್ಟಾಗಿ ನಡೆಸುವ ಎಂದು ನುಡಿದರು.

ಸಭಿಕರ ಪರವಾಗಿ ಹರಿಶ್ಚಂದ್ರ ಅಮೀನ್‌, ಶ್ರೀನಿವಾಸ ಪೂಜಾರಿ, ಶ್ರೀದೇವಿ ಮಕ್ಕುಂಜೆ, ಎಚ್‌. ವಿ. ಸುವರ್ಣ, ಶಂಕರ ಸುವರ್ಣ, ಜಿ. ಎಂ. ಕೋಟ್ಯಾನ್‌, ಎನ್‌. ಟಿ. ಪೂಜಾರಿ, ಚಂದ್ರಶೇಖರ ಪೂಜಾರಿ, ಚಂದಯ್ಯ ಪೂಜಾರಿ, ಎಂ. ಎನ್‌. ಸನಿಲ್‌, ಜಯಕರ ಡಿ. ಪೂಜಾರಿ, ವರದ ಉಳ್ಳಾಲ್‌, ಸಂತೋಷ್‌ ಪೂಜಾರಿ, ಜಯಂತ್‌ ನಡುಬೈಲು, ರವಿ ಪೂಜಾರಿ ಚಿಲಿಂಬಿ ಮೊದಲಾದವರು ಮಾತನಾಡಿದರು.

ಭಾರತ್‌ ಬ್ಯಾಂಕಿನ ಕಾರ್ಯಾಧ್ಯಕ್ಷ ಸಿಇಒ ಸಿ. ಆರ್‌. ಮೂಲ್ಕಿ, ವಿದ್ಯಾ ಉಪಸಮಿತಿಯ ಕಾರ್ಯಾಧ್ಯಕ್ಷ ಬನ್ನಂಜೆ ರವೀಂದ್ರ ಅಮೀನ್‌, ಶ್ರೀ ನಾರಾಯಣ ಗುರು ಕೋ. ಆಪರೇಟಿವ್‌ ಬ್ಯಾಂಕಿನ ಹರಿಶ್ಚಂದ್ರ ಅಮೀನ್‌, ಸಮಾಜ ಸೇವಕ ಉಮೇಶ್‌ ಕರ್ಕೇರ ಅವರನ್ನು ಗೌರವಿಸಲಾಯಿತು.

ಗುರುನಾರಾಯಣ ರಾತ್ರಿಶಾಲೆಯಲ್ಲಿ ಶೇ. 91 ಅಂಕಗಳನ್ನು ಪಡೆದು ರಾಜ್ಯದಲ್ಲಿ ರಾತ್ರಿಶಾಲೆಗಳಲ್ಲಿ ಮೊದಲ ಸ್ಥಾನ ಪಡೆದ ಪ್ರೀತಿ ಎಸ್‌. ಮೂಲ್ಯ, ಅತ್ಯಧಿಕ ಅಂಕಗಳನ್ನು ಪಡೆದ ಶ್ರೀದೇವಿ ಮಂಕುಂಜೆ, ಪ್ರಿಯಾಂಕಾ ಎಸ್‌. ವಿರಾಂಜ್‌ದಾರ್‌ ಅವರನ್ನು ಗಣ್ಯರು ಸಮ್ಮಾನಿಸಿದರು.

ವೇದಿಕೆಯಲ್ಲಿ ಅಸೋಸಿಯೇಶನ್‌ನ ಉಪಾಧ್ಯಕ್ಷರಾದ ಡಾ| ಯು. ಧನಂಜಯ ಕುಮಾರ್‌, ಶಂಕರ್‌ ಡಿ. ಪೂಜಾರಿ, ಭಾಸ್ಕರ ವಿ. ಬಂಗೇರ, ರಾಜಾ ವಿ. ಸಾಲ್ಯಾನ್‌, ಜತೆ ಕಾರ್ಯದರ್ಶಿ ಪ್ರೇಮನಾಥ್‌ ಜಿ. ಕೋಟ್ಯಾನ್‌, ಗೌರವ ಪ್ರಧಾನ ಕೋಶಾಧಿಕಾರಿ ಮಹೇಶ್‌ ಸಿ. ಪೂಜಾರಿ, ಗೌರವ ಜತೆ ಕೋಶಾಧಿಕಾರಿಗಳಾದ ರಾಜೇಶ್‌ ಕೆ. ಬಂಗೇರ, ಶಿವರಾಮ ಎಸ್‌. ಪೂಜಾರಿ, ಸದಾಶಿವ ಎ. ಕರ್ಕೇರ, ಮೋಹನ್‌ ಡಿ. ಪೂಜಾರಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಕುಂತಳಾ ಕೆ. ಕೋಟ್ಯಾನ್‌, ಸೇವಾದಳದ ದಳಪತಿ ಗಣೇಶ್‌ ಕೆ. ಪೂಜಾರಿ ಹಾಗೂ ವಿವಿಧ ಉಪಸಮಿತಿಗಳ ಕಾರ್ಯಾಧ್ಯಕ್ಷರುಗಳು, ವಿವಿಧ ಸ್ಥಳೀಯ ಸಮಿತಿಗಳ ಕಾರ್ಯಾಧ್ಯಕ್ಷರು ಉಪಸ್ಥಿತರಿದ್ದರು.

ಮಹಾಸಭೆಯಲ್ಲಿ ಲೆಕ್ಕಪರಿಶೋಧಕ ರಾಗಿ ಅಶ್ವಜಿತ್‌ ಹೆಜಮಾಡಿ ಅವರನ್ನು ನೇಮಿಸಲಾಯಿತು. ಗೌರವ ಪ್ರಧಾನ ಕಾರ್ಯದರ್ಶಿ ಹರೀಶ್‌ ಜಿ. ಸಾಲ್ಯಾನ್‌ ವಂದಿಸಿದರು. ಸಭೆಯಲ್ಲಿ ಶ್ರೀಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ಲ್‌ ದೇಯಿ-ಬೈದೆತಿ ಮೂಲಸ್ಥಾನ ಪುನರುತ್ಥಾದನ ಮನವಿ ಪತ್ರವನ್ನು ಜಯ ಸಿ. ಸುವರ್ಣ  ಬಿಡು ಗಡೆಗೊಳಿಸಿದರು. 

ಚಿತ್ರ-ವರದಿ : ಸುಭಾಶ್‌ ಶಿರಿಯಾ

ಟಾಪ್ ನ್ಯೂಸ್

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

13-thirthahalli

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿ ಬಿಟ್ಟು ವ್ಯಕ್ತಿ ನದಿಗೆ; ಶಂಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

13(2)

Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.