ವಿಜಯಲಕ್ಷ್ಮಿ ಶಿಬರೂರುಗೆ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ
Team Udayavani, Jun 21, 2017, 12:36 PM IST
ಕಾರವಾರ: ಇಲ್ಲಿನ ಜರ್ನಲಿಸ್ಟ್ ಅಸೋಸಿಯೇಶನ್ ಜಿಲ್ಲಾ ಘಟಕ ಕೊಡಮಾಡುವ ಪ್ರತಿಷ್ಠಿತ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿಗೆ ಸುವರ್ಣ ನ್ಯೂಸ್ ತನಿಖಾ ವರದಿ ವಿಭಾಗದ ಸಂಪಾದಕಿ ವಿಜಯಲಕ್ಷ್ಮಿ ಶಿಬರೂರು ಆಯ್ಕೆಯಾಗಿದ್ದಾರೆ.
ಪತ್ರಕರ್ತ ದೀಪಕ್‌ಕುಮಾರ್ ಶೇಣಿ, ಕಸಾಪ ತಾಲೂಕಾಧ್ಯಕ್ಷ ನಾಗರಾಜ್ ಹರಪನಹಳ್ಳಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಅನು ಕಳಸ ಅವರಿದ್ದ ಸಮಿತಿ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಅವರನ್ನು ಆಯ್ಕೆ ಮಾಡಿದೆ ಎಂದು ಜರ್ನಲಿಸ್ಟ್ ಅಸೋಸಿಯೇಶನ್ ಜಿಲ್ಲಾ ಘಟಕದ ಅಧ್ಯಕ್ಷ ಮಂಜು ಕಡತೋಕ ತಿಳಿಸಿದ್ದಾರೆ.
ಕಳೆದ ವರ್ಷದಿಂದ ಕನ್ನಡ ಪತ್ರಿಕೋದ್ಯಮದ ಹರಿಕಾರ ಜರ್ಮನ್ ಮೂಲದ ಹರ್ಮನ್ ಮೊಗ್ಲಿಂಗ್ ಹೆಸರಲ್ಲಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಜು.1ರಂದು ಕಾರವಾರದಲ್ಲಿ ನಡೆವ ಪತ್ರಿಕಾ ದಿನಾಚರಣೆಯಲ್ಲಿ 5000 ರೂ. ನಗದು, ಪ್ರಶಸ್ತಿಪತ್ರ ಹಾಗೂ ಫಲಕ ಒಳಗೊಂಡಿರುವ ಮೊಗ್ಲಿಂಗ್ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಮಂಗಳೂರಿನ ಮಂಗಳ ಗಂಗೋತ್ರಿಯಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದ ವಿಜಯಲಕ್ಷ್ಮಿ ಕಟೀಲು ಸಮೀಪದ ಶಿಬರೂರಿನವರು. 1998ರಿಂದ ಜನವಾಹಿನಿ ಪತ್ರಿಕೆ ಮೂಲಕ ವೃತ್ತಿ ಆರಂಭಿಸಿದರು. ಬಳಿಕ ಮಂಗಳೂರು ಆಕಾಶವಾಣಿ, ಸಂಯುಕ್ತ ಕರ್ನಾಟಕ, ಈ ಟಿವಿ ಕನ್ನಡ, ಟಿವಿ9ನಲ್ಲೂ ಕೆಲಸ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
Basavaraj Horatti: ಸಂವಿಧಾನ ಸ್ವಾತಂತ್ರ್ಯ ಭಾರತದ ಮೈಲಿಗಲ್ಲು: ಹೊರಟ್ಟಿ
ಲಾಕಪ್‌ಡೆತ್: ಹೆಡ್ ಕಾನ್‌ಸ್ಟೆಬಲ್ ಸೇರಿ ನಾಲ್ವರು ಪೊಲೀಸರಿಗೆ 7 ವರ್ಷ ಜೈಲು
Belagavi: ಯುವಕನ ಮೇಲೆ ಗುಂಡಿನ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ
Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್ ಜಾರಕಿಹೊಳಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್
MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ
Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ
Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.