ರಾಷ್ಟ್ರೀಯ ಕಾನೂನು ವಿವಿ ಪ್ರವೇಶದಲ್ಲಿ ಮೀಸಲು
Team Udayavani, Jun 21, 2017, 3:02 PM IST
ವಿಧಾನಸಭೆ: ಭಾರತೀಯ ರಾಷ್ಟ್ರೀಯ ಕಾನೂನು ವಿಶ್ವ ವಿದ್ಯಾಲಯದಲ್ಲಿ ಪ್ರವೇಶ ಪಡೆಯಲು ರಾಜ್ಯದ ವಿದ್ಯಾರ್ಥಿಗಳಿಗೆ ಶೇ.50ರಷ್ಟು ಮೀಸಲಾತಿ ನೀಡಲು ಭಾರತೀಯ ರಾಷ್ಟ್ರೀಯ ಕಾನೂನು ವಿವಿ ವಿಧೇಯಕಕ್ಕೆ ತಿದ್ದುಪಡಿ ತರಲು ವಿಧಾನಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.
ಕಾನೂನು ಸಚಿವ ಟಿ.ಬಿ. ಜಯಚಂದ್ರ ಬದಲಿಗೆ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ವಿಧೇಯಕ ಮಂಡಿಸಿ, ರಾಜ್ಯದಲ್ಲಿರುವ ರಾಷ್ಟ್ರೀಯ ಕಾನೂನು ವಿವಿಯಲ್ಲಿ ರಾಜ್ಯದ ನಿವಾಸಿಗಳಿಗೆ ಪ್ರವೇಶ ನಿರೀಕ್ಷಿತ ಮಟ್ಟದಲ್ಲಿ ದೊರೆಯುತ್ತಿಲ್ಲ. ಹೀಗಾಗಿ ಕರ್ನಾಟಕದಲ್ಲಿ ಕನಿಷ್ಠ ಹತ್ತು ವರ್ಷ ವಾಸವಾಗಿರುವ ಪಾಲಕರ ಮಕ್ಕಳು ಅಥವಾ ಕನಿಷ್ಠ ಐದು ವರ್ಷ ಕರ್ನಾಟಕದಲ್ಲಿ ಅಧ್ಯಯನ ಮಾಡಿದವರನ್ನು ರಾಜ್ಯದ ನಿವಾಸಿ ಎಂದು ಪರಿಗಣಿಸಿ, ಪ್ರವೇಶ ಪಡೆಯಲು ಶೇ.30 ರಷ್ಟು ಮೀಸಲಾತಿ ಕಲ್ಪಿಸಲು ವಿಧೇಯಕ ತಿದ್ದುಪಡಿ ತರಲಾಗುತ್ತಿದೆ ಎಂದು ಹೇಳಿದರು. ಮಧ್ಯಪ್ರದೇಶ, ಉತ್ತರ ಪ್ರದೇಶ, ತೆಲಂಗಾಣ, ತಮಿಳುನಾಡು ಸೇರಿ ಅನೇಕ ರಾಜ್ಯಗಳು ಸ್ಥಳೀಯ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲು ಮೀಸಲಾತಿ ಕಲ್ಪಿಸಿವೆ. ಅದೇ ಮಾದರಿಯಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ತಿದ್ದುಪಡಿ ತರಲಾಗುತ್ತಿದೆ ಎಂದು ತಿಳಿಸಿದರು.
ಅವಧಿ ಹೆಚ್ಚಿಸಲು ಸಲಹೆ: ವಿಧೇಯಕದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ಸದಸ್ಯ ಕೆ.ಜಿ. ಬೋಪಯ್ಯ, ರಾಜ್ಯದ ನಿವಾಸಿಗಳೆಂದು ಪರಿಗಣಿಸಲು ನಿಗದಿ ಪಡಿಸಿರುವ ಅವಧಿ ಹತ್ತು ವರ್ಷ ಕಡಿಮೆಯಾಯಿತು. ಅದನ್ನು ಹೆಚ್ಚಿಸಬೇಕು. ಇಲ್ಲವೇ ವಿದ್ಯಾರ್ಥಿ ರಾಜ್ಯದಲ್ಲಿಯೇ ಹುಟ್ಟಿರಬೇಕು ಎಂದು ನಿಬಂಧನೆ ಹೇರಬೇಕೆಂದು ಸಲಹೆ ನೀಡಿದರು. ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ರಾಜ್ಯದ ವಿದ್ಯಾರ್ಥಿಗಳಿಗೆ ಶೇ.30 ಬದಲು 50ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿದರು. ಅವರ ಸಲಹೆಗೆ ಸ್ಪಂದಿಸಿದ ರಾಯರೆಡ್ಡಿ, ರಾಜ್ಯದ ವಿದ್ಯಾರ್ಥಿಗಳಿಗೆ ಶೇ.50ರಷ್ಟು ಮೀಸಲಾತಿ ಹಾಗೂ ರಾಜ್ಯದಲ್ಲಿ ಕನಿಷ್ಠ 7 ವರ್ಷ ಅಧ್ಯಯನ ಮಾಡಿದವರಿಗೆ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲು ತಿದ್ದುಪಡಿ ತರಲಾಗುವುದು ಎಂದು ತಿಳಿಸಿದರು. ನಂತರ ಸದನ ಸರ್ವಾನುಮತದಿಂದ ಒಪ್ಪಿಗೆ ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.