ಧೈರ್ಯವಿದ್ದರೆ ಹಿಂದೂ  ನಾಯಕರನ್ನು ಬಂಧಿಸಲಿ: ನಳಿನ್‌ ಕುಮಾರ್‌ 


Team Udayavani, Jun 20, 2017, 4:46 PM IST

nalin.jpg

ಮಂಗಳೂರು: ಹಿರಿಯ ಆರ್‌ಎಸ್‌ಎಸ್‌ ನಾಯಕ ಡಾ| ಪ್ರಭಾಕರ ಭಟ್‌ ಅವರನ್ನು ಬಂಧಿಸು ವಂತೆ ಸಚಿವ ಬಿ. ರಮಾನಾಥ ರೈ ಅವರು ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಕಾರಿ ಗಳ ಮೇಲೆ ಒತ್ತಡ ಹಾಕಿರುವುದನ್ನು ಕೆಲವು ಕಾಂಗ್ರೆಸ್‌ ನಾಯಕರು ಸಮರ್ಥಿಕೊಳ್ಳುತ್ತಿರುವುದು ನಾಚಿಕೆಗೇಡಿನ ವಿಚಾರ.ಸಚಿವರಿಗೆ ಧೈರ್ಯವಿದ್ದರೆ ಹಿಂದೂ ನಾಯಕರನ್ನು ಬಂಧಿಸಲಿ ಎಂದು ಸಂಸದ ನಳಿನ್‌ ಕುಮಾರ್‌ಕಟೀಲು ಹೇಳಿದ್ದಾರೆ.

ಹಿಂದೂ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿರುವ ಡಾ| ಪ್ರಭಾಕರ ಭಟ್‌ ಅವರನ್ನು ಏಕವಚನದಿಂದ ನಿಂದಿಸಿರುವ ಸಚಿವರ ದರ್ಪಕ್ಕೆ ಜಿಲ್ಲೆಯ ಜನತೆ ಆಕ್ರೋಶಿತರಾಗಿದ್ದಾರೆ. ಅಲ್ಪಸಂಖ್ಯಾಕರನ್ನು ಓಲೈಸುವ ಏಕೈಕ ಉ¨ªೇಶದಿಂದ ಸಚಿವರು ಹಿಂದೂ ನಾಯಕರ ಬಂಧನಕ್ಕೆ ಒತ್ತಡ ಹೇರುತ್ತಿದ್ದಾರೆ. ಸಚಿವರ ಒತ್ತಡಕ್ಕೆ ಮಣಿದು ವಿನಾ ಕಾರಣ ಡಾ| ಪ್ರಭಾಕರ ಭಟ್‌ ವಿರುದ್ಧ ಕೇಸು ದಾಖಲಿಸಿದರೆ ಮುಂದೆ ನಡೆಯಬಹುದಾದ ಅನಾಹುತಗಳಿಗೆ ಸಚಿವರೇ ನೇರ ಹೊಣೆಯಾಗಲಿದ್ದಾರೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸಚಿವ ರೈ ವಜಾಕ್ಕೆ ಕಾರ್ಣಿಕ್‌ ಆಗ್ರಹ
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ರಾಜಕೀಯ ಹಸ್ತಕ್ಷೇಪವೇ ಕಲ್ಲಡ್ಕದ ಕೋಮು ಗಲಭೆಗೆ ಹಾಗೂ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿರುವುದು ವಾಸ್ತವ ಸಂಗತಿಯಾಗಿದೆ. ಈ ಹಿಂದೆ ಮೊದಲ ಬಾರಿಗೆ ಶಾಸಕನಾಗಿದ್ದಾಗ ಬಂಟ್ವಾಳದಲ್ಲಿ ಡಾ| ಪ್ರಭಾಕರ್‌ ಭಟ್‌ ಅವರನ್ನು ಅಟ್ಟಾಡಿಸಿ ಓಡಿಸಿದ್ದೆ ಎಂಬ ಅವರ ಆಕ್ಷೇಪಾರ್ಹ ಹೇಳಿಕೆ ಸಚಿವರ ಕ್ರಿಮಿನಲ್‌ ಪ್ರವೃತ್ತಿಯನ್ನು ತೋರಿಸುತ್ತದೆ. ಇಂತಹ ಪ್ರವೃತ್ತಿಯ ಉಸ್ತುವಾರಿ ಸಚಿವರು ಕರ್ನಾಟಕ ಸರಕಾರದ ಜವಾಬ್ದಾರಿಯುತ ಸ್ಥಾನದಲ್ಲಿರುವುದು ಸೂಕ್ತವಲ್ಲ. ಮುಖ್ಯಮಂತ್ರಿಯವರು ಕೂಡಲೇ ರಮಾನಾಥ ರೈ ಅವರಿಂದ ರಾಜೀನಾಮೆ ಪಡೆಯಬೇಕು ಇಲ್ಲವೆ ಸಂಪುಟದಿಂದ ವಜಾ ಮಾಡ ಬೇಕು ಎಂದು ವಿಧಾನ ಪರಿಷತ್‌ ವಿಪಕ್ಷ ಮುಖ್ಯ ಸಚೇತಕ ಕ್ಯಾ| ಗಣೇಶ್‌ ಕಾರ್ಣಿಕ್‌ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ಯಾವುದೇ ದಾಖಲೆಗಳಿಲ್ಲದೆ ಡಾ| ಪ್ರಭಾಕರ್‌ ಭಟ್‌ ಅವರನ್ನು ಬಂಧಿಸುವಂತೆ, ಅವರ ವಿರುದ್ಧ ಸೆಕ್ಷನ್‌ 307 ದಾಖಲಿಸುವಂತೆ ಪೊಲೀಸ್‌ಅಧಿಕಾರಿಗೆ ತಾಕೀತು ಮಾಡುವ ಉಸ್ತುವಾರಿ ಸಚಿವರ ವರ್ತನೆ ಸರಿಯಲ್ಲ ಎಂದಿದ್ದಾರೆ.

ಜನತೆಗೆ ಆಘಾತ: ಕೃಷ್ಣ ಪಾಲೆಮಾರ್‌ ಹಿಂದೂ ನಾಯಕರ ಮೇಲೆ ಕೇಸು ದಾಖಲಿಸಿ ಬಂಧಿಸುವಂತೆ ಪೊಲೀಸ್‌ ವರಿಷ್ಠಾಧಿಕಾರಿಗೆ ಒತ್ತಡ ಹೇರುವ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರ ನಡವಳಿಕೆಯಿಂದ ಜಿಲ್ಲೆಯ ಜನತೆಗೆ ಆಘಾತವಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರು ಈ ರೀತಿ ಅಧಿಕಾರ ದುರ್ಬಳಕೆ ಮಾಡುವುದು ಸರಿಯಲ್ಲ ಎಂದು ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್‌ ಹೇಳಿದ್ದಾರೆ. ಸಮಾಜದಲ್ಲಿ ಗೌರವದ ಸ್ಥಾನ ಹೊಂದಿ ರುವ ಡಾ| ಪ್ರಭಾಕರ ಭಟ್‌ ವಿರುದ್ಧ ಸಚಿವರು ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ. ಪೊಲೀಸರು ಒತ್ತಡಕ್ಕೆ ಮಣಿಯದೆ ನಿಷ್ಪಕ್ಷವಾಗಿ ಕಾರ್ಯನಿರ್ವಹಿಸಬೇಕು. ಸಚಿವರು ವಿವೇಚನೆಯಿಂದ ವರ್ತಿಸಬೇಕು ಎಂದು ಪಾಲೆಮಾರ್‌ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.

ಅಹಂಕಾರದ ಪರಮಾವಧಿ
ನೇತ್ರಾವತಿ ಹೋರಾಟಗಾರರನ್ನು ಬಂಧಿಸು ವಂತೆ ಉಸ್ತುವಾರಿ ಸಚಿವರು ಹೇಳಿರುವುದು ಅಹಂಕಾರದ ಪರಮಾವಧಿಯಾಗಿದೆ. ಸಂಘ ಪರಿವಾರದ ಮನಸ್ಥಿತಿಯ ಪೊಲೀಸರನ್ನು ಎತ್ತಂಗಡಿ ಮಾಡಿಲ್ಲ ಯಾಕೆಂದು ಸಚಿವರು ಪ್ರಶ್ನಿಸಿದ್ದಾರೆ. ಕಾಂಗ್ರೆಸ್‌ ತಾಳಕ್ಕೆ ತಕ್ಕಂತೆ ಪೊಲೀಸ್‌ ಇಲಾಖೆ ಕುಣಿಯಬೇಕೆಂದು ಬಯಸುವ ಇಂತಹ ಸಚಿವರು ಇರುವ ತನಕ ಶಾಂತಿ ನೆಲೆಸಲು ಸಾಧ್ಯವೇಎಂದು ನಳಿನ್‌ ಕುಮಾರ್‌ ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.